ಮುಂಬೈ: ಹಿರಿಯ ನಟ ಖಾದರ್ ಖಾನ್ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂಬ ಸುದ್ದಿಗಳು ಭಾನುವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಈ ಸಂಬಂಧ ಪ್ರತಿಕ್ರಿಯಿಸಿರುವ ಖಾದರ್ ಪುತ್ರ ಸರ್ಫರಾಜ್, ಅಪ್ಪನಿಗೆ ಏನೂ ಆಗಿಲ್ಲ. ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಸುದ್ದಿಗಳನ್ನು ಹರಡಿಸುತ್ತಿದ್ದ, ಇವೆಲ್ಲವುಗಳು ಸುಳ್ಳು ಎಂದು ಸ್ಪಷ್ಟನೆ ನೀಡಿದ್ದಾರೆ.
Advertisement
81 ವರ್ಷದ ಖಾದರ್ ಖಾನ್ ಬಾಲಿವುಡ್ ಹಲವು ಸಿನಿಮಾಗಳಲ್ಲಿ ಹಾಸ್ಯ, ಪೋಷಕ ಪಾತ್ರಗಳಲ್ಲಿ ನಟಿಸುವ ಮೂಲಕ ಗುರುತಿಸಿಕೊಂಡಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಕೆನಡಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆರಂಭದಲ್ಲಿ ಉಸಿರಾಟ ತೊಂದರೆ ಕಾಣಿಸಿಕೊಂಡಾಗ BiPAP ವೆಂಟಿಲೇಟರ್ ಅಳವಡಿಸಲಾಗಿತ್ತು. ತಂದೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಸದ್ಯ ನಾರ್ಮಲ್ ವೆಂಟಿಲೇಟರ್ ಅಳವಡಿಸಲಾಗಿದೆ ಎಂದು ಸರ್ಫರಾಜ್ ಹೇಳಿದ್ದಾರೆ.
Advertisement
ಖಾದರ್ ಖಾನ್ ಕಾಬೂಲ್ ನಲ್ಲಿ ಜನಿಸಿದ್ದು, 1973ರಲ್ಲಿ ತೆರೆಕಂಡ ರಾಜೇಶ್ ಖನ್ನಾ ನಟನೆಯ ದಾಗ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಇದೂವರೆಗೂ 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಖಾದರ್ ಖಾನ್ ಕೆಲವು ಚಿತ್ರಗಳಿಗೆ ಸಂಭಾಷಣೆಯನ್ನು ಬರೆದಿದ್ದಾರೆ.
Advertisement
T 3041 – KADER KHAN .. actor writer of immense talent .. lies ill in Hospital .. PRAYERS and DUAS for his well being and recovery .. saw him perform on stage, welcomed him and his prolific writing for my films .. great company, a Libran .. and many not know , taught Mathematics ! pic.twitter.com/yE9SSkcPUF
— Amitabh Bachchan (@SrBachchan) December 28, 2018
Advertisement
ಧರಮ್ ವೀರ್, ಗಂಗಾ ಜಮುನಾ ಸರಸ್ವತಿ, ಕೂಲಿ, ದೇಶ್ ಪ್ರೇಮಿ, ಸುಹಾಗ್, ಪರವರೀಶ್, ಶರಾಬಿ, ಜ್ವಾಲಾಮುಖಿ, ಅಮರ್ ಅಕ್ಬರ್ ಆಂಥೋಣಿ, ಲಾವಾರಿಶ್, ಮುಖಾದರ್ ಕಿ ಸಿಕಂದರ್ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ಅಭಿನಯಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv