Latest

ಸೋಮವಾರದಿಂದಲೇ 6-12 ವರ್ಷದ ಮಕ್ಕಳಿಗೆ ಲಸಿಕೆಗೆ ಸಿದ್ಧತೆ: ಸುಧಾಕರ್

ಬೆಂಗಳೂರು: 6-12 ವರ್ಷದ ಮಕ್ಕಳಿಗೆ ಸೋಮವಾರದಿಂದಲೇ ಲಸಿಕೆ ನೀಡಲು ನಾವು ತಯಾರಿ ಮಾಡಿಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ದೊಡ್ಡ ಮಟ್ಟದ ಡ್ರೈ ಆರಂಭ ಮಾಡುತ್ತೇವೆ. 6-12 ವರ್ಷದ ಮಕ್ಕಳಿಗೆ ಶೀಘ್ರದಲ್ಲಿ ಲಸಿಕೆ ನೀಡುವ ವಿಚಾರವಾಗಿ  ಸಿಎಂ ಕೂಡಾ ಈಗಾಗಲೇ ಈ ಬಗ್ಗೆ ನನ್ನ ಜೊತೆ ಚರ್ಚೆ ಮಾಡಿದ್ದಾರೆ ಎಂದು ಹೇಳಿದರು.

ಈ ಬಗ್ಗೆ ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳ ಜೊತೆ ಮಾತನಾಡುತ್ತೇನೆ. ಬೇಸಿಗೆ ರಜೆ ಪ್ರಾರಂಭ ಆಗಿದೆ. ಹೀಗಾಗಿ ಶಾಲೆಯಲ್ಲಿ ಮಾಡಬೇಕಾ? ಆಯಾ ಇನ್‍ಸ್ಟಿಟ್ಯೂಷನ್‍ನಲ್ಲಿ ಮಾಡಬೇಕಾ ಎಂದು ಚರ್ಚೆ ಮಾಡುತ್ತೇವೆ. ಸಿಎಂ ಕೂಡಾ ಈಗಾಗಲೇ ಈ ಬಗ್ಗೆ ನನ್ನ ಜೊತೆ ಚರ್ಚೆ ಮಾಡಿದ್ದಾರೆ. ಸೋಮವಾರದಿಂದಲೇ ಲಸಿಕೆ ನೀಡಲು ನಾವು ತಯಾರಿ ಮಾಡಿಕೊಳ್ಳುತ್ತಿದ್ದೇವೆ. 6-12 ವರ್ಷದ ಮಕ್ಕಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿ ನೋಡಿಕೊಂಡು ಲಸಿಕೆ ಉಚಿತನಾ ಅಂತ ನಿರ್ಧಾರ ಮಾಡುತ್ತೇವೆ ಎಂದರು. ಇದನ್ನೂ ಓದಿ: ಹಿಂಸಾಚಾರದಿಂದ ಯಾರಿಗೂ ಪ್ರಯೋಜನವಾಗಲ್ಲ: ಮೋಹನ್ ಭಾಗವತ್

ಬೆಂಗಳೂರಿನಲ್ಲಿ ಕೇಸ್ ದಿನೇ ದಿನೇ ಹೆಚ್ಚಳ ಆಗುತ್ತಿರೋ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸದ್ಯಕ್ಕೆ ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ. ದೊಡ್ಡ ಮಟ್ಟದ ಕೇಸ್ ಹೆಚ್ಚಳ ಆಗಿಲ್ಲ. ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುಬೇಕು ಎಂದು ತಿಳಿಸಿದರು.

corona

ಲಸಿಕೆ ಮತ್ತು ಮಾಸ್ಕ್ ಕಡ್ಡಾಯವಾಗಿ ಹಾಕಬೇಕು. ಸದ್ಯಕ್ಕೆ ಆತಂಕ ಪಡುವ ಸ್ಥಿತಿ ರಾಜ್ಯದಲ್ಲಿ ಇಲ್ಲ. ಅನಗತ್ಯವಾಗಿ ಭಯ, ಆತಂಕಕ್ಕೆ ಒಳಗಾಗುವ ಅವಶ್ಯಕತೆ ತಕ್ಷಣಕ್ಕೆ ಇಲ್ಲ. ಬೂಸ್ಟರ್ ಡೋಸ್‍ನ್ನು ತೆಗೆದುಕೊಳ್ಳುತ್ತಿದ್ದಾರೆ. 2-3 ದಿನಗಳಿಂದ ಬೂಸ್ಟರ್ ಡೋಸ್ ಪಡೆಯುವವರ ಸಂಖ್ಯೆ ಹೆಚ್ಚಾಗಿದೆ. ಜನರು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಜಮ್ಮು-ಕಾಶ್ಮೀರಕ್ಕೆ ಮೋದಿ ಭೇಟಿ ಬಗ್ಗೆ ಮಾತನಾಡುವ ಹಕ್ಕು ಪಾಕಿಸ್ತಾನಕ್ಕಿಲ್ಲ: ಭಾರತ ತಿರುಗೇಟು

ಒಮಿಕ್ರಾನ್ ಹೊಸ ತಳಿ ಪತ್ತೆ ವಿಚಾರವಾಗಿ ಮಾತನಾಡಿ, ಈಗಾಗಲೇ ಲ್ಯಾಬ್‍ಗೆ ಸ್ಯಾಂಪಲ್ ಕಳುಹಿಸಲಾಗಿದೆ. ಇಂದು ವರದಿ ಬರಬಹುದು ಎಂದರು.

Leave a Reply

Your email address will not be published.

Back to top button