ಬಳ್ಳಾರಿ: ಇಂದು ಕೆ-ಸೆಟ್ ಪರೀಕ್ಷೆ (KSET Exam) ಹಿನ್ನೆಲೆ ಬಳ್ಳಾರಿಯಲ್ಲಿ (Ballari) ವಿದ್ಯಾರ್ಥಿಗಳ ಕಿವಿಯೋಲೆ, ಮೂಗುತಿ, ಕೈಕಡಗ ಸೇರಿದಂತೆ ಮೈಮೇಲೆ ಹಾಕಿಕೊಂಡಿರೋ ದೇವರ ದಾರವನ್ನು ಸಹ ಬಿಚ್ಚಿಸಿ ಅಭ್ಯರ್ಥಿಗಳನ್ನು ಒಳಗೆ ಕಳುಹಿಸಿದ ಘಟನೆ ನಡೆದಿದೆ.
ಕಿವಿಯೋಲೆ, ಮೂಗುತಿ ಹಾಗೂ ದೇವರ ದಾರ ಬಿಚ್ಚಿಸಿದ್ದಕ್ಕೆ ಕೆಲ ಪರೀಕ್ಷಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು. ಅಸಮಾಧಾನದ ನಡುವೆಯೂ ಅನಿವಾರ್ಯವಾಗಿ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾದರು. ಇನ್ನೂ ಪರೀಕ್ಷೆ ಮುಗಿಸಿಕೊಂಡು ಹೊರಬಂದ ಬಳಿಕ ಪ್ರತಿಕ್ರಿಯೆ ನೀಡಿದ ಪರೀಕ್ಷಾರ್ಥಿಗಳು ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ದ ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ನಿಜಕ್ಕೂ ಇವತ್ತು ವೀರಪ್ಪನ್ ಇರಬೇಕಿತ್ತು, ಕಾಡು ಸಮೃದ್ಧವಾಗಿರುತ್ತಿತ್ತು: ಸರ್ಕಾರದ ವಿರುದ್ಧ ರೈತರ ಆಕ್ರೋಶ
ಕಿವಿಯೋಲೆ, ಮೂಗುತಿ ಬಿಚ್ಚಿಸಿದ್ದು ನಮ್ಮ ಮನಸ್ಸಿಗೆ ಬೇಜಾರಾಗಿದೆ. ನಮಗೆ ಮಾಂಗಲ್ಯ, ಕಾಲುಂಗುರ ಹೇಗೋ, ಹಾಗೇ ಮೂಗುತಿಯೂ ಬಹಳ ಮುಖ್ಯ. ಆದ್ರೂ ನಿಯಮ ಪಾಲನೆ ಮಾಡಬೇಕು ಅನ್ನೋ ಕಾರಣಕ್ಕೆ ಅನಿವಾರ್ಯವಾಗಿ ಬಿಚ್ಚಿಟ್ಟು ಹೋಗಿದ್ದೇವೆ ಎಂದರು. ಇದನ್ನೂ ಓದಿ: 2ನೇ ಬಾರಿಗೆ ಚಿಕ್ಲಿಹೊಳೆ ಜಲಾಶಯ ಭರ್ತಿ – ಮತ್ತೆ ಹೆಚ್ಚಿದ ಪ್ರವಾಸಿಗರ ದಂಡು
ಬಳ್ಳಾರಿಯಲ್ಲಿ 20 ಪರೀಕ್ಷಾ ಕೇಂದ್ರಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕೆ-ಸೆಟ್ ಪರೀಕ್ಷೆಗಳು ನಡೆಸಲಾಯಿತು. ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಜೆರಾಕ್ಸ್ ಸೆಂಟರ್ ಮತ್ತು ಇಂಟರ್ ನೆಟ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಇದನ್ನೂ ಓದಿ: ಕರೂರು ಕಾಲ್ತುಳಿತ ಪ್ರಕರಣ : ವಿಜಯ್ ದಳಪತಿ ಬೆನ್ನಿಗೆ ನಿಂತ ತಲಾ ಅಜಿತ್

