ಬರ‍್ರೆನ್: ಜಿನಿವಾದಲ್ಲಿ ಈಚೆಗೆ ನಡೆದ ವಿಶ್ವಸಂಸ್ಥೆಯ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಹಕ್ಕುಗಳ (CESR) ಮಹಾಸಭೆಯಲ್ಲಿ ಸ್ವಯಂಘೋಷಿತ ದೇವಮಾನವ ಹಾಗೂ ಕೈಲಾಸ ದೇಶದ ಸಂಸ್ಥಾಪಕ ಸ್ವಾಮಿ ನಿತ್ಯಾನಂದನ (Swamy Nithyananda) ಶಿಷ್ಯೆ ಭಾಗವಹಿಸಿದ್ದರು ಎಂದು ಹೇಳಲಾಗಿದೆ.
USK at UN Geneva: Inputs on the Achievement of Sustainability
Participation of the United States of KAILASA in a discussion on the General Comment on Economic, Social and Cultural Rights and Sustainable Development at the United Nations in Geneva
The Economic, Social, and… pic.twitter.com/pNoAkWOas8
— KAILASA’s SPH Nithyananda (@SriNithyananda) February 25, 2023
ವಿಶ್ವಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಮಹಾಸಭೆಯಲ್ಲಿ (United Nations Meeting) ಅಮೆರಿಕ, ಯುಕೆ, ಸ್ಲೊವೇನಿಯಾ, ಫ್ರಾನ್ಸ್ ಮುಂತಾದ ಕಡೆಗಳಲ್ಲಿ ನಿತ್ಯಾನಂದ ಆಶ್ರಮಗಳನ್ನು ನಡೆಸುತ್ತಿರುವ ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸದ (United States of Kailasa) ಮಹಿಳಾ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಅಲ್ಲಿ ಸಾಮಾಜಿಕ, ಆರ್ಥಿಕ ವಿಚಾರಗಳನ್ನು ಚರ್ಚಿಸಲಾಯಿತು ಎಂದು ಕೈಲಾಸ ಎಸ್‌ಪಿಹೆಚ್ ನಿತ್ಯಾನಂದ ಹೆಸರಿನ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಸಹ ಹಂಚಿಕೊಳ್ಳಲಾಗಿದೆ.
ಇದೇ ಸಭೆಯಲ್ಲಿ ವಿಶ್ವಸಂಸ್ಥೆಯ ಖಾಯಂ ರಾಯಭಾರಿ ಎಂದು ಹೇಳಿರುವ ವಿಜಯಪ್ರಿಯಾ (Vijayapriya Nithyananda) ಸಹ ಭಾಗವಹಿಸಿದ್ದರು. ಅಲ್ಲಿ ನಿತ್ಯಾನಂದ ತನ್ನ ಜನ್ಮಸ್ಥಳವಾದ ಭಾರತ ದೇಶದಿಂದ ಹಿಂಸೆಗೆ ಒಳಗಾಗುತ್ತಿದ್ದಾರೆ. ಹಾಗಾಗಿ ಹಿಂದೂ ಧರ್ಮದ ಸರ್ವೋಚ್ಛ ಮಠಾಧೀಶರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಪಾಕ್, ಚೀನಾದಲ್ಲಿ ತರಬೇತಿ ಪಡೆದ ಡೇಂಜರಸ್ ವ್ಯಕ್ತಿ ಭಾರತಕ್ಕೆ ಎಂಟ್ರಿ – NIA ಅಲರ್ಟ್
ಕೈಲಾಸ ಹಿಂದೂ ಧರ್ಮದ (Hinduism) ಮೊದಲ ಸಾರ್ವಭೌಮ ರಾಜ್ಯ. ಅದನ್ನು ಹಿಂದೂ ಧರ್ಮದ ಸರ್ವೋಚ್ಛ ಮಠಾಧೀಶ (ಸುಪ್ರೀಂ ಪಾಂಟಿಫ್ ಆಫ್ ಹಿಂದೂಯಿಸಂ – SPH) ನಿತ್ಯಾನಂದ ಪರಮಶಿವಂ ಸ್ಥಾಪಿಸಿದ್ದಾರೆ. ಅವರು ಪ್ರಬುದ್ಧ ಹಿಂದೂ ನಾಗರಿಕತೆ ಮತ್ತು ಆದಿಶೈವ, ಸ್ಥಳೀಯ ಬುಡಕಟ್ಟು ಸೇರಿ ಹಿಂದೂ ಧರ್ಮದ 10 ಸಾವಿರ ಸಂಪ್ರದಾಯಗಳನ್ನ ಪುನರುಜ್ಜೀವನಗೊಳಿಸಿದ್ದಾರೆ. ಕೈಲಾಸ ಸುಸ್ಥಿರ ಅಭಿವೃದ್ಧಿಯೊಂದಿಗೆ ಯಶಸ್ವಿಯಾಗಿದೆ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ಉಗ್ರನನ್ನು ಹತ್ಯೆಗೈದ ಭದ್ರತಾ ಪಡೆ
ಇತರ ಪ್ರತಿನಿಧಿಗಳು ಮಾತನಾಡಿ, ನಾನಾ ದೇಶಗಳಲ್ಲಿ ಮಹಿಳೆಯರು ಅನುಭವಿಸುತ್ತಿರುವ ಹಿಂಸೆಗಳು, ಪುರುಷ ಪ್ರಧಾನ ಸಮಾಜಗಳಲ್ಲಿ ಒಳಗಾಗುತ್ತಿರುವ ಅಪಮಾನಗಳ ಬಗ್ಗೆ ಪ್ರತಿಪಾದಿಸಿದ್ದಾರೆ. ಜಗತ್ತಿನಲ್ಲಿ ಶೇ.82ರಷ್ಟು ಮಹಿಳೆಯರು ಪದೇ ಪದೇ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಪುರುಷ ಪ್ರಧಾನ ವ್ಯವಸ್ಥೆಯನ್ನು ಪ್ರಶ್ನಿಸಿದ್ದಕ್ಕಾಗಿ ಶೇ. 42ರಷ್ಟು ಮಹಿಳೆಯರು, ಅತ್ಯಾಚಾರ ಸೇರಿದಂತೆ ಅನೇಕ ದೌರ್ಜನ್ಯಗಳಿಗೆ ಒಳಗಾಗುತ್ತಿದ್ದಾರೆ ಎಂದು ಹೇಳಿದರು.
ಅಜ್ಞಾನ ಸ್ಥಳದಲ್ಲಿ ಕೈಲಾಸ ದೇಶ ಸ್ಥಾಪಿಸಿರುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಈ ದೇಶವನ್ನು ವಿಶ್ವಸಂಸ್ಥೆ ಗುರುತಿಸಿದೆಯೇ ಎಂಬುದು ಅಸ್ಪಷ್ಟವಾಗಿದೆ.
ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ವಿರುದ್ಧ 2010ರಲ್ಲಿ ಕರ್ನಾಟಕ ಸೆಷನ್ಸ್ ಕೋರ್ಟ್ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಗುಜರಾತ್ ಆಶ್ರಮದಲ್ಲಿಯೂ ಚಿತ್ರಹಿಂಸೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿ ಬಂದಿತು. ಈ ಕುರಿತು ತನಿಖೆ ನಡೆಸಿದ ಗುಜರಾತ್ ಪೊಲೀಸರು, ನಿತ್ಯಾನಂದ ದೇಶದಿಂದಲೇ ತಲೆ ಮರೆಸಿಕೊಂಡಿರುವುದಾಗಿ ವರದಿ ಮಾಡಿದ್ದರು.