ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಗೆ ಇದೇ ತಿಂಗಳು 20ರಂದು ನಡೆಯಬೇಕಾಗಿದ್ದ ಮೇಯರ್ ಚುನಾವಣೆಯನ್ನು ಮುಂದೂಡಿ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.
Advertisement
ನವೆಂಬರ್ 20ರಂದು ಕಲಬುರಗಿ ಪಾಲಿಕೆಯ 23ನೇ ಮೇಯರ್, ಉಪ ಮೇಯರ್ ಹಾಗೂ ವಿವಿಧ ಸ್ಥಾಯಿ ಸಮಿತಿಗಳಿಗೆ ಚುನಾವಣೆ ನಡೆಯಬೇಕಾಗಿತ್ತು. ಆದರೆ ಭಾರತ ಚುನಾವಣಾ ಆಯೋಗದ ಅಧಿಸೂಚನೆ ಅನ್ವಯ ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡಿರುವ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ವಿಧಾನ ಪರಿಷತ್ ಸದಸ್ಯ ಸ್ಥಾನಗಳಿಗೆ ಚುನಾವಣೆ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಪಾಲಿಕೆಯ ಮೇಯರ್ ಚುನಾವಣೆಯನ್ನು ಮುಂದೂಡಿದೆ. ಇದನ್ನೂ ಓದಿ: ಪುನೀತ್ ಅಭಿಮಾನಿಗಳಿಗೆ ಅಶ್ವಿನಿ ಭಾವನಾತ್ಮಕ ಪತ್ರ
Advertisement
Advertisement
ಒಟ್ಟು 55 ವಾರ್ಡ್‍ಗಳಿಗೆ ಚುನಾವಣೆ ನಡೆದಿತ್ತು. ಬಿಜೆಪಿ 24, ಕಾಂಗ್ರೆಸ್ 27 ಮತ್ತು ಜೆಡಿಎಸ್ 4 ಸದಸ್ಯರನ್ನು ಒಳಗೊಂಡಿದೆ. ಕಲಬುರಗಿ ಮೇಯರ್ ಸ್ಥಾನ ಅಲಂಕರಿಸಲು ಜೆಡಿಎಸ್ ಬೆಂಬಲವೇ ನಿರ್ಣಾಯಕ. ಇದನ್ನೂ ಓದಿ: ʼಅಪ್ಪುʼಗೆ ನನ್ನ ದೃಷ್ಟಿಯೇ ತಾಗಿತೇನೊ ಅನಿಸುತ್ತೆ: ತಮ್ಮನ ನೆನೆದು ಶಿವಣ್ಣ ಕಣ್ಣೀರು