ಕಲಬುರಗಿ: ವಿದ್ಯುತ್ ತಂತಿ ತಗುಲಿ ಟ್ರ್ಯಾಕ್ಟರ್ ನಲ್ಲಿದ್ದ ಜೋಳದ ಮೇವಿನ ಕಣಕಿಗೆ ಬೆಂಕಿ ಹತ್ತಿಕೊಂಡ ಘಟನೆ ಕಲಬುರಗಿಯಲ್ಲಿ (Kalaburagi) ನಡೆದಿದೆ.
ಕಲಬುರಗಿ ತಾಲೂಕಿನ ಮೇಳಕುಂದಾ ಬಿ. ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ಮೇವಿನ ಕಣವು ಮಲ್ಲಿನಾಥ್ ಕೊಳ್ಳುರ ಎಂಬವರಿಗೆ ಸೇರಿದ್ದಾಗಿದೆ. ಇದನ್ನೂ ಓದಿ: ಚುನಾವಣೆಗೆ ಖರ್ಚು ಮಾಡಲು ನಮ್ಮ ಪಕ್ಷದಲ್ಲಿ ಹಣವಿಲ್ಲ: ಖರ್ಗೆ
Advertisement
Advertisement
ಮಲ್ಲಿನಾಥ್ ಅವರು ಶಹಬಾದ್ ತಾಲೂಕಿನ ಹೊನಗುಂಟಿ ಗ್ರಾಮದಲ್ಲಿ ಮೇವಿನ ಕಣಕಿ ಖರಿದಿಸಿದ್ದರು. ಬಳಿಕ ಒಂದೇ ಟ್ರ್ಯಾಕ್ಟರ್ ನ ಎರಡು ಟ್ರ್ಯಾಲಿಯಲ್ಲಿ ತುಂಬಿಕೊಂಡು ತೆರಳುತ್ತಿದ್ದರು. ಹೀಗೆ ಹೋಗುತ್ತಿದ್ದ ಸಂದರ್ಭದಲ್ಲಿ ಮೇಳಕುಂದಾ ಗ್ರಾಮದ ಬೀದಿ ಬದಿಯ ವಿದ್ಯುತ್ ತಂತಿ ತಗುಲಿ ಶಾರ್ಟ್ ಸರ್ಕ್ಯೂಟ್ ಆಗಿ ಹೊತ್ತಿ ಉರಿದಿದೆ.
Advertisement
Advertisement
ನೋಡ ನೋಡ್ತಿದ್ದಂತೆಯೇ ಕ್ಷಣಾರ್ಧದಲ್ಲಿ 2 ಟ್ರ್ಯಾಲಿಯಲ್ಲಿನ ಕಣಕಿಗೆ ಬೆಂಕಿಗೆ ಆಹುತಿಯಾಗಿದೆ. ಕೂಡಲೇ ಸ್ಥಳೀಯರು ಮತ್ತು ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
ಫರಹತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.