ಕಲಬುರಗಿ: ಕೆಲ ಯುವತಿಯರನ್ನು ಕರೆ ತಂದು ಕಲಬುರಗಿ ನಗರದಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ. ಬಾಂಗ್ಲಾದೇಶ, ಪಶ್ಚಿಮ ಬಂಗಾಳ ಸೇರಿದಂತೆ ಉತ್ತರ ಭಾರತದಿಂದ ಯುವತಿಯರನ್ನು ಜಿಲ್ಲೆಗೆ ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಭಯಾನಕ ಸತ್ಯ ಹೊರಬಿದ್ದಿದೆ.
ಜಿಲ್ಲೆಯಲ್ಲಿ ನಡೆಯುತ್ತಿರುವ ವೇಶ್ಯಾವಾಟಿಕೆ ದಂಧೆಯಿಂದ ಜನ ಮಾರಕ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಈ ಹಿಂದೆ ಹಲವು ಬಾರಿ ಲಾಡ್ಜ್ ಹಾಗು ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಬಾಂಗ್ಲಾದೇಶ ಸೇರಿದಂತೆ ಉತ್ತರ ಭಾರತದ ನೂರಾರು ಯುವತಿಯರನ್ನ ರಕ್ಷಿಸಿದ್ದಾರೆ. ಇಷ್ಟಾದರೂ ಈ ದಂಧೆಗೇ ಇಲ್ಲಿಯವರೆಗೂ ಯಾರು ಬ್ರೇಕ್ ಹಾಕಲು ಆಗಿಲ್ಲ.
Advertisement
Advertisement
ಈ ಯುವತಿಯರನ್ನು ರಾಜ್ಯದ ಮೂಲೆ ಮೂಲೆಗಳಲ್ಲಿ ಈ ದಂಧೆಗೆ ತಲುಪಿಸುವ ಒಂದು ವ್ಯವಸ್ಥಿತ ಗ್ಯಾಂಗ್ ಸಹ ಸಕ್ರಿಯವಾಗಿದೆ. ಇದರ ಪರಿಣಾಮ ಕರ್ನಾಟಕ ರಾಜ್ಯದ ಗಡಿ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ತುಮಕೂರು, ರಾಯಚೂರು, ಕೊಪ್ಪಳ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಏಡ್ಸ್ ಪ್ರಕರಣಗಳು ಹೆಚ್ಚಾಗಿವೆ. ಈ ಬಗ್ಗೆ ಏಡ್ಸ್ ನಿಯಂತ್ರಣ ಅಧಿಕಾರಿಗಳನ್ನು ಕೇಳಿದ್ರೆ, ನಾವು ಸಾಕಷ್ಟು ಜಾಗೃತಿ ಮೂಡಿಸುತ್ತಿದ್ದೆವೆ, ಆದರೆ ಅಸುರಕ್ಷಿತ ಲೈಂಗಿಕತೆಯಿಂದ ಇದು ಈ ಪ್ರಮಾಣದಲ್ಲಿ ದಾಖಲಾಗಿರುವುದಾಗಿ ಹೇಳುತ್ತಿದ್ದಾರೆ.