Connect with us

Districts

ಲಾಂಗ್ ಹಿಡಿದು ಬರ್ತ್ ಡೇ ಡ್ಯಾನ್ಸ್ – 7 ಮಂದಿ ಅರೆಸ್ಟ್

Published

on

ಕಲಬುರಗಿ: ಹುಟ್ಟುಹಬ್ಬದಂದು ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿದ್ದ 7 ಮಂದಿ ಪುಂಡರನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಇಮ್ರಾನ್, ತರಬೇಜ್, ರಶಿದ್ ಒಟ್ಟು 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯ ರೋಜಾ ಬಡಾವಣೆಯಲ್ಲಿ 7 ಮಂದಿ ಬೀದಿ ಪುಡಾರಿಗಳು ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿದ್ದರು.

ಪುಂಡರು ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿರುವ ದೃಶ್ಯವನ್ನು ವಾಟ್ಸಪ್ ನಲ್ಲಿ ಹರಿಬಿಡಲಾಗಿತ್ತು. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ.

ಈ ಸಂಬಂಧ ರೋಜಾ ಠಾಣೆ ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದಾರೆ.

Click to comment

Leave a Reply

Your email address will not be published. Required fields are marked *