ದತ್ತನ ಹುಂಡಿಗೆ ಹರಿದು ಬಂದ ಕಾಣಿಕೆ ಹೊಳೆ – 97 ಲಕ್ಷ ರೂ. ಸಂಗ್ರಹ

Public TV
1 Min Read
MONEY

ಕಲಬುರಗಿ: ಜಿಲ್ಲೆಯ ಧಾರ್ಮಿಕ ಕ್ಷೇತ್ರ ಗಾಣಗಾಪುರ ದತ್ತಾತ್ರೇಯ ದೇವಸ್ಥಾನದ (Dattatreya Kshetra) ಹುಂಡಿಗೆ ಭಕ್ತರಿಂದ ಲಕ್ಷಾಂತರ ರೂ. ಕಾಣಿಕೆ ಹಾಗೂ ಚಿನ್ನಾಭರಣ ಹರಿದು ಬಂದಿದೆ.

ಕಾಣಿಕೆಯನ್ನು ಅಧಿಕಾರಿಗಳು ಲೆಕ್ಕ ಮಾಡಿದ್ದಾರೆ. ಈ ವೇಳೆ 97,10,152 ರೂ. ನಗದು ಹಣವನ್ನು ಭಕ್ತರು ಹುಂಡಿಗೆ ಹಾಕಿದ್ದಾರೆ. 26 ಗ್ರಾಂ ಚಿನ್ನ ಹಾಗೂ 500 ಗ್ರಾಂ ಬೆಳ್ಳಿ ಹುಂಡಿಯಲ್ಲಿ ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಜನರಲ್ ತಿಮ್ಮಯ್ಯ ವೃತ್ತಕ್ಕೆ ಗುದ್ದಿದ ಕೆಎಸ್‌ಆರ್‌ಟಿಸಿ ಬಸ್ – ನೆಲಕ್ಕುರುಳಿದ ಸೇನಾನಿ ಪ್ರತಿಮೆ

ತಹಶೀಲ್ದಾರ್ ಹಾಗೂ ದೇವಸ್ಥಾನದ (Temple) ಆಡಳಿತ ಮಂಡಳಿಯ ಸಮ್ಮುಖದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆಸಲಾಗಿದೆ. ಶಕ್ತಿ ಯೋಜನೆ (Shakti Scheme) ಜಾರಿ ಬಳಿಕ ಮೊದಲ ಬಾರಿಗೆ ಹುಂಡಿ ಹಣ ಎಣಿಕೆಯನ್ನು ದೇವಸ್ಥಾನದ ಆಡಳಿತ ಮಂಡಳಿ ಮಾಡಿದೆ. ಯೋಜನೆ ಜಾರಿಯಾದ ಬಳಿಕ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳ ಆಗಿತ್ತು. ಇದರ ಪರಿಣಾಮ ಭಾರೀ ಮೊತ್ತದ ಕಾಣಿಕೆ ಸಂಗ್ರಹವಾಗಿದೆ.

ದತ್ತಾತ್ರೇಯ ಸನ್ನಿಧಿಗೆ ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ತೆಲಂಗಾಣ, ಆಂದ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳಿಂದ ಪ್ರತಿನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಾರೆ. ಇದನ್ನೂ ಓದಿ: ವೀಸಾ ಅವಧಿ ಮುಗಿದರೂ ಗುಜರಾತ್‌ನಲ್ಲಿ ಅಕ್ರಮ ನೆಲೆ – 45 ಪಾಕಿಸ್ತಾನಿ ಹಿಂದೂಗಳ ಬಂಧನ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article