ಬೆಂಗಳೂರು: ಕಡಬಗೆರೆ ಶ್ರೀನಿವಾಸ್ ಹತ್ಯೆ ಸಂಚು ಕೇಸ್‍ನಲ್ಲಿ ರೌಡಿ ಶೀಟರ್ ರೋಹಿತ್ ಕೈವಾಡದ ಶಂಕೆ ಇರುವ ಹಿನ್ನೆಲೆಯಲ್ಲಿ ಬರಹಗಾರ ಅಗ್ನಿ ಶ್ರೀಧರ್ ಮನೆಯ ಮೇಲೆ ಬೆಂಗಳೂರು ಪೊಲೀಸರು ದಾಳಿ ನಡೆಸಿ ಶೋಧ ಆರಂಭಿಸಿದ್ದಾರೆ.
ಕಡಬಗೆರೆ ಸೀನನ ಆಪ್ತ ರಮೇಶ್‍ಗೆ ರೌಡಿ ರೋಹಿತ್ ಬೆದರಿಕೆ ಹಾಕಿದ್ದ. ಶೂಟೌಟ್ ನಡೆಯುವುದಕ್ಕೂ 4 ದಿನ ಮೊದಲು ರಮೇಶ್ ಮತ್ತು ಕಡಬಗೆರೆ ಶ್ರೀನಿವಾಸ್ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
Advertisement
ಶೂಟೌಟ್ ನಡೆದ ಬಳಿಕ ಅಗ್ನಿ ಶ್ರೀಧರ್ ಮನೆಯಲ್ಲಿ ರೋಹಿತ್ ಮತ್ತು ಸೈಲೆಂಟ್ ಸುನೀಲ್ ಅಡಗಿರಬಹುದು ಎನ್ನುವ ಶಂಕೆಯ ಆಧಾರದಲ್ಲಿ ಪೊಲೀಸರು ಕೋರ್ಟ್‍ನಿಂದ ಸಂರ್ಚ್ ವಾರೆಂಟ್ ಪಡೆದು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಮನೆಯಲ್ಲಿ ಶೋಧ ಆರಂಭಿಸಿದ್ದಾರೆ.
Advertisement
ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್, ಡಿಸಿಪಿಗಳಾದ ಹರ್ಷ, ನಾರಾಯಣ್, ಶರಣಪ್ಪ, ಅನುಚೇತ್ ನೇತೃತ್ವದಲ್ಲಿ ಪೊಲೀಸರು ಇಂದು ಫೀಲ್ಡಿಗೆ ಇಳಿದು ಶೋಧ ಆರಂಭಿಸಿದ್ದಾರೆ.
Advertisement
ಶ್ರೀಧರ್ ಮನೆಯಲ್ಲಿ ಶೋಧ ಯಾಕೆ?
ಎಪಿಎಂಸಿ ಅಧ್ಯಕ್ಷ ಕಡಬಗೆರೆ ಸೀನ ಹತ್ಯೆಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಬಲಗೈ ಬಂಟ ಸತೀಶ್ ಬಂಧನವಾಗಿತ್ತು. ವಿಚಾರಣೆ ವೇಳೆ ಸತೀಶ್ ರೋಹಿತ್ ಮತ್ತು ಸೈಲೆಂಟ್ ಸುನೀಲ್ ಅಗ್ನಿ ಶ್ರೀಧರ್ ಮನೆಯಲ್ಲಿ ಇರುವುದಾಗಿ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
Advertisement