ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಬಳಿ ಇತ್ತೀಚೆಗೆ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತವಾದ (Accident) ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತಕ್ಕೆ ಕಾರಣವಾದ ಅಸಿಸ್ಟೆಂಟ್ ಪ್ರೊಫೆಸರ್ (Assistant Professor) ತ್ರಿನಿಧಿಯನ್ನು ಬಂಧಿಸಿ, ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ.
ನ.6ರಂದು ಆಳಂದ ತಾಲೂಕಿನ ತಡಕಲ್ ಗ್ರಾಮದ ನಿವಾಸಿ ರಂಜಾನ್ ಎಂಬ ವ್ಯಕ್ತಿಯ ಬೈಕ್ ಹಾಗೂ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಅಸಿಸ್ಟೆಂಟ್ ಪ್ರೊಫೆಸರ್ ತ್ರಿನಿಧಿ ಕಾರಿನ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದನು. ಇದನ್ನೂ ಓದಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸರಣಿ ಸಾವು – ಮೃತ ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ
Advertisement
ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕನಿಂಧ ಆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನರೋಣಾ ಪೋಲಿಸ್ ಠಾಣೆ ಪೋಲಿಸರು ಬಂಧಿಸಿ ಕರೆದೊಯ್ದಿದ್ದಾರೆ. ಪಘಾತಕ್ಕೆ ಕಾರಣವಾದ ತ್ರಿನಿಧಿಯನ್ನು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದಲೇ ಪೋಲಿಸರು ಬಂಧಿಸಿ ಕರೆದುಕೊಂಡು ಹೋಗಿದ್ದು, ಇದೀಗ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ.
Advertisement
Advertisement
ಈ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನರೋಣಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಇದನ್ನೂ ಓದಿ: Mysuru | ಬೈಕ್ ಓಡಿಸುತ್ತಿರುವಾಗಲೇ ಹೃದಯಾಘಾತ – ತಡೆಗೋಡೆಗೆ ಗುದ್ದಿ ವ್ಯಕ್ತಿ ಸಾವು!