CinemaLatestLeading NewsMain PostNational

ಕಾಳಿ ವಿವಾದ ಆಯ್ತು, ಇದೀಗ ಶಿವ, ಪಾರ್ವತಿ ಪಾತ್ರಧಾರಿಗಳ ಚಿತ್ರ ಹಂಚಿಕೊಂಡ ಲೀನಾ

Advertisements

ಒಟ್ಟಾವಾ: ಕಾಳಿ ಸಾಕ್ಷ್ಯಾಚಿತ್ರದ ವಿವಾದ ಬಳಿಕ ನಿರ್ಮಾಪಕಿ ಲೀನಾ ಮತ್ತೊಂದು ಪೋಸ್ಟ್ ಮಾಡಿ, ಕಾಳಿ ಪೊಸ್ಟರ್ ವಿರೋಧಿಸಿದವರನ್ನು ವ್ಯಂಗ್ಯ ಮಾಡಿದ್ದಾರೆ.

ಈಗಾಗಲೇ ಲೀನಾ ಅವರು, ಕಾಳಿಯ ಒಂದು ಕೈಲಿ ಸಿಗರೇಟು ಮತ್ತೊಂದು ಕೈಲಿ ಎಲ್ಜಿಬಿಟಿಕ್ಯೂ ಧ್ವಜವನ್ನು ನೀಡಲಾಗಿದ್ದ ತಮ್ಮ ಸಾಕ್ಷ್ಯ ಚಿತ್ರದ ಪೋಸ್ಟರ್‌ವೊಂದನ್ನು ಶೇರ್ ಮಾಡುವ ಮೂಲಕ ಭಾರೀ ವಿವಾದಕ್ಕೆ ಕಾರಣರಾಗಿದ್ದರು. ತನ್ನ ವಿರುದ್ಧ ಹಲವು ಎಫ್‍ಐಆರ್‌ಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಅವರು ತನ್ನ ರಕ್ಷಣೆಗಾಗಿ ಹೊಸ ಟ್ವೀಟ್‍ವೊಂದನ್ನು ಮಾಡಿದ್ದಾರೆ.

ಈ ಪೋಸ್ಟ್‌ನಲ್ಲಿ ಶಿವ, ಪಾರ್ವತಿ ಪಾತ್ರಧಾರಿಗಳ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಈ ಇಬ್ಬರು ಪಾತ್ರಧಾರಿಗಳು ಧೂಮಪಾನದಲ್ಲಿ ತೊಡಗಿದ್ದಾರೆ. ಇದೀಗ ಈ ಚಿತ್ರಕ್ಕೆ ನಿರ್ಮಾಪಕಿ ವಿರುದ್ಧ ಮತ್ತೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರ್ಮಿಕ ಭಾವನೆಗಳಿಗೆ ನಿರ್ಮಾಪಕಿ ಲೀನಾ ಮಣಿಮೇಕಲೈ ಅವರು ಪದೇ ಪದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ.

ಟ್ವಿಟ್ಟರ್ ಬಳಕೆದಾರರು ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದು, ಈ ನಿರ್ಮಾಪಕಿಯನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಕೋಟ್ಯಂತರ ಹಿಂದೂಗಳ ಭಾವನೆಗೆ ಆಕೆ ಧಕ್ಕೆ ಮಾಡಿದ್ದಾರೆ ಎಂದು ಕಿಡಿಕಾರಿ, ಅವರ ವಿರುದ್ಧ ಅನೇಕ ಎಫ್‍ಐಆರ್ ದಾಖಲಾಗಿತ್ತು.

Live Tv

Leave a Reply

Your email address will not be published.

Back to top button