– ಲಕ್ಕಿ ಕ್ಷೇತ್ರ ಕಲಬುರಗಿಯಿಂದಲೇ ‘ಲೋಕ’ಸಮರಕ್ಕೆ ಕಹಳೆ ಊದಿದ ಮೋದಿ
– ಉಮೇಶ್ ಜಾಧವ್‌ಗೆ ‘ಕೈ’ ಎದುರಾಳಿ ಯಾರು?
ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ತವರು ಕಲಬುರಗಿ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲೇ ಕ್ಷೇತ್ರ ಹೆಚ್ಚು ಕುತೂಹಲ ಮೂಡಿಸುತ್ತದೆ. ಸ್ವಾತಂತ್ರ್ಯ ನಂತರದಲ್ಲಿ ನಾಲ್ಕು ದಶಕಗಳ ಕಾಲ ಕಲಬುರಗಿ ಕಾಂಗ್ರೆಸ್ ತೆಕ್ಕೆಯಲ್ಲಿತ್ತು. 1996 ಜೆಡಿಎಸ್ ಅಭ್ಯರ್ಥಿ ಕಮರ್ ಉಲ್ ಇಸ್ಲಾಂ ಗೆಲುವು ದಾಖಲಿಸಿ ‘ಕೈ’ ತೆಕ್ಕೆಯಿಂದ ಕ್ಷೇತ್ರವನ್ನು ಮೊದಲ ಬಾರಿಗೆ ಬಿಡಿಸಿದರು. ಅದಾದ ಬಳಿಕ ಒಮ್ಮೆ ಬಿಜೆಪಿ ಕೂಡ ಕ್ಷೇತ್ರದಲ್ಲಿ ಜಯ ಸಾಧಿಸಿತು. ಮತ್ತೆ ಎರಡು ದಶಕಗಳ ಕಾಲ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ ಸೇರಿತು. ಈಗ ಬಿಜೆಪಿ ಹಿಡಿತಕ್ಕೆ ಸಿಕ್ಕಿದೆ.
Advertisement
1999 ರಿಂದ ಎರಡು ಅವಧಿಗೆ ಕಾಂಗ್ರೆಸ್‌ನ (Congress) ಇಕ್ಬಾಲ್ ಅಹ್ಮದ್ ಸರಡಗಿ (1999, 2004) ಸಂಸದರಾಗಿದ್ದರು. ನಂತರ 2009 ರಲ್ಲಿ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದರು. ಮನಮೋಹನ್ ಸಿಂಗ್ (Manmohan Singh) ಸಂಪುಟದಲ್ಲಿ ಕೇಂದ್ರ ಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದರು. ಖರ್ಗೆ 2009, 2014 ಎರಡು ಬಾರಿ ಗೆದ್ದು ಪಾರ್ಲಿಮೆಂಟ್ ಪ್ರವೇಶಿಸಿದ್ದರು. ಆದರೆ 2019 ರಲ್ಲಿ ಬಿಜೆಪಿಯ ಉಮೇಶ್ ಜಾಧವ್ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡರು. ಈಗ ಮತ್ತೆ ಚುನಾವಣೆಗೆ ಅಖಾಡ ಸಜ್ಜಾಗಿದೆ. ಇದನ್ನೂ ಓದಿ: Uttara Kannada Lok Sabha 2024: ಬಿಜೆಪಿ ನಾಗಾಲೋಟಕ್ಕೆ ಕಾಂಗ್ರೆಸ್ ಹಾಕುತ್ತಾ ಬ್ರೇಕ್?
Advertisement
Advertisement
ಕ್ಷೇತ್ರ ಪರಿಚಯ
ಗುಲ್ಬರ್ಗ ಲೋಕಸಭಾ ಕ್ಷೇತ್ರವನ್ನು 1951 ರಲ್ಲಿ ಅಂದರೆ ಸಾರ್ವತ್ರಿಕ ಚುನಾವಣೆಗೂ ಮೊದಲು ರಚಿಸಲಾಯಿತು. 1952 ರಲ್ಲಿ ಕ್ಷೇತ್ರಕ್ಕೆ ನಡೆದ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ವಾಮಿ ರಮಾನಂದ ತೀರ್ಥರು ಸ್ಪರ್ಧಿಸಿ ಜಯಗಳಿಸಿದ್ದರು.
Advertisement
ವಿಧಾನಸಭಾ ಕ್ಷೇತ್ರಗಳೆಷ್ಟು?
ಕಲಬುರಗಿ (Kalaburagi Lok Sabha 2024) ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿವೆ. ಕಲಬುರಗಿ ಉತ್ತರ, ಕಲಬುರಗಿ ದಕ್ಷಿಣ, ಕಲಬುರಗಿ ಗ್ರಾಮೀಣ, ಸೇಡಂ, ಚಿತ್ತಾಪುರ, ಅಫಜಲಪುರ್, ಜೇವರ್ಗಿ ಹಾಗೂ ಗುರುಮಠಕಲ್ ಕ್ಷೇತ್ರಗಳನ್ನು ಒಳಗೊಂಡಿದೆ.
ಒಟ್ಟು ಮತದಾರರು ಎಷ್ಟು?
ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 22,79,426 ಮತದಾರರು ಇದ್ದಾರೆ. ಪುರುಷರು 10,40,615 ಹಾಗೂ ಮಹಿಳೆಯರು 10,38,532 ಮತದಾರರಿದ್ದಾರೆ. ಇದನ್ನೂ ಓದಿ: Haveri-Gadag Lok Sabha 2024: ಬಿಜೆಪಿ v/s ಕಾಂಗ್ರೆಸ್ – ಗೆಲುವು ಯಾರಿಗೆ?
ಕಳೆದ ಚುನಾವಣೆಯಲ್ಲಿ ಏನಾಗಿತ್ತು?
2019 ರಲ್ಲಿ ನಡೆದ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪರ್ಧಿಸಿದ್ದರು. ಅವರ ಎದುರಿಗೆ ಆಪರೇಶನ್ ಕಮಲ ಮೂಲಕ ಚಿಂಚೋಳಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಲಬುರಗಿ ಲೋಕಸಭೆಯ ಬಿಜೆಪಿ ಅಭ್ಯರ್ಥಿಯಾಗಿ ಡಾ.ಉಮೇಶ್ ಜಾಧವ್ (Umesh Jadhav) ಸ್ಪರ್ಧಿಸಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮೊದಲ ಬಾರಿಗೆ ಸೋಲಿನ ರುಚಿ ತೋರಿಸಿದ್ದರು. ಖರ್ಗೆ 95,457 ಮತಗಳ ಅಂತರದಿಂದ ಸೋತಿದ್ದರು. ಆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿದ್ದರೂ ಜೆಡಿಎಸ್‌ಗೆ ತನ್ನದೆ ಆದ ಅಸ್ವಿತ್ವ ಇಲ್ಲದ ಹಿನ್ನೆಲೆ ಅಷ್ಟು ಪ್ರಮಾಣದಲ್ಲಿ ಕಾಂಗ್ರೆಸ್‌ಗೆ ಲಾಭ ಆಗಲಿಲ್ಲ.
ಮೀಸಲು ಕ್ಷೇತ್ರ ಕಲಬುರಗಿ
ಸಂಸದೀಯ ಕ್ಷೇತ್ರಗಳ ವಿಂಗಡಣೆಯ ನಂತರ ಕಲಬುರಗಿ ಲೋಕಸಭಾ ಕ್ಷೇತ್ರ 2008ರಲ್ಲಿ ಎಸ್‌ಸಿ ಮೀಸಲು ಕ್ಷೇತ್ರವಾಗಿ ಮಾರ್ಪಟ್ಟಿತು. ನಂತರ 2009ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆ ಸಂಸದರಾಗಿ ಆಯ್ಕೆಯಾಗಿದ್ದರು. ನಂತರ 2013ರಲ್ಲಿ ಮೋದಿ ಅಬ್ಬರದ ಮಧ್ಯೆಯೂ ಸಹ ಖರ್ಗೆ ಅವರು ಸುಮಾರು 63 ಸಾವಿರ ಮತಗಳ ಅಂತರದಿಂದ ಬಿಜೆಪಿಯ ರೇವುನಾಯಕ ಬೆಳಮಗಿಗೆ ಸೋಲಿನ ರುಚಿ ತೋರಿಸಿದ್ದರು. ಆದರೆ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಳ ಜಗಳ ಹಾಗೂ ಸಚಿವ ಸ್ಥಾನದಿಂದ ವಂಚಿತರಾಗಿದ್ದ ಮಾಲೀಕಯ್ಯ ಗುತ್ತೇದಾರ್, ಬಾಬುರಾವ್ ಚಿಂಚನಸೂರ್,ಮಾಜಿ ಶಾಸಕರಾದ ವಿಶ್ವನಾಥ ಪಾಟೀಲ್ ಹೆಬ್ಬಾಳ, ಮಾಲಕರೆಡ್ಡಿ ಸೇರಿದಂತೆ ಹಲವು ನಾಯಕರು ಖರ್ಗೆ ವಿರುದ್ಧ ತೊಡೆ ತಟ್ಟಿ ಚಿಂಚೋಳಿಯ ಡಾ.ಉಮೇಶ್ ಜಾಧವ್‌ಗೆ ಶಾಸಕ ಸ್ಥಾನದಿಂದ ರಾಜೀನಾಮೆ ಕೊಡಿಸಿ ಖರ್ಗೆ ವಿರುದ್ಧ ಕಣಕ್ಕೆ ಇಳಿಸಿದ್ದರು. ಪರಿಣಾಮವಾಗಿ ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಿನಾಯ ಸೋಲಾಯಿತು.
ಉಮೇಶ್ ಜಾಧವ್ ಬಿಜೆಪಿ ಟಿಕೆಟ್
ಸೋಲಿಲ್ಲದ ಸರದಾರನನ್ನು 2019 ರ ಚುನಾವಣೆಯಲ್ಲಿ ಮಣಿಸಿದ್ದ ಬಿಜೆಪಿ ಸಂಸದ ಉಮೇಶ್ ಜಾಧವ್‌ಗೆ ಬಿಜೆಪಿ ಮತ್ತೆ ಟಿಕೆಟ್ ಕೊಟ್ಟಿದೆ. 2019 ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಾಗಿ ಚುನಾವಣೆ ಎದುರಿಸಿದ್ದವು. ಆದರೆ ಈ ಸಲ ಉಲ್ಟಾ ಆಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಾಗಿವೆ. ಬಿಜೆಪಿಯಿಂದ ಹಾಲಿ ಸಂಸದ ಡಾ.ಉಮೇಶ್ ಜಾಧವ್ ಈಗಾಗಲೇ ಕಾಂಗ್ರೆಸ್ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ. ಇದನ್ನೂ ಓದಿ: Dharwad Lok Sabha 2024: ಬಿಜೆಪಿ ನಾಗಾಲೋಟಕ್ಕೆ ಕಡಿವಾಣ ಹಾಕುತ್ತಾ ‘ಕೈ’?
‘ಕೈ’ ಟಿಕೆಟ್ ಕಗ್ಗಂಟು
ಕಾಂಗ್ರೆಸ್‌ನಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭ್ಯರ್ಥಿ ಆದರೆ ಮಾತ್ರ ಟಫ್ ಫೈಟ್ ಆಗುವುದರಲ್ಲಿ ಎರಡು ಮಾತಿಲ್ಲ. ಆದರೆ ಎಐಸಿಸಿ ಅಧ್ಯಕ್ಷರಾದ ಹಿನ್ನೆಲೆ ದೇಶ ಸುತ್ತಿ ಪಕ್ಷವನ್ನು ಅಧಿಕಾರಕ್ಕೆ ತರಲು ಖರ್ಗೆ ಪಣ ತೊಟ್ಟಿದ್ದು, ಕಲಬುರಗಿ ಲೋಕಸಭೆಯಿಂದ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ. ಒಂದು ವೇಳೆ ಅವರು ಸ್ಪರ್ಧೆಗೆ ನಿರಾಕರಿಸಿದರೆ ಅವರ ಅಳಿಯ ರಾಧಾಕೃಷ್ಣ, ಪುತ್ರ ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ ರೇವುನಾಯಕ, ಬೆಳಮಗಿ ಬಂಜಾರಾ ಮುಖಂಡ ಸುಭಾಶ್ ರಾಠೋಡ್ ಪೈಕಿ ಯಾರಾದರು ಒಬ್ಬರಿಗೆ ಟಿಕೆಟ್ ಪಕ್ಕ ಎನ್ನಲಾಗುತ್ತಿದೆ. ಖರ್ಗೆ ಅಳಿಯ ರಾಧಾಕೃಷ್ಣ ಅವರಿಗೆ ಟಿಕೆಟ್ ಸಿಗಬಹುದು ಎಂಬ ಮಾತು ಕೇಳಿಬರುತ್ತಿದೆ.
ಮೈತ್ರಿಯಿಂದ ಬಿಜೆಪಿಗೆ ಲಾಭ?
ಕಾಂಗ್ರೆಸ್ ಭದ್ರಕೋಟೆಯಾಗಿರುವ ಕಲಬುರಗಿ ಲೋಕಸಭೆಯಲ್ಲಿ ಜೆಡಿಎಸ್ ಹೇಳಿಕೊಳ್ಳುವಷ್ಟು ತಳಮಟ್ಟದಲ್ಲಿ ಪಕ್ಷ ಸಂಘಟನೆ ಇಲ್ಲ. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೇವರ್ಗಿಯಿಂದ ದೊಡಪ್ಪಗೌಡ ಪಾಟೀಲ್ ಹಾಗೂ ಸೇಡಂ ಕ್ಷೇತ್ರದ ಪರಾಜಿತ ಅಭ್ಯರ್ಥಿ ಬಾಲರಾಜ್ ಗುತ್ತೇದಾರ್ ತಮ್ಮದೆ ಆದ ಛಾಪು ಹೊಂದಿದ್ದಾರೆ. ಹೀಗಾಗಿ ಇದು ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗಿದೆ. ಇದನ್ನೂ ಓದಿ: Hassan Lok Sabha 2024: ದೊಡ್ಡಗೌಡ್ರ ಭದ್ರಕೋಟೆ ಭೇದಿಸಲು ಕಾಂಗ್ರೆಸ್ ಕಸರತ್ತು!
ಯಾವ ಅವಧಿಯಲ್ಲಿ ಯಾವ ಪಕ್ಷ ಗೆದ್ದಿತ್ತು?
2009: ಮಲ್ಲಿಕಾರ್ಜುನ ಖರ್ಗೆ – ಕಾಂಗ್ರೆಸ್ (13,404 ಮತ, ಗೆಲುವಿನ ಅಂತರ)
2014: ಮಲ್ಲಿಕಾರ್ಜುನ ಖರ್ಗೆ – ಕಾಂಗ್ರೆಸ್ (74,733 ಮತ, ಗೆಲುವಿನ ಅಂತರ)
2019: ಡಾ.ಉಮೇಶ್ ಜಾಧವ್ – ಬಿಜೆಪಿ (95,452 ಗೆಲುವಿನ ಅಂತರ)
ಜಾತಿವಾರು ಲೆಕ್ಕಾಚಾರ
ಲಿಂಗಾಯತ – 5,30,000
ಎಸ್‌ಸಿ/ಎಸ್‌ಟಿ – 3,80,000
ಮುಸ್ಲಿಂ – 3,10,000
ಕೊಲಿ – 2,70,000
ಲಂಬಾಣಿ – 2,20,000
ಕುರುಬ – 1,90,000
ಬ್ರಾಹ್ಮಣ – 90,000
ಗಾಣಿಗ – 80,000
ರೆಡ್ಡಿ – 75,000
ಇತರೆ – 1,23,000