ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಕಾಟೇರ ಸಿನಿಮಾ (Kaatera Cinema) ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಚಕ್ರವರ್ತಿಯ ಅಬ್ಬರ ಶುರುವಾಗಿದೆ.
ಸಿನಿಮಾ ಥಿಯೇಟರ್, ಮಾಲ್‌ಗಳ ಮುಂದೆ ಕಿಕ್ಕಿರಿದು ನಿಂತಿರುವ ಅಭಿಮಾನಿಗಳು (Darshan Fans) ದರ್ಶನ್ ಕಟೌಟ್‌ಗೆ ಹಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ. ಡಿಬಾಸ್ ಡಿಬಾಸ್ ಎಂದು ಜಯಘೋಷ ಹಾಕುತ್ತಾ ಹುಚ್ಚೆದ್ದು ಕುಣಿಯುತ್ತಿದ್ದಾರೆ. ಬೆಂಗಳೂರಿನ ಜೆ.ಪಿ.ನಗರದ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಅಭಿಮಾನಿಗಳಿಗಾಗಿ ಫ್ಯಾನ್ಸ್ ಶೋ ಆಯೋಜನೆ ಮಾಡಲಾಗಿತ್ತು. ಸಿನಿಮಾ ನೋಡಿ ಹೊರ ಬಂದ ಅಭಿಮಾನಿಗಳು ಸಾರಥಿಗೆ ಜೈಕಾರ ಕೂಗತೊಡಗಿದ್ದಾರೆ. ಈ ನಡುವೆ ಕಾಟೇರಮ್ಮನ ಗುಡಿ ಮಾಡಿ ದೇವಿ ಪ್ರತಿಮೆ ಸ್ಥಾಪಿಸಿರುವ ದೃಶ್ಯಗಳು ಕಂಡುಬಂದಿವೆ.
Advertisement
Advertisement
ದರ್ಶನ್ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಕಾಟೇರ ದರ್ಬಾರ್ ಮಧ್ಯರಾತ್ರಿಯಿಂದಲೇ ಶುರುವಾಗಿದೆ. ರಾಜ್ಯದ 21 ಕಡೆ ಮಧ್ಯರಾತ್ರಿ 12 ಗಂಟೆಯಿಂದಲೇ ಶೋ ಆರಂಭಿಸಲಾಗಿದೆ. 43 ಥಿಯೇಟರ್‌ಗಳಲ್ಲಿ ಮುಂಜಾನೆ 3 ಗಂಟೆಯಿಂದ, 77 ಥಿಯೇಟರ್‌ಗಳಲ್ಲಿ ಬೆಳಗ್ಗಿನ ಜಾವ 4 ಗಂಟೆಯಿಂದ ಶೋ ಆರಂಭವಾಗಿದೆ. ಸೂರ್ಯೋದಯವಾಗುವುದಕ್ಕೂ ಮುನ್ನವೇ ಕಾಟೇರ 335 ಶೋಗಳಲ್ಲಿ ಅಬ್ಬರಿಸಿದ್ದು ಅಭಿಮಾನಿಗಳ ಮನಗೆದ್ದಿದೆ. ಇಡೀ ದಿನ 1,600 ಶೋಗಳ ಪ್ರದರ್ಶನಕ್ಕೆ ಸಜ್ಜಾಗಿದೆ. ಒಟ್ಟಿನಲ್ಲಿ ಬಹುದಿನಗಳ ಬಳಿಕ ದರ್ಶನ್ ಮಾಸ್ ಲುಕ್‌ನಲ್ಲಿ ತೆರೆಯ ಮೇಲೆ ಕಾಲಿಟ್ಟಿರುವುದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.
Advertisement
Advertisement
‘ಕಾಟೇರ’ ಸಿನಿಮಾದ ಕಥೆ ನಡೆಯುವುದು 1974ರ ಕಾಲಘಟ್ಟದಲ್ಲಿ. ಭೀಮನಹಳ್ಳಿ ಎಂಬ ಊರಿನಲ್ಲಿ ಕುಲುಮೆ ಕೆಲಸ ಮಾಡುತ್ತಿರುವ ಯುವಕ ಕಾಟೇರ (ದರ್ಶನ್). ದುಡಿಮೆನೇ ದೇವ್ರು ಅಂತ ನಂಬಿರುವ ವ್ಯಕ್ತಿ. ಆದರೆ ಇದೇ ಊರಿನಲ್ಲಿ ಜಮಿನ್ದಾರನ ದಬ್ಬಾಳಿಕೆ ಇರುತ್ತದೆ, ಗೇಣಿದಾರರಿಗೆ ಅನ್ಯಾಯವಾಗುತ್ತಿರುತ್ತದೆ, ಭತ್ತ ಬೆಳೆಯುವ ರೈತನಿಗೆ ಬದುಕೋದೇ ಕಷ್ಟವಾಗಿರುತ್ತದೆ. ಅಷ್ಟಕ್ಕೂ ಆ ಊರಿನಲ್ಲಿ ಅಂಥದ್ದು ಏನಾಗುತ್ತಿರುತ್ತದೆ? ತನ್ನವರ ಮೇಲಿನ ದಬ್ಬಾಳಿಕೆಗೆ ಕಾಟೇರ ಯಾವ ರೀತಿ ಉತ್ತರ ಕೊಡುತ್ತಾನೆ ಎಂಬ ಕುತೂಹಲದೊಂದಿಗೆ ಸಿನಿಮಾ ಸಾಗುತ್ತದೆ.