ಕಾರವಾರ: ದೇಶದ ಅತೀ ದೊಡ್ಡ ಅಣು ವಿದ್ಯುತ್ ಉತ್ಪಾದನಾ ಘಟಕದಲ್ಲಿ ಒಂದಾದ ಉತ್ತರ ಕನ್ನಡ ಜಿಲ್ಲೆಯ ಕೈಗಾದಲ್ಲಿ (Kaiga) 21 ಸಾವಿರ ಕೋಟಿ ವೆಚ್ಚದಲ್ಲಿನ 5 ಮತ್ತು 6 ನೇ ಅಣು ವಿದ್ಯುತ್ ಘಟಕ ನಿರ್ಮಾಣವಾಗುತ್ತಿದ್ದು, ಇಂದು ಕಾಂಕ್ರೀಟಿಕರಣಕ್ಕೆ ಅಣು ಶಕ್ತಿ ಆಯೋಗದ ಅಧ್ಯಕ್ಷ ಅಜಿತ್ ಕುಮಾರ್ ಮೊಹಂತಿ ಚಾಲನೆ ದೊರೆತಿದೆ.
ಕಾರವಾರ ತಾಲೂಕಿನ ಕೈಗಾದಲ್ಲಿ 2000 ರಲ್ಲಿ ಕೈಗಾ ಅಣು ವಿದ್ಯುತ್ ಉತ್ಪಾದನೆ ಕೇಂದ್ರ ಪ್ರಾರಂಭಗೊಂಡಿತ್ತು. ಪ್ರಸ್ತುತ 220 ಮೆಗಾ ಸಾಮರ್ಥ್ಯದ 4 ಅಣು ಘಟಕಗಳು ವಿದ್ಯುತ್ ಉತ್ಪಾದನೆ ನಡೆಸುತ್ತಿದೆ. ಇದನ್ನೂ ಓದಿ: ಕೊಡಗಿನ ಬೆಟ್ಟತೂರಿನಲ್ಲಿ ಕಾಡಾನೆ ದಾಳಿಗೆ ಪಿಯು ವಿದ್ಯಾರ್ಥಿನಿ ಬಲಿ
ನಾಲ್ಕು ಘಟಕದಿಂದ 2,280 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ನಡೆಸುತ್ತಿದೆ. ವಿದ್ಯುತ್ ಉತ್ಪಾದನೆ ಬೇಡಿಕೆ ಹಿನ್ನೆಲೆಯಲ್ಲಿ ತಲಾ 700 ಮ್ಯಾಗಾವ್ಯಾಟ್‌ನ ಗುರಿಯೊಂದಿಗೆ 2025 ರಲ್ಲಿ 5 ಮತ್ತು 6 ನೇ ಘಟಕ ಕಾಮಗಾರಿಗೆ ಚಾಲನೆ ನೀಡಲಾಗಿತ್ತು.
ಇಂದು (ಭಾನುವಾರ) ಇದರ ಕಾಂಕ್ರೀಟಿಕರಣಕ್ಕೆ ಅಣು ಶಕ್ತಿ ಆಯೋಗದ ಅಧ್ಯಕ್ಷ ಅಜಿತ್ ಕುಮಾರ್ ಮೊಹಂತಿ ಚಾಲನೆ ನೀಡಿದ್ದು, ಈ ಸಂದರ್ಭದಲ್ಲಿ ಎನ್‌ಪಿಸಿ ಡೈರೆಕ್ಟರ್ ವಿನೋದ್ ಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದು ,ಈ ಘಟಕಗಳು 2030 ರ ವೇಳೆಗೆ ಕಾಮಗಾರಿ ಮುಗಿಸುವ ಗುರಿ ಹೊಂದಿದೆ. ಇದನ್ನೂ ಓದಿ: ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್‌ಐ ಸಾವು
ಈ ಘಟಕ ಪ್ರಾರಂಭವಾದಲ್ಲಿ ಸ್ಥಳೀಯರಿಗೂ ಉದ್ಯೋಗಾವಕಾಶಗಳು ದೊರೆಯಲಿದೆ. ಒಂದು ಘಟಕದಲ್ಲಿ ಕನಿಷ್ಟ 1400 ರಿಂದ 1600 ರೂ. ವರೆಗೂ ಕೆಲಸ ನಿರ್ವಹಿಸುತ್ತಾರೆ. ಹೀಗಾಗಿ, ಸ್ಥಳೀಯರಿವೂ ಅವಕಾಶ ಸಿಗುವ ನಿರೀಕ್ಷೆ ಹೊಂದಲಾಗಿದೆ.

