Saturday, 20th July 2019

Recent News

ಲೋಕಸಮರದ ಬಳಿಕ ಉಪಸಮರದ ಕಾವು- ಸಹೋದರನಿಗೆ ಟಿಕೆಟ್ ಕೊಡಿಸಲು ಜಾಧವ್ ಸರ್ಕಸ್

– ಖರ್ಗೆ ಪಡೆಯಿಂದಲೂ ರಣತಂತ್ರ

ಕಲಬುರಗಿ: ಜಿಲ್ಲೆಯ ಚಿಂಚೋಳಿ ಕ್ಷೇತ್ರ ಅಂದ್ರೆ ಅದು ರಾಜ್ಯದ ಲಕ್ಕಿ ಕ್ಷೇತ್ರ ಅಂತಾನೇ ಖ್ಯಾತಿ ಪಡೆದಿದ್ದು, ಇಂತಹ ಕ್ಷೇತ್ರದಲ್ಲಿ ಶಾಸಕರಾಗಿದ್ದ ಉಮೇಶ್ ಜಾಧವ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಲೋಕಸಭೆಗೆ ಸ್ಪರ್ಧಿಸಿದ್ದರು. ಹೀಗಾಗಿ ಆ ಕ್ಷೇತ್ರದಲ್ಲಿಗ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಹೌದು. ಜಿಲ್ಲೆಯ ಚಿಂಚೋಳಿ ಕ್ಷೇತ್ರದಲ್ಲಿ ಗೆದ್ದ ಪಕ್ಷವೇ ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಇಂತಹ ಕ್ಷೇತ್ರದಲ್ಲಿ ಸತತ ಎರಡು ಬಾರಿ ಕಾಂಗ್ರೆಸ್‍ನಿಂದ ಗೆದ್ದ ಡಾ.ಉಮೇಶ್ ಜಾಧವ್, ಇತ್ತೀಚೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಲಬುರಗಿ ಲೋಕಸಭೆಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಹೀಗಾಗಿ ಅವರ ತೆರವಿನಿಂದ ಈ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಜಾಧವ್ ಅವರಿಗೆ ತಕ್ಕ ಪಾಠ ಕಲಿಸಿ ಅವರ ರಾಜಕೀಯ ಭವಿಷ್ಯ ಅಂತ್ಯ ಹಾಡಲು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕೈ ಪಕ್ಷದ ಘಟಾನುಘಟಿ ನಾಯಕರು ಸಜ್ಜಾಗಿದ್ದಾರೆ. ಈ ಕ್ಷೇತ್ರದಿಂದ ಮಾಜಿ ಸಚಿವ ಬಾಬುರಾವ್ ಚವ್ಹಾಣ ಅಥವಾ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುಭಾಷ್ ರಾಠೋಡ ಅವರನ್ನು ಕಣಕ್ಕಿಳಿಸಿ ಜಾಧವ್ ಅವರಿಗೇ ಟಕ್ಕರ್ ನೀಡಲು ಸಜ್ಜಾಗಿದ್ದಾರೆ.

2013 ಹಾಗು 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋತ ಮಾಜಿ ಸಚಿವ ಸುನಿಲ್ ವಲ್ಯಾಪುರ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇನ್ನೊಂದೆಡೆ ಕುಟುಂಬ ರಾಜಕಾರಣದ ವಿರುದ್ಧ ಸಿಟ್ಟಾಗಿ ಕಾಂಗ್ರೆಸ್‍ನಿಂದ ಬಿಜೆಪಿ ಸೇರಿದ್ದ ಉಮೇಶ್ ಜಾಧವ್, ತಮ್ಮ ಸಹೋದರ ರಾಮಚಂದ್ರ ಜಾಧವ್ ಅವರಿಗೆ ಬಿಜೆಪಿಯ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಪಕ್ಷ ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧ ಎಂದು ರಾಮಚಂದ್ರ ಜಾಧವ್ ಹೇಳುತ್ತಿದ್ದಾರೆ.

ಸದ್ಯ ತೆರೆಮರೆಯಲ್ಲಿ ಆಪರೇಷನ್ ಕಮಲ ನಡೆಸಿ ರಾಜ್ಯದಲ್ಲಿ ಕಮಲ ಅರಳಿಸಲು ಮುಂದಾಗಿರುವ ಬಿಜೆಪಿ ನಾಯಕರಿಗೆ, ಚಿಂಚೋಳಿ ಹಾಗು ಕುಂದಗೋಳ ಕ್ಷೇತ್ರಗಳ ಉಪಚುನಾವಣೆ ಸೆಮಿಫೈನಲ್ ಮ್ಯಾಚ್‍ನಂತಾಗಿದೆ.

Leave a Reply

Your email address will not be published. Required fields are marked *