ಗದಗ: ಮಹದಾಯಿ, ಕಳಸಾ ಬಂಡೂರಿ ನೀರಿಗಾಗಿ ಆಗ್ರಹಿಸಿ ಇಂದು ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಸಂಪೂರ್ಣ ಬಂದ್ ಆಚರಿಸಲಾಯಿತು.
Advertisement
ರೈತಸೇನೆ ರೈತರ ನಿರಂತರ ಹೋರಾಟಕ್ಕೆ ಇಂದಿಗೆ ನಾಲ್ಕು ವರ್ಷ ಪೂರೈಸಿದ ಹಿನ್ನೆಲೆ ರೈತ ಮುಖಂಡ ವೀರೇಶ ಸೊಬರದಮಠ ನೇತೃತ್ವದಲ್ಲಿ ಬಂದ್‍ಗೆ ಕರೆ ನೀಡಲಾಗಿತ್ತು. ಅಗಸ್ಟ್ 14, 2018 ರಂದು ಮಹದಾಯಿಗಾಗಿ ನ್ಯಾಯಾಧೀಕರಣದಿಂದ ರಾಜ್ಯಕ್ಕೆ 13.5 ಟಿಎಂಸಿ ನೀರು ಬಿಡುವಂತೆ ಆದೇಶ ನೀಡಲಾಗಿತ್ತು. ನ್ಯಾಯಾಧೀಕರಣ ತೀರ್ಪು ನೀಡಿ ವರ್ಷಗಳೇ ಕಳೆದರೂ ಯೋಜನೆ ಕಾರ್ಯ ರೂಪಕ್ಕೆ ಬಾರದ ಹಿನ್ನೆಲೆ ನರಗುಂದ ಬಂದ್ ಮಾಡುವ ಮೂಲಕ ರೈತರು ಆಕ್ರೋಶ ವ್ಯಕ್ತಪಡಿಸಿದರು.
Advertisement
Advertisement
ಮಹದಾಯಿ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯವನ್ನು ವಿರೋಧಿಸಿ ರೈತ ಮುಖಂಡರು ಹೋರಾಟ ನಡೆಸಿದರು.
Advertisement
ತಾಲೂಕಿನ ಚಿಕ್ಕನರಗುಂದ ಸೇರಿದಂತೆ ಅನೇಕ ಹಳ್ಳಿಗಳಲ್ಲಿ ಸಹ ರಸ್ತೆಗೆ ಮುಳ್ಳಿನ ಬೇಲಿಹಾಕಿ ರಸ್ತೆಮಧ್ಯೆ ಟೈರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿದರು.
ಗದಗ, ಬೆಳಗಾವಿ, ಧಾರವಾಡ, ಬಾಗಲಕೋಟೆ ಜಿಲ್ಲೆಯ 11 ತಾಲೂಕಿನ ನೂರಾರು ರೈತರು ಹೋರಾಟ ನಡೆಸುವ ಮೂಲಕ ಎಚ್ಚರಿಕೆ ನೀಡಿದರು. ಬಂದ್ ಹಿನ್ನೆಲೆ ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು.