Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾರ್ಚ್ 3ಕ್ಕೆ ‘ಕಡಲತೀರದ ಭಾರ್ಗವ’ ಸಿನಿಮಾ ರಿಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮಾರ್ಚ್ 3ಕ್ಕೆ ‘ಕಡಲತೀರದ ಭಾರ್ಗವ’ ಸಿನಿಮಾ ರಿಲೀಸ್

Cinema

ಮಾರ್ಚ್ 3ಕ್ಕೆ ‘ಕಡಲತೀರದ ಭಾರ್ಗವ’ ಸಿನಿಮಾ ರಿಲೀಸ್

Public TV
Last updated: March 1, 2023 4:08 pm
Public TV
Share
2 Min Read
FotoJet 1 3
SHARE

ಉತ್ಸಾಹಿ ಯುವಕರ ತಂಡದಿಂದ ಮೂಡಿಬಂದಿರುವ ‘ಕಡಲತೀರದ ಭಾರ್ಗವ’ ಚಿತ್ರದ ಟ್ರೇಲರ್ ಮತ್ತು ಹಾಡುಗಳು ಈಗಾಗಲೇ ಪ್ರೇಕ್ಷಕರ ಗಮನ ಸೆಳೆದಿವೆ. ಈಗ ಚಿತ್ರವು ಇದೇ ಮಾರ್ಚ್ 03ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ‘ಕಡಲತೀರದ ಭಾರ್ಗವ’ ಎಂದರೆ ಮೊದಲಿಗೆ ನೆನಪಿಗೆ ಬರುವುದು ಡಾ. ಶಿವರಾಮ ಕಾರಂತರು. ಕನ್ನಡ ನಾಡಿನಲ್ಲಿ ಅವರು ‘ಕಡಲತೀರದ ಭಾರ್ಗವ’ ಎಂಬ ಬಿರುದಿನಿಂದಲೇ ಅವರು ಪ್ರಸಿದ್ಧರಾದವರು. ಆದರೆ, ಅವರಿಗೂ, ಈ ಚಿತ್ರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ, ಇದು ಅವರ ಜೀವನದ ಕಥೆಯಲ್ಲ ಎನ್ನುತ್ತಾರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿರುವ ಪನ್ನಗ ಸೋಮಶೇಖರ್.

FotoJet 9

ಈ ಕುರಿತು ಮಾತನಾಡುವ ಅವರು, ‘ಕಡಲು ಎಂದರೆ ಅಂತ್ಯವಿಲ್ಲದ್ದು ಅಥವಾ ಅನಂತ ಎಂದರ್ಥ. ಆ ಕಡಲನ್ನು ನಮ್ಮ ಚಿತ್ರದಲ್ಲಿ ಒಂದು ವಿಷಯಕ್ಕೆ ಹೋಲಿಸಿದ್ದೇನೆ. ಇನ್ನು, ಭಾರ್ಗವರಾಮ ಅಥವಾ ಪರಶುರಾಮ ಎನ್ನುವುದು ನಮ್ಮ ಪುರಾಣಗಳಲ್ಲಿ ಬರುವ ಒಂದು ಪವರ್ಫುಲ್ ಪಾತ್ರ. ಇಲ್ಲಿ ನಾಯಕ ಭಾರ್ಗವ, ಪರಶುರಾಮನ ಗುಣಲಕ್ಷಣಗಳನ್ನು ಹೊಂದಿರುತ್ತಾನೆ. ಏನೇ ಆದರೂ ಗುರಿ ಸಾಧಿಸುತ್ತೇನೆ ಎಂಬ ಛಲದಿಂದ ಮುನ್ನಡೆಯುತ್ತಿರುತ್ತಾನೆ. ಹಾಗಾಗಿ, ಚಿತ್ರಕ್ಕೆ ‘ಕಡಲತೀರದ ಭಾರ್ಗವ’ ಎಂದು ಹೆಸರಿಟ್ಟಿದ್ದೇವೆ. ಇದೊಂದು ಸೈಕಲಾಜಿಕಲ್ ಥ್ರಿಲ್ಲರ್ ಚಿತ್ರವಾಗಿದ್ದು, ಡಾ. ಶಿವರಾಮ ಕಾರಂತರಿಗೂ ಯಾವುದೇ ಸಂಬಂಧವಿಲ್ಲ. ಅವರಿಗೆ ಧಕ್ಕೆ ತರುವಂತಹ ಯಾವುದೇ ಕೆಲಸವನ್ನೂ ಮಾಡಿಲ್ಲ. ಈಗಾಗಲೇ ಚಿತ್ರವನ್ನು ಹಲವರಿಗೆ ತೋರಿಸಿದ್ದೇವೆ. ಚಿತ್ರ ನೋಡಿದವರೆಲ್ಲರೂ ಮೆಚ್ಚಿಕೊಂಡಿದ್ದಾರೆ. ಶೀರ್ಷಿಕೆಗೆ ನ್ಯಾಯ ಸಲ್ಲಿಸಿದ್ದೇನೆ ಎಂದು ಅಭಿಪ್ರಾಯ ಪಟ್ಟಿದ್ದಾರೆ’ ಎನ್ನುತ್ತಾರೆ ಪನ್ನಗ ಸೋಮಶೇಖರ್. ಇದನ್ನೂ ಓದಿ: ರಮ್ಯಾಗಿಂತ ಸಾನ್ಯಗೆ ವಯಸ್ಸಾಯ್ತಾ? ಕಾಲೆಳೆದ ನೆಟ್ಟಿಗರು

shruthi prakash

‘ಒಬ್ಬ ಮನುಷ್ಯನಲ್ಲಿ ಎಲ್ಲ ತರಹದ ಭಾವನೆಗಳಿರುತ್ತವೆ. ಆ ಎಮೋಷನ್ಗಳನ್ನು ಇಟ್ಟುಕೊಂಡು ಮಾಡಿರುವ ಕಥೆಯೇ ‘ಕಡಲತೀರದ ಭಾರ್ಗವ’’ ಎನ್ನುತ್ತಾರೆ ಚಿತ್ರದ ನಾಯಕರಲ್ಲೊಬ್ಬರಾದ ವರುಣ್ ರಾಜು. ‘ಚಿತ್ರದ ಟ್ರೇಲರ್ಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಟ್ರೇಲರ್ ನೋಡಿದವರೆಲ್ಲ, ಬಹಳ ಗ್ರಿಪ್ಪಿಂಗ್ ಆಗಿದೆ, ಕಥೆ ಗೊತ್ತಾಗುತ್ತಿಲ್ಲ, ಹೊಸಬರೇ ಸೇರಿ ಈ ಚಿತ್ರ ಮಾಡಿದ್ದು ಎಂದನಿಸುತ್ತಿಲ್ಲ ಎಂದು ಹೇಳುತ್ತಿದ್ದಾರೆ. ನಾಳೆ ಚಿತ್ರ ನೋಡುವ ಪ್ರೇಕ್ಷಕರು ಸಹ ಇದೇ ಅಭಿಪ್ರಾಯಪಟ್ಟರೆ ನಮ್ಮ ಶ್ರಮ ಸಾರ್ಥಕ’ ಎನ್ನುತ್ತಾರೆ ವರುಣ್. ಈಗಾಗಲೇ ‘ಕಡಲತೀರದ ಭಾರ್ಗವ’ ಚಿತ್ರದ ಮೊದಲ ಟಿಕೆಟ್ ದಾಖಲೆಯ ಎರಡೂವರೆ ಲಕ್ಷ ರೂ.ಗಳಿಗೆ ಹರಾಜಿನಲ್ಲಿ ಮಾತಾಟವಾಗಿದೆ. ನಾಯಕ ವರುಣ್ ರಾಜು ಅವರ ಸಂಬಂಧಿಯೂ ಆದ ಮೋಹನ್ ರಾಜು ದುಡ್ಡು ಕೊಟ್ಟು ಮೊದಲ ಟಿಕೆಟ್ ಪಡೆದಿದ್ದಾರೆ.

shruthi prakash

‘ಕಡಲತೀರದ ಭಾರ್ಗವ’ ಚಿತ್ರದ ಹಿಂದೆ ಉತ್ಸಾಹಿ ಯುವಕರ ತಂಡವಿದ್ದು, ಈ ಚಿತ್ರವನ್ನು ಎವ ಕಲಾ ಸ್ಟುಡಿಯೋಸ್ನಡಿ ವರುಣ್ ರಾಜು ಮತ್ತು ಭರತ್ ಗೌಡ ಜಂಟಿಯಾಗಿ ನಿರ್ಮಿಸಿದ್ದಾರೆ. ಭರತ್ ಗೌಡ, ಶ್ರುತಿ ಪ್ರಕಾಶ್, ವರುಣ್ ರಾಜು, ರಾಘವ್ ನಾಗ್, ಕೆ.ಎಸ್. ಶ್ರೀಧರ್, ಅಶ್ವಿನ್ ಹಾಸನ್ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಅನಿಲ್ ಸಿ.ಜೆ. ಅವರ ಸಂಗೀತ ಮತ್ತು ಕೀರ್ತನ್ ಪೂಜಾರಿ ಛಾಯಾಗ್ರಹಣವಿದೆ.

TAGGED:Bharat GowdaKadalateerada BhargavaReleaseShruti PrakashVarun Rajuಕಡಲತೀರದ ಭಾರ್ಗವಭರತ್ ಗೌಡರಿಲೀಸ್ವರುಣ್ ರಾಜುಶ್ರುತಿ ಪ್ರಕಾಶ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

naseer ahmed 1
Bengaluru City

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್‌ ರಾಜೀನಾಮೆ

Public TV
By Public TV
1 minute ago
Naxal
Latest

ಭಾರತದಲ್ಲಿ ನಕ್ಸಲ್‌ ಚಳವಳಿಯ ಅಂತ್ಯ – ʻರೆಡ್‌ ಕಾರಿಡಾರ್‌ʼ ಇತಿಹಾಸದ ಇನ್‌ಸೈಡ್ ಸ್ಟೋರಿ!

Public TV
By Public TV
8 hours ago
SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
8 hours ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
8 hours ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
9 hours ago
Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?