ಈಗಾಗಲೇ ಟೀಸರ್ ಮತ್ತು ಹಾಡುಗಳ ಮೂಲಕ ಗಮನ ಸೆಳೆದಿರುವ ‘ಕಬ್ಜ’ (Kabzaa) ಸಿನಿಮಾ ಟೀಮ್ ಇದೀಗ ಮತ್ತೊಂದು ಮಹತ್ವದ ಹೆಜ್ಜೆ ಇಡುತ್ತಿದೆ. ಮಾರ್ಚ್ 4ರಂದು ಚಿತ್ರದ ಟ್ರೈಲರ್ (Trailer) ರಿಲೀಸ್ ಮಾಡುತ್ತಿದ್ದು, ಟ್ರೈಲರ್ ನೋಡುವುದಕ್ಕಾಗಿಯೇ ಹಲವು ತಿಂಗಳುಗಳಿಂದ ಅಭಿಮಾನಿಗಳು ಕಾದಿದ್ದಾರೆ. ಅಭಿಮಾನಿಗಳನ್ನು ಕಾಯಿಸಿ, ಕೊನೆಗೂ ಟ್ರೈಲರ್ ರಿಲೀಸ್ ಮಾಡುತ್ತಿದ್ದಾರೆ ನಿರ್ದೇಶಕ ಆರ್.ಚಂದ್ರು.
ಮೊನ್ನೆಯಷ್ಟೇ ರಿಲೀಸ್ ಆಗಿರುವ ಹಾಡು ಈಗಾಗಲೇ ಕೋಟ್ಯಂತರ ಕೇಳುಗರನ್ನು ತಲುಪಿದೆ. ರಿಲೀಸ್ ಆದ ಅಷ್ಟೂ ಭಾಷೆಗಳಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಟ್ರೈಲರ್ ರಿಲೀಸ್ ಮಾಡುತ್ತಿದ್ದಾರೆ ನಿರ್ದೇಶಕರು. ಶನಿವಾರ (ಮಾ.4) ಸಂಜೆ 5 ಗಂಟೆ 2 ನಿಮಿಷಕ್ಕೆ ಟ್ರೈಲರ್ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಏಕಕಾಲಕ್ಕೆ ಎಲ್ಲ ಭಾಷೆಯ ಟ್ರೈಲರ್ ಗಳು ರಿಲೀಸ್ ಆಗಲಿವೆ. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ಸೋಲಿನ ಬಗ್ಗೆ ಮೌನ ಮುರಿದ ಕನ್ನಡದ `ಗಿಲ್ಲಿ’ ನಟಿ ರಾಕುಲ್
ನಿರ್ದೇಶಕ ಆರ್.ಚಂದ್ರು (R. Chandru), ರಿಯಲ್ ಸ್ಟಾರ್ ಉಪೇಂದ್ರ (Upendra) ಹಾಗೂ ಕಿಚ್ಚ ಸುದೀಪ್ (Sudeep) ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಶ್ರೀಯಾ ಶರಣ್ (Shriya Sharan) ನಾಯಕಿಯಾಗಿದ್ದಾರೆ. ಭಾರೀ ಬಜೆಟ್, ಅದ್ಧೂರಿ ತಾರಾಗಣ ಹೊಂದಿರುವ ಚಿತ್ರ ಇದಾಗಿದೆ. ಅಲ್ಲದೇ, ಅಚ್ಚರಿ ಮೂಡಿಸುವಂತ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರಂತೆ. ಯಾರೆಲ್ಲ ನಟಿಸಿದ್ದಾರೆ ಎನ್ನುವ ವಿಷಯವನ್ನು ಸದ್ಯಕ್ಕೆ ಹೇಳುವುದಿಲ್ಲ ಎನ್ನುತ್ತಾರೆ ಚಂದ್ರು.
ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಮಾಡುವ ಯೋಜನೆ ನಿರ್ದೇಶಕರದ್ದು. ಅದಕ್ಕೆ ಬೇಕಿರುವ ಎಲ್ಲ ಸಿದ್ಧತೆಯನ್ನೂ ಅವರು ಮಾಡಿಕೊಂಡಿದ್ದಾರೆ. ದೊಡ್ಡಮಟ್ಟದಲ್ಲೇ ಸಿನಿಮಾ ರಿಲೀಸ್ ಆಗುತ್ತಿದ್ದು, ಕೇವಲ ಭಾರತದಲ್ಲಿ ಮಾತ್ರವಲ್ಲ ಹಲವು ದೇಶಗಳಲ್ಲೂ ಏಕಕಾಲಕ್ಕೆ ಕಬ್ಜ ಬಿಡುಗಡೆ ಆಗಲಿದೆ.