ಕಲಬುರಗಿ: ರಾಮಲಿಂಗಾ ರೆಡ್ಡಿ ಮತ್ತು ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ವಿಫಲರಾಗಿ, ಬಿಜೆಪಿ ವಿರುದ್ಧ ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ರಾಮಲಿಂಗಾ ರೆಡ್ಡಿ ಗೃಹ ಸಚಿವರಾಗಿ, ಬಿಜೆಪಿಯವರು ಸತ್ತವರ ಮನೆಗೆ ಹೋಗಿ ರಾಜಕೀಯ ಮಾಡ್ತಾರೆ ಅಂತಾ ಗಲ್ಲಿ ನಾಯಕರ ರೀತಿಯಲ್ಲಿ ಮಾತನಾಡಬೇಡಿ ಎಂದು ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ.
ಕಲಬುರಗಿ ನಗರಕ್ಕೆ ಆಗಮಿಸಿದ್ದ ಸಂಸದ ಪ್ರಹ್ಲಾದ್ ಜೋಶಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಇವತ್ತು ರಾಜ್ಯದಲ್ಲಿ ಕೊಲೆ ಸುಲಿಗೆ ನಡೆಯುತ್ತಿವೆ. ರಾಜ್ಯದಲ್ಲಿ ಮಟಕಾ ಮತ್ತು ಓಸಿ ದಂಧೆಗಳು ಮತ್ತೆ ತಲೆ ಎತ್ತುತ್ತಿವೆ. ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಕೊಲೆ ಮಾಡಿದ ಹಂತಕರನ್ನು ಬಂಧಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಕಾಂಗ್ರೆಸ್ ಸರ್ಕಾರದಿಂದ ಎಂ.ಎಂ.ಕಲಬುರ್ಗಿ ಮತ್ತು ಗೌರಿ ಲಂಕೇಶ್ ಆರೋಪಿಗಳ ಸುಳಿವು ಸಹ ಕಂಡು ಹಿಡಿಯುವಲ್ಲಿ ಯಶಸ್ವಿಯಾಗಿಲ್ಲ. ಇತ್ತೀಚೆಗೆ ಬೆಂಗಳೂರಿನಲ್ಲಿ ಕೊಲೆಯಾದ ಸಂತೋಷ್ ನಮ್ಮ ಪಕ್ಷದ ಅಧಿಕೃತ ಕಾರ್ಯಕರ್ತರು. ಪಕ್ಷದ ಚಟುವಟಿಕೆಯಲ್ಲಿ ಸಂತೋಷ್ ತಮ್ಮನ್ನು ತೊಡಗಿಸಿಕೊಂಡಿದ್ರು.
Advertisement
Advertisement
ನೆರೆಯ ಕೇರಳ ರಾಜ್ಯದಲ್ಲಿ ಎಸ್‍ಡಿಪಿಐ ಮತ್ತು ಪಿಎಫ್‍ಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಅಹವಾಲನ್ನು ಸಲ್ಲಿಸಿದೆ. ಆದ್ರೆ ನಮ್ಮ ರಾಜ್ಯ ಸರ್ಕಾರ ಯಾಕೆ ಇದೂವರೆಗೂ ಕೇಂದ್ರ ಸರ್ಕಾರಕ್ಕೆ ಅಹವಾಲು ಸಲ್ಲಿಸಿಲ್ಲ. ಈ ಎರಡೂ ಸಂಘಟನೆಗಳಿಂದ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ಪ್ರಹ್ಲಾದ್ ಜೋಶಿ ಆರೋಪಿಸಿದರು.
Advertisement
ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಪಿಎಫ್‍ಐ ಸಂಘಟನೆ ಅಷ್ಟು ಚಟುವಟಿಕೆಯಿಂದ ಕೂಡಿರಲಿಲ್ಲ. ಇತ್ತೀಚಿನ ಕೆಲವು ದಿನಗಳಲ್ಲಿ ಪಿಎಫ್‍ಐ ಮತ್ತು ಎಸ್‍ಡಿಪಿಐ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗುತ್ತಿದೆ. ಸೆಮಿ ಸಂಘಟನೆಯ ನಿಷೇಧದ ಬಳಿಕವೇ ಪಿಎಫ್‍ಐ ಹುಟ್ಟಿಕೊಂಡಿದೆ ಅಂತಾ ಹೇಳಿದ್ರು.