ಕಲಬುರಗಿ (ಅಫಜಲಪುರ): ಥೈಲ್ಯಾಂಡ್ (Thailand) ರಾಜಧಾನಿ ಬ್ಯಾಂಕಾಕ್‌ನ ಮನುಡ್ಟಿಡ್ಲೋರ್ ಅಕಾಡೆಮಿ ವತಿಯಿಂದ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಸ್ಕೇಟಿಂಗ್ (International Skating Competition) ಸ್ಪರ್ಧೆಯಲ್ಲಿ ಭಾರತದಿಂದ ಪ್ರತಿನಿಧಿಸಿದ್ದ ಕಲಬುರಗಿ ಜಿಲ್ಲೆಯ ಬಾಲಕ ಚಂದ್ರಕಾಂತ ಬಡದಾಳ ಚಿನ್ನದ ಪದಕ ಗೆದ್ದು ಕೀರ್ತಿ ಪತಾಕೆ ಹಾರಿಸಿದ್ದಾರೆ.
ಕಲಬುರಗಿ (Kalabiragi) ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಾಣಹಟ್ಟಿ ಗ್ರಾಮದ ಬಾಲಕ ಇದೀಗ ದೇಶಕ್ಕೆ ಕೀರ್ತಿ ತಂದಿದ್ದಾರೆ. ಬಾಲಕನ ತಂದೆ ರಾಜು ಬಡದಾಳ ಮಹಾರಾಷ್ಟ್ರದ ಪುಣೆ ಪಟ್ಟಣದಲ್ಲಿ ಕೂಲಿ ಕೆಲಸ ಮಾಡುತ್ತಿದ್ದು, ಅಲ್ಲಿಯೇ ವಾಸವಾಗಿದ್ದಾರೆ. ಮನೆಯಲ್ಲಿ ಬಡತನವಿದ್ದರೂ ಮಗನಿಗೆ ಉತ್ತಮ ಶಿಕ್ಷಣ ಸಿಗಬೇಕೆಂಬ ಹಂಬಲದಿಂದ ಪೋಷಕರು ಸ್ಥಳೀಯ ಖಾಸಗಿ ಶಾಲೆಯೊಂದಕ್ಕೆ ಸೇರಿಸಿದ್ದರು. ಅಲ್ಲಿ ಚಂದ್ರಕಾಂತನ ಕ್ರೀಡಾಪ್ರತಿಭೆ ಗುರುತಿಸಿದ ಶಿಕ್ಷಕರು ಸ್ಕೇಟಿಂಗ್ ತರಬೇತುದಾರ ಅಬ್ದುಲ್ ಶೇಖ್ ಬಳಿ ತರಬೇತಿ ಕೊಡಿಸಿದ್ದಾರೆ.
ಕಳೆದ 2023ರ ಮೇ 23 ರಿಂದ 31ರ ವರೆಗೆ ಬೆಳಗಾವಿಯ ಶಿವಗಂಗಾ ರೋಲರ್ ಸ್ಕೇಟಿಂಗ್ ಕ್ಲಬ್ ವತಿಯಿಂದ ನಡೆದ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಚಂದ್ರಕಾಂತ ಕೇವಲ 11.21 ಸೆಕೆಂಡುಗಳಲ್ಲೇ 100 ಮೀಟರ್ ಕ್ರಮಿಸಿ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದರು. ಇದರಿಂದ ಬ್ಯಾಂಕಾಕ್‌ನ ಅಂತಾರಾಷ್ಟ್ರೀಯ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿತು. ಇದನ್ನೂ ಓದಿ: World Cup 2023: 102 ರನ್ ಜಯದೊಂದಿಗೆ ದಕ್ಷಿಣ ಆಫ್ರಿಕಾ ಶುಭಾರಂಭ – ಹೋರಾಡಿ ಸೋತ ಲಂಕಾ
ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆಯೂ ಇಲ್ಲದ ಪುಟ್ಟ ಗ್ರಾಮದಿಂದ ಬಂದ 5ನೇ ತರಗತಿ ಬಾಲಕ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ. ಅಕ್ಟೋಬರ್ 1ರಂದು ಬ್ಯಾಂಕಾಕ್ ನಲ್ಲಿ ನಡೆದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಭಾರತ, ಹಾಂಕಾಂಗ್, ಮಲೇಷ್ಯಾ, ಥೈಲ್ಯಾಂಡ್ ಸೇರಿದಂತೆ ಅನೇಕ ದೇಶಗಳಿಂದ ಕ್ರೀಡಾಪಟುಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಆದ್ರೆ ಪ್ರತಿಸ್ಪರ್ಧಿಗಳನ್ನು ಸಮರ್ಥವಾಗಿ ಎದುರಿಸಿದ ಚಂದ್ರಕಾಂತ ಬಡದಾಳ 1,000 ಮೀಟರ್ ಸ್ಪೀಡ್ ರಿಂಗ್ ಸ್ಕೇಟಿಂಗ್‌ನಲ್ಲಿ ಚಿನ್ನದ ಪದಕ, 500 ಮೀಟರ್ ಸ್ಪೀಡ್ ರಿಂಗ್ ಸ್ಕೇಟಿಂಗ್‌ನಲ್ಲಿ ಕಂಚಿನ ಪದಕ, 300 ಮೀಟರ್ ಸ್ಪೀಡ್ ರಿಂಗ್ ಸ್ಕೇಟಿಂಗ್‌ನಲ್ಲಿ ಕಂಚಿನ ಪದಕ, ರಿಲೇ ಓಟದಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಕೀರ್ತಿ ತಂದಿದ್ದಾರೆ. ಬಾಲಕನ ಪ್ರತಿಭೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಚಂದ್ರಕಾಂತ ಬಡದಾಳ ಅವರ ಕ್ರೀಡಾ ಪ್ರತಿಭೆಯನ್ನು ಶ್ಲಾಘಿಸಿದ್ದಾರೆ. ಇದನ್ನೂ ಓದಿ: Asian Games 2023: ಏಷ್ಯನ್ ಗೇಮ್ಸ್‌ನಲ್ಲೂ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ ಸಾತ್ವಿಕ್‌ಸಾಯಿರಾಜ್, ಚಿರಾಗ್ ಜೋಡಿ
Web Stories