ಚಿಕ್ಕಬಳ್ಳಾಪುರ: ಜಿಲ್ಲಾ ಉಸ್ತುವಾರಿ ಜಿಲ್ಲೆ ಸ್ಥಾನ ಬದಲಾಗುವ ನೀರಿಕ್ಷೆ ಇರಲಿಲ್ಲ ಎಂದು ಆರೋಗ್ಯ ಸಚಿವ ಹಾಗೂ ನೂತನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಗ್ಗೆ ನನಗೆ ಬಹಳ ಅಭಿಮಾನವಿದೆ. ಜನರ ಹಿತವನ್ನು ಕಾಪಾಡುವ ಕೆಲಸ ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು.
ಉಸ್ತುವಾರಿಗಳ ಬದಲಾವಣೆಯಿಂದ ಜಿಲ್ಲೆಯ ಅಭಿವೃದ್ಧಿಗೆ ಯಾವುದೇ ಹಿನ್ನೆಡೆ ಆಗುವುದಿಲ್ಲ. ಈಗಾಗಲೇ ನಾವು ಮುಖ್ಯಮಂತ್ರಿಗಳ ತೀರ್ಮಾನದಂತೆ ನಾವು ಕರ್ತವ್ಯ ನಿರತರಾಗಿದ್ದೇವೆ. ಯಾರಿಗಾದರೂ ಅಸಮಾಧಾನ ಇದ್ದರೆ ಪಕ್ಷದ ಆಂತರಿಕ ವಿಚಾರ ಇರುವುದರಿಂದ ಕೆಲವರು ಅಲ್ಲಿ ಚರ್ಚೆ ಮಾಡಬಹುದು ಎಂದು ತಿಳಿಸಿದರು.
ಕೋವಿಡ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕೊರೊನಾ ಸೋಂಕಿತರ ಸಂಖ್ಯೆ 4 ದಿನದಿಂದ ಬೆಂಗಳೂರಿನಲ್ಲಿ ಕಡಿಮೆ ಆಗುತ್ತಿದೆ. ಬೇರೆ ಬೇರೆ ಜಿಲ್ಲೆಗಳಲ್ಲಿ ನಿಧಾನವಾಗಿ ಹೆಚ್ಚಿನ ಪ್ರಕರಣ ಕಂಡುಬರುತ್ತಿದೆ. ಆಸ್ಪತ್ರೆಗಳ ದಾಖಲಾತಿ 1-2 ರಷ್ಟು ಇದ್ದು, ಆರೋಗ್ಯ ವ್ಯವಸ್ಥೆ ಮೇಲೆ ಒತ್ತಡ ಇಲ್ಲ ಎಂದು ಮಾಹಿತಿ ನೀಡಿದರು.
ಓಮಿಕ್ರಾನ್ ಪ್ರಭೇದದ ರೋಗ ಲಕ್ಷಣ ಕಡಿಮೆ ಇದೆ. ಎರಡು ಅಲೆಗಳಿಗೆ ಹೋಲಿಸಿದರೆ ತೀರಾ ಕಡಿಮೆ ಇದೆ. ಗುಣಮುಖರ ಸಂಖ್ಯೆ ಸಹ ಹೊಸ ಸೋಂಕಿತರಗಿಂತ ಹೆಚ್ಚಿದೆ. ಕಡಿಮೆ ಆಗುತ್ತಿರುವ ಸಂದರ್ಭದಲ್ಲಿ ಟಫ್ ರೂಲ್ಸ್ ಅಗತ್ಯ ಇಲ್ಲ ಎಂದರು. ಇದನ್ನೂ ಓದಿ: ಅಧಿಕಾರದ ಆಸೆಗೆ ಬಿಜೆಪಿ ಬಗ್ಗೆ ಮಾತನಾಡುವುದು ಸಿದ್ದರಾಮಯ್ಯ, ಡಿಕೆಶಿಗೆ ಶೋಭೆಯಲ್ಲ: ಮುನೇನಕೊಪ್ಪ
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿಗಳನ್ನು ಕೇಳಬೇಕು ಎಂದ ಅವರು, ವಲಸಿಗ ಕಾಂಗ್ರೆಸ್ ಶಾಸಕರು ಮತ್ತೆ ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಡಿಕೆಶಿ ಹೇಳಿಕೆಗೆ ಅವರನ್ನೇ ಕೇಳಿ ಯಾರು ಅವರ ಸಂಪರ್ಕದಲ್ಲಿದ್ದಾರೆ ಅಂತ ಹೇಳಲಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಆತ್ಮ ಗೌರವ ಇದ್ದವರು ಯಾರೂ ಕಾಂಗ್ರೆಸ್‍ಗೆ ವಾಪಸ್ ಹೋಗಲ್ಲ: ಬಿ.ಸಿ.ಪಾಟೀಲ್