ಬೆಂಗಳೂರು: ಶಾಲೆಗಳಲ್ಲಿ ಕೊರೊನಾ ಸೋಂಕು ಕಂಡು ಬಂದರೆ ಶಾಲೆಯನ್ನು ಕ್ಲೋಸ್ ಮಾಡಬೇಕು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದರು.
ದಾಸರಹಳ್ಳಿಯಲ್ಲಿ ಎರಡು ಖಾಸಗಿ ಶಾಲೆಗಳಲ್ಲಿ ಸೋಂಕು ಕಂಡು ಬಂದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಶಾಲೆ ಕ್ಲೋಸ್ ಮಾಡಿ ಕೊರೊನಾ ನಿಯಮ ಪಾಲನೆ ಮಾಡಬೇಕು. ದಾಸರಹಳ್ಳಿಯ ಎರಡು ಖಾಸಗಿ ಶಾಲೆಗಳಲ್ಲಿ ಸೋಂಕು ಬಂದಿರುವ ಬಗ್ಗೆ ಮಾಹಿತಿ ಬಂದಿಲ್ಲ. ಮಾಹಿತಿ ಪಡೆದು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
Advertisement
Advertisement
ಮಕ್ಕಳಿಗೆ ಸೋಂಕು ಬಂದ ಕೂಡಲೇ ಏನು ಆಗುವುದಿಲ್ಲ. 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಎಷ್ಟು ಲಸಿಕೆ ಆಗಿದೆ ಮಾಹಿತಿ ಪಡೆಯುತ್ತಿದ್ದೇವೆ. 15 ವರ್ಷ ಮೇಲ್ಪಟ್ಟರಿಗೂ ಲಸಿಕೆ ನೀಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು. ಸೋಂಕು ಬಂದ ಕೂಡಲೇ ಶಾಲೆ ಕ್ಲೋಸ್ ಮಾಡಬೇಕು. ಕೊರೊನಾ ಪ್ರೋಟೋಕಾಲ್‍ನಂತೆ ನಿಯಮ ಪಾಲನೆ ಮಾಡಬೇಕು ಎಂದು ತಿಳಿಸಿದರು. ಇದನ್ನೂ ಓದಿ: ರಾಯಚೂರಿಗೆ ಕೊನೆಗೂ ಭೇಟಿ ನೀಡಿದ ಉಸ್ತುವಾರಿ ಸಚಿವ: ಸಂತ್ರಸ್ತರಿಗೆ ಪರಿಹಾರ ಚೆಕ್ ವಿತರಣೆ
Advertisement
Advertisement
ಸೋಂಕು ಬಂದರೂ ಮಕ್ಕಳಿಗೆ ಹೆಚ್ಚು ಸಮಸ್ಯೆ ಆಗುವುದಿಲ್ಲ. ಯಾರು ಆಂತಕ ಆಗೋದು ಬೇಡ. ಇದು ಓಮಿಕ್ರಾನ್ ಉಪತಳಿಯಾಗಿದೆ. ನಮ್ಮಲ್ಲಿ ಹೊಸ ಓಮಿಕ್ರಾನ್ ಉಪ ತಳಿ ನಮ್ಮಲ್ಲಿ ಪತ್ತೆ ಆಗಿಲ್ಲ. ಹೀಗಾಗಿ ಆತಂಕ ಆಗೋದು ಬೇಡ ಎಂದು ಮನವಿ ಮಾಡಿದ ಅವರು, ಮಕ್ಕಳಿಗೆ ಸೋಂಕು ಬಂದರೆ ಪೋಷಕರಿಗೆ ಆತಂಕ ಆಗುವುದು ಸಹಜ. ಆದರೆ ಯಾರು ಗಾಬರಿ ಆಗೋದು ಬೇಡ ಎಂದು ಕಿವಿಮಾತು ಹೇಳಿದರು. ಇದನ್ನೂ ಓದಿ: ಪತ್ನಿಯಿಂದಲೇ ಪತಿಯ ಕೊಲೆ – ಅಪಘಾತವಾಗಿದೆ ಎಂದು ಬಿಂಬಿಸಲು ಹೋದವಳು ಅರೆಸ್ಟ್