ಬೆಂಗಳೂರು/ ಕುವೈಟ್ ನಗರ: ಕುವೈಟ್ ವಸತಿ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕಲಬುರಗಿಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಆಳಂದ ತಾಲೂಕಿನ ವಿಜಯ್ ಕುಮಾರ್ ಪ್ರಸನ್ನ ಮೃತ ವ್ಯಕ್ತಿ. ಅಗ್ನಿ ದುರಂತದಲ್ಲಿ ಒಟ್ಟು 40 ಭಾರತೀಯರು ಸಾವನ್ನಪ್ಪಿದ್ದಾರೆ.
Advertisement
Advertisement
ಕುವೈತ್‌ನ ದಕ್ಷಿಣದಲ್ಲಿರುವ ಅಹ್ಮದಿ ಆಡಳಿತ ಪ್ರಾಂತ್ಯದ ಮಂಗಾಫ್ ಪ್ರದೇಶದ 6 ಮಹಡಿಗಳ ಕಟ್ಟಡವೊಂದರಲ್ಲಿ ಅಡುಗೆ ಮನೆಯಲ್ಲಿ ಬುಧವಾರ ಬೆಂಕಿ ಹೊತ್ತಿಕೊಂಡಿತ್ತು. ಇದು ದುರಂತಕ್ಕೆ ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
Advertisement
ಈ ಕಟ್ಟಡದಲ್ಲಿ ಒಂದೇ ಕಂಪನಿಯ 160 ಮಂದಿ ಕೆಲಸಗಾರರು ವಾಸಿಸುತ್ತಿದ್ದರು. ಮೃತಪಟ್ಟವರಲ್ಲಿ ಭಾರತೀಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.