ಕನ್ನಡದ ಮತ್ತೊಂದು ಸಿನಿಮಾ ಭಾರತೀಯ ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದಿದೆ. ಆರ್.ಚಂದ್ರು ನಿರ್ದೇಶನದ ‘ಕಬ್ಜ’ (Kabzaa) ಸಿನಿಮಾದ ಮೊದಲ ದಿನದ ಕಲೆಕ್ಷನ್ ಕಾಂತಾರ ಮತ್ತು ಕೆಜಿಎಫ್ 1 ಚಿತ್ರಕ್ಕಿಂತ ಹೆಚ್ಚು ಗಳಿಕೆ ಮಾಡಿದೆ. ಗಾಂಧಿನಗರದ ಲೆಕ್ಕಾಚಾರದ ಪ್ರಕಾರ ಮೊದಲ ದಿನದ ಕಲೆಕ್ಷನ್ (Collection) ಬರೋಬ್ಬರಿ 50 ಕೋಟಿ ಎಂದು ಅಂದಾಜಿಸಲಾಗಿದೆ. ಇದು ಭಾರತೀಯ ಸಿನಿಮಾ ರಂಗದಲ್ಲಿ ಮತ್ತೊಂದು ದಾಖಲೆ ಸೃಷ್ಟಿಸಿದೆ.
Advertisement
ಕೇವಲ ಭಾರತದಲ್ಲಿ ಮಾತ್ರವಲ್ಲ ವಿದೇಶದಿಂದಲೂ ಹಣ ಹರಿದು ಬಂದಿದ್ದು, ಹತ್ತು ಕೋಟಿಗೂ ಹೆಚ್ಚು ಗಳಿಕೆಯನ್ನು ಕಬ್ಜ ಮಾಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ನಿನ್ನೆ ಬಿಡುಗಡೆಯಾದಾಗ ಕೆಲವು ಕಡೆ ಫಸ್ಟ್ ಶೋಗೆ ಪ್ರತಿಕ್ರಿಯೆ ಭಾರೀ ಪ್ರಮಾಣದಲ್ಲಿ ಇಲ್ಲವೆಂದು ಹೇಳಲಾಗಿತ್ತು. ಆದರೆ, ಸಂಜೆ ಅಷ್ಟೊತ್ತಿಗೆ ಅಷ್ಟೂ ಶೋಗಳು ಹೌಸ್ ಫುಲ್ ಪ್ರದರ್ಶನ ಕಂಡಿವೆ. ಮಧ್ಯಾಹ್ನದಿಂದ ಥಿಯೇಟರ್ ಸಂಖ್ಯೆ ಹಾಗೂ ಶೋಗಳ ಸಂಖ್ಯೆ ಕೂಡ ಹೆಚ್ಚಳವಾಗಿದೆ. ಇದನ್ನೂ ಓದಿ: `ನಾಟು ನಾಟು’ ಹಾಡಿಗೆ ಸ್ಟೆಪ್ ಹಾಕಿದ ಕಿಂಗ್ ಕೊಹ್ಲಿ – ವಿರಾಟ್ ಡಾನ್ಸ್‌ಗೆ ಅಭಿಮಾನಿಗಳು ಫಿದಾ
Advertisement
Advertisement
ಸಿನಿಮಾ ಬಗ್ಗೆಯೂ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಿನಿಮಾ ವಿಮರ್ಶಕರು ನಿರ್ದೇಶಕ ಆರ್.ಚಂದ್ರು ಅವರನ್ನು ಹಾಡಿಹೊಗಳಿದ್ದಾರೆ. ಚಂದ್ರು ಹೀಗೂ ಸಿನಿಮಾ ಮಾಡುವುದಕ್ಕೆ ಸಾಧ್ಯವಾ? ಎಂದು ಬಣ್ಣಿಸಿದ್ದಾರೆ. ಅದರಲ್ಲೂ ಸಿನಿಮಾದ ಸೆಕೆಂಡ್ ಆಫ್ ಬಗ್ಗೆ ಪ್ರಂಶಸೆ ವ್ಯಕ್ತ ಪಡಿಸಿದ್ದಾರೆ. ಸುದೀಪ್ ಮತ್ತು ಶಿವರಾಜ್ ಕುಮಾರ್ ಮಾಡಿದ ಪಾತ್ರಗಳ ಬಗ್ಗೆ ಮತ್ತಷ್ಟು ಕುತೂಹಲ ಮೂಡಿಸುವಂತೆ ಬರೆದಿದ್ದಾರೆ.
Advertisement
ಉಪೇಂದ್ರ (Upendra) ಸ್ವತಃ ನಿರ್ದೇಶಕರಾಗಿದ್ದರೂ ಮೇಕಿಂಗ್ ಬಗ್ಗೆ ಮಾತನಾಡುತ್ತಾ, ಭಾರತೀಯ ಸಿನಿಮಾ ರಂಗಕ್ಕೆ ಮತ್ತೊಬ್ಬ ಅದ್ಭುತ ನಿರ್ದೇಶಕ ಸಿಕ್ಕಿದ್ದಾರೆ ಎಂದು ಮಾಧ್ಯಮಗಳ ಮುಂದೆಯೇ ಆರ್.ಚಂದ್ರು ಅವರನ್ನು ಹೊಗಳಿದ್ದಾರೆ. ಬಾಲಿವುಡ್ ನಲ್ಲೂ ಕಬ್ಜ ಸಿನಿಮಾಗೆ ಅತ್ಯುತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಅನುಪಮ್ ಖೇರ್ ಸೇರಿದಂತೆ ಅನೇಕ ಬಾಲಿವುಡ್ ಸಿಲೆಬ್ರಿಟಿಗಳು ಕನ್ನಡ ಸಿನಿಮಾವನ್ನು ಮೆಚ್ಚಿ ಮಾತನಾಡಿದ್ದಾರೆ. ನಿರ್ದೇಶಕ ಚಂದ್ರು ಅವರನ್ನು ಬಾಲಿವುಡ್ ಗೆ ಸ್ವಾಗತ ಎಂದು ಆಹ್ವಾನಿಸಿದ್ದಾರೆ.