ಕಲಬುರಗಿ: ಕೊರೊನಾ ವೈರಸ್‍ನಿಂದಾಗಿ ಸಾವನ್ನಪ್ಪಿದ್ದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯನ ಪತ್ನಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಅಧಿಕೃತ ಪ್ರಕಟನೆ ಹೊರಡಿಸಿದೆ.
Advertisement
ಆರಂಭದಲ್ಲಿ ಚಿಕಿತ್ಸೆ ನೀಡಿದ್ದ ವೈದ್ಯರಲ್ಲಿ ಕೊರೊನಾ ಲಕ್ಷಣಗಳ ಕಂಡು ಬಂದ ಹಿನ್ನೆಲೆಯಲ್ಲಿ ಐಸೋಲೇಷನ್ ನಲ್ಲಿರಿಸಲಾಗಿತ್ತು. ಮೊದಲ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ 14 ದಿನಗಳ ಕಾಲ ಕಲಬುರಗಿಯ ಇಎಸ್‍ಐ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ವೈದ್ಯನ ಕಫ ಹಾಗೂ ರಕ್ತದ ಮಾದರಿಯನ್ನು ಎರಡನೇ ಬಾರಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಎರಡನೇ ವರದಿಯಲ್ಲಿ ಕೊರೊನಾ ನೆಗಟಿವ್ ಎಂದು ಬಂದಿದೆ.
Advertisement
Advertisement
ಇತ್ತ ವೈದ್ಯರ ಪತ್ನಿಯನ್ನು 14 ದಿನಗಳಿಂದ ಹೋಮ್ ಕ್ವಾರಂಟೈನ್ ಮಾಡಿ, ಕಫ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಮಹಿಳೆಯ ವರದಿ ಪಾಸಿಟಿವ್ ಬಂದು ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮಹಿಳೆಯನ್ನು ಕಲಬುರಗಿಯ ಇಎಸ್‍ಐ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.