– ಪಿಎಸ್ಐ ನೇಮಕಾತಿ ಪರೀಕ್ಷೆಯ ಆರೋಪಿಯಾಗಿರೋ ಕಾನ್‌ಸ್ಟೇಬಲ್
ಕಲಬುರಗಿ: ವಿಷ ಸೇವಿಸಿ ಸಿಎಆರ್ ಪೊಲೀಸ್ ಕಾನ್‌ಸ್ಟೇಬಲ್‌ವೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿ ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದಿದೆ.
ರುದ್ರಗೌಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್. ಇವರು ಪಿಎಸ್ಐ ನೇಮಕಾತಿ ಪರೀಕ್ಷೆಯ ಆರೋಪಿಯಾಗಿದ್ದಾರೆ. ರುದ್ರಗೌಡ ಮೇಲೆ ಎರಡ್ಮೂರು ಪ್ರಕರಣಗಳಲ್ಲಿ ಇಲಾಖಾ ವಿಚಾರಣೆ ನಡೆಸುತ್ತಿದೆ.
ಬಡ್ತಿ ಸೇರಿ ಹಲವು ಸೌಲಭ್ಯಗಳನ್ನ ಇಲಾಖೆ ತಡೆ ಹಿಡದಿತ್ತು. ಜೊತೆಗೆ ನಾಳೆ ಕಾನ್‌ಸ್ಟೇಬಲ್ ಪರೀಕ್ಷೆ ನಡೆಯುವ ಹಿನ್ನಲೆ ಎಲ್ಲರ ಮೇಲೆ ಪೊಲೀಸರು ನಿಗಾವಹಿಸಿದ್ದರು. ಇದೆಲ್ಲದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ವಿಷ ಸೇವಿಸಿದ ಕಾನ್‌ಸ್ಟೇಬಲ್ ರುದ್ರಗೌಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
