ಶಿವಮೊಗ್ಗ: ಮಹಾರಾಷ್ಟ್ರ ಮುಖ್ಯಮಂತ್ರಿ ಆಕಾಶದಿಂದ ಇಳಿದು ಬಂದಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು.
ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಂಇಎಸ್ ಪುಂಡರು ಪುಂಡಾಟಿಕೆ ನಡೆಸಿದ್ದರೂ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕನ್ನಡಿಗರು ಮರಾಠಿಗರ ಮೇಲೆ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿಯವರು ಮಧ್ಯಪ್ರವೇಶಿಸುವಂತೆ ಟ್ವೀಟ್ ಮಾಡಿದ್ದಾರೆ. ಯಾರು ವಿಧ್ವಂಸಕ ಕೃತ್ಯ ನಡೆಸಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏನು ಆಕಾಶದಿಂದ ಇಳಿದು ಬಂದಿಲ್ಲ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಶಿವಾಜಿ ಪ್ರತಿಮೆಗೆ ಮಸಿ ಬಳಿದ ಕೃತ್ಯ ಸಹನೀಯವಲ್ಲ: ಕೇಂದ್ರ ಸಚಿವ ಜೋಶಿ
Advertisement
Advertisement
ರಾಜ್ಯದಲ್ಲಿ ಕೆಲವು ಪಟ್ಟಾಭದ್ರ ಹಿತಾಸಕ್ತಿಗಳು ಗೊಂದಲ ಸೃಷ್ಟಿ ಮಾಡುವ ಪ್ರಯತ್ನ ನಡೆಸುತ್ತಿವೆ. ಇಂತಹ ವಿಧ್ವಂಸಕ ಕೃತ್ಯ ನಡೆಸುತ್ತಿರುವವರಿಗೆ ಸರ್ಕಾರ ಸರಿಯಾದ ಉತ್ತರ ಕೊಡುತ್ತದೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ತಿಳಿಸಿದರು.
Advertisement
ಇಂತಹ ಕುತಂತ್ರ ಮಾಡುತ್ತಿರುವ ವ್ಯಕ್ತಿಗಳ ಬಗ್ಗೆ ಸರ್ಕಾರ ಎಚ್ಚರಿಕೆಯಿಂದ ಇದೆ. ರಾಜ್ಯದ ಜನರು ಸಹ ಎಚ್ಚರಿಕೆಯಿಂದ ಇರಬೇಕು. ಈಗಾಗಲೇ 27 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಇದರ ಹಿಂದೆ ಇನ್ನೂ ಯಾರಿದ್ದಾರೆ ಎಂಬುದನ್ನು ತನಿಖೆ ನಡೆಸಿ ಅವರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ ಎಂದರು. ಇದನ್ನೂ ಓದಿ: ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಾಳಿ ನಡೆಯುತ್ತಿದೆ – ಸುಳ್ಳು ಆರೋಪ ಹೊರಿಸಿದ ಉದ್ಧವ್ ಠಾಕ್ರೆ
Advertisement
ಮಹಾರಾಷ್ಟ್ರದಲ್ಲಿ ಶಿವಸೇನೆ, ಕಾಂಗ್ರೆಸ್‌ನವರು ಸರ್ಕಾರ ನಡೆಸುತ್ತಿದ್ದಾರೆ. ಇದಕ್ಕೆ ರಾಜ್ಯದ ಕಾಂಗ್ರೆಸ್ ನಾಯಕರು ಉತ್ತರ ಕೊಡಬೇಕು. ಇನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಬರೆದಿರುವ ಪತ್ರಕ್ಕೆ ಪ್ರಧಾನಮಂತ್ರಿ ಅವರು ಸರಿಯಾದ ಉತ್ತರ ಕೊಡುತ್ತಾರೆ ಎಂಬ ವಿಶ್ವಾಸ ಇದೆ ಎಂದು ಹೇಳಿದರು.