ಕಲಬುರಗಿ| ಇಬ್ಬರು ಬೈಕ್ ಕಳ್ಳರ ಬಂಧನ- 3.5 ಲಕ್ಷ ರೂ. ಮೌಲ್ಯದ 10 ಬೈಕ್ ಜಪ್ತಿ

Public TV
1 Min Read
kalaburagi arrest

ಕಲಬುರಗಿ: ಬೈಕ್ ಕಳವು ಮಾಡುವುದನ್ನೇ ಉದ್ಯೋಗ ಮಾಡಿಕೊಂಡಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಸೇಡಂ ಪೊಲೀಸರು ಬಂಧಿಸಿದ್ದು, ಬಂಧಿತರಿಂದ 3.5 ಲಕ್ಷ ರೂ. ಮೌಲ್ಯದ 10 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಸೇಡಂ (Sedam) ಪಟ್ಟಣದ ಉಮರ್ ಮತ್ತು ಅಲ್ತಾಫ್ ಬಂಧಿತ ಆರೋಪಿಗಳು. ಬೈಕ್ ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇಬ್ಬರನ್ನೂ ಕರೆತಂದು ವಿಚಾರಣೆ ಮಾಡುತ್ತಿದ್ದ ವೇಳೆ ಇವರಿಬ್ಬರೂ ಸೇರಿ 10ಕ್ಕೂ ಹೆಚ್ಚು ಬೈಕ್ ಕಳವು ಮಾಡಿರುವುದು ಪತ್ತೆಯಾಗಿದೆ. ಬಳಿಕ ಎಲ್ಲ ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: Bengaluru Rain | ಸಾಂಕ್ರಾಮಿಕ ರೋಗ ಭೀತಿ – ಬೀದಿಬದಿ ಆಹಾರ, ಕತ್ತರಿಸಿದ ಹಣ್ಣು ಮಾರಾಟಕ್ಕೆ ನಿಷೇಧ

ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೀದರ್‌ನಲ್ಲಿ ಅನ್ನಭಾಗ್ಯ ಯೋಜನೆಗೆ ಕನ್ನ – ಅಂಗಡಿಯ ಡೀಲರ್‌ನಿಂದಲೇ ಅಕ್ರಮ ಸಾಗಾಟ

Share This Article