ಹೈದರಾಬಾದ್: ನಟಿ ಕಾಜಲ್ ಅಗರ್ವಾಲ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೊವನ್ನು ಹಂಚಿಕೊಂಡಿದ್ದು, ತಮ್ಮ ಪ್ರೆಗ್ನೆನ್ಸಿ ದಿನಗಳನ್ನು ಎಂಜಾಯ್ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.
ಸದ್ಯ ದುಬೈ ಪ್ರವಾಸದಲ್ಲಿರುವ ಕಾಜಲ್, ಹೋಟೆಲ್ವೊಂದರಲ್ಲಿ ಬಾಲ್ಕನಿಯಲ್ಲಿ ಸೂರ್ಯನಿಂದ ಹೊಮ್ಮುವ ಪ್ರಕಾಶಮಾನ ಕಿರಣಗಳನ್ನು ನೋಡುತ್ತಾ ಕ್ಯಾಮರಾಗೆ ಪೋಸ್ ನೀಡಿದ್ದಾರೆ. ಈ ಫೋಟೊವನ್ನು ಸೂರ್ಯನ ಎಮೋಜಿಯೊಂದಿಗೆ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದು, ಸೂರ್ಯನ ಕಿರಣಗಳು ಮೃದುವಾಗಿ ನನ್ನ ಮುಖವನ್ನು ಸ್ಪರ್ಶಿಸುತ್ತಿವೆ ಎಂದು ಬರೆದುಕೊಂಡು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.
View this post on Instagram
ಕಳೆದ ಕೆಲವು ದಿನಗಳ ಹಿಂದೆ ಕಾಜಲ್, ದುಬೈನಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಚಿತ್ರಗಳನ್ನು ಹಂಚಿಕೊಂಡಿದ್ದರು. ಅದರಲ್ಲಿ ಅವರು ಸ್ಟೈಲಿಶ್ ಆಗಿ ಪೋಸ್ ನೀಡಿದ್ದಾರೆ. ಬೇಬಿ ಬಂಪ್ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಕಾಜಲ್, ಪ್ರವಾಸ, ಸಮಾರಂಭದ ಫೋಟೊಗಳನ್ನು ಅಭಿಮಾನಿಗಳಿಗಾಗಿ ಹಂಚಿಕೊಳ್ಳುತ್ತಿರುತ್ತಾರೆ. ಇದನ್ನೂ ಓದಿ: ಕೆಜಿಎಫ್2ಗೆ ಧ್ವನಿ ನೀಡಿದ ಮಸ್ತ್ ಮಸ್ತ್ ಹುಡುಗಿ
View this post on Instagram
ಕಾಜಲ್ ಹಾಗೂ ಗೌತಮ್ ಕಿಚ್ಲು 2020ರ ಅಕ್ಟೋಬರ್ 30ರಂದು ವಿವಾಹವಾಗಿದ್ದರು. 2022ರ ಆರಂಭದಲ್ಲಿ ಕಾಜಲ್ ಅಗರ್ವಾಲ್ ಹಾಗೂ ಅವರ ಪತಿ ಗೌತಮ್ ಕಿಚ್ಲು ಪೋಷಕರಾಗುತ್ತಿದ್ದೇವೆ ಎಂದು ಘೋಷಿಸಿದ್ದರು. ಕಾಜಲ್ ಹಿಂದಿ, ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇದನ್ನೂ ಓದಿ: ಕೆಜಿಎಫ್ ಟೀಮ್ ಜೊತೆ ಕ್ರಿಕೆಟ್ ಆಡಿದ ಯಶ್: ವೀಡಿಯೋ ವೈರಲ್