ನಾಗಮಂಗಲ ಗಲಭೆ ಬೆನ್ನಲ್ಲೇ ಗುಪ್ತಚರ ವಿಭಾಗದ ಎಡಿಜಿಪಿ ಶರತ್‌ ಚಂದ್ರ ಎತ್ತಂಗಡಿ

Public TV
0 Min Read
sharath chandra

ಬೆಂಗಳೂರು: ಮಂಡ್ಯದ ನಾಗಮಂಗಲ ಗಲಭೆ ಪ್ರಕರಣದ ಬೆನ್ನಲ್ಲೇ ಗುಪ್ತಚರ ವಿಭಾಗದ ಎಡಿಜಿಪಿ ಶರತ್‌ ಚಂದ್ರ (Sharath Chandra) ಅವರನ್ನು ವರ್ಗಾವಣೆ ಮಾಡಲಾಗಿದೆ. ಗಲಭೆ ಕೇಸ್‌ಗೆ ಇದು ತಲೆದಂಡವೇ ಎಂಬ ಪ್ರಶ್ನೆ ಉದ್ಭವಿಸಿದೆ.

ನೇಮಕಾತಿ ವಿಭಾಗದ ಎಡಿಜಿಪಿಯಾಗಿ ಶರತ್‌ ಚಂದ್ರ ಅವರನ್ನು ವರ್ಗಾಯಿಸಲಾಗಿದೆ. ಗುಪ್ತಚರ ಎಡಿಜಿಪಿಯಾಗಿ ಹೇಮಂತ್ ನಿಂಬಾಳ್ಕರ್‌ ಅವರನ್ನು ನಿಯೋಜಿಸಲಾಗಿದೆ. ಜೊತೆಗೆ ವಾರ್ತಾ ಇಲಾಖೆಯ ಹೆಚ್ಚುವರಿ ಜವಾಬ್ದಾರಿಯನ್ನೂ ವಹಿಸಲಾಗಿದೆ.

ಗುಪ್ತಚರ ವಿಭಾಗದ ಮುಖ್ಯಸ್ಥರನ್ನ ಸರ್ಕಾರ ಬದಲಾಯಿಸಿದ್ದು, ನಾಗಮಂಗಲ ಗಲಭೆ ಪ್ರಕರಣಕ್ಕೆ ತಲೆದಂಡವೇ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

Share This Article