ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ, ವೈದ್ಯಕೀಯ ಕಾಲೇಜುಗಳಲ್ಲಿ ಅಗ್ನಿ ಅವಘಡದಂತಹ ಘಟನೆಗಳನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸೂಚನೆ ನೀಡಿದರು.
ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲೂ ಅಗ್ನಿ ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಒತ್ತು ನೀಡಲಾಗಿದೆ. ಕೆಲ ದಿನಗಳ ಹಿಂದೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜೊತೆ ನಡೆದ ವೀಡಿಯೋ ಸಂವಾದದ ವೇಳೆ, ಪ್ರಧಾನಿಗಳು ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷಾ ಕ್ರಮಗಳನ್ನು ಅನುಸರಿಸುವ ಬಗ್ಗೆ ಸಲಹೆ, ಸೂಚನೆಗಳನ್ನು ನೀಡಿದ್ದರು ಎಂದು ತಿಳಿಸಿದರು.
Advertisement
Advertisement
ಈ ಹಿನ್ನೆಲೆಯಲ್ಲಿ ರಾಜ್ಯದ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಫೈರ್ ಸೇಪ್ಟಿ ಆಡಿಟ್‍ಗೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಲಿಖಿತ ಸೂಚನೆ ನೀಡಲಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ, 166 ಆಸ್ಪತ್ರೆಗಳಿಗೆ ಅಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ತಲಾ 50,000 ರೂ.ಗಳನ್ನು ನೀಡಲಾಗುತ್ತಿದೆ ಎಂದರು. ಇದನ್ನೂ ಓದಿ: ರಾಜಕೀಯ ಪಕ್ಷ ಅಧಿಕಾರ ಹಿಡಿಯಲು ‘ಆಪರೇಷನ್ ಕಮಲ’ ಅನಿವಾರ್ಯ: ಕಟೀಲ್
Advertisement
Advertisement
ಅಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಂಡು ನಂತರ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಮೂಲಕ ಎಲ್ಲಾ ಆಸ್ಪತ್ರೆಗಳು ನಿರಪೇಕ್ಷಣಾ ಪತ್ರ ಪಡೆಯಬೇಕಿದೆ. ಮೇ 21ರ ತನಕ ಕಾಲಮಿತಿಯನ್ನು ಕೂಡ ನೀಡಲಾಗಿದೆ. 16 ಜಿಲ್ಲಾ ಆಸ್ಪತ್ರೆಗಳು, 150 ತಾಲೂಕು ಆಸ್ಪತ್ರೆಗಳಿಗೆ ಈಗಾಗಲೇ ಈ ಬಗ್ಗೆ ಸೂಚನೆಯನ್ನು ಕೂಡ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಸರ್ಕಾರ ಧ್ವನಿವರ್ಧಕ ವಿಷಯದಲ್ಲಿ ಕ್ರಮಗೈಗೊಳ್ಳದಿದ್ದರೆ ಸಂಘರ್ಷಕ್ಕೆ ದಾರಿ ಆಗುತ್ತೆ: ಯತ್ನಾಳ್