CinemaKarnatakaLatestMain PostSandalwood

ಕಾಳಿ ಕೈಲಿ ಸಿಗರೇಟು ವಿವಾದ : ಲೀನಾ ವಿರುದ್ಧ ಫಿಲ್ಮ್ ಚೇಂಬರ್ ನಲ್ಲಿ ದೂರು

Advertisements

ಮ್ಮ ಸಾಕ್ಷ್ಯಚಿತ್ರದಲ್ಲಿ ಕಾಳಿ ದೇವತೆಯ ಒಂದು ಕೈಯಲ್ಲಿ ಸಿಗರೇಟು ಮತ್ತು ಕೈಯಲ್ಲಿ ಎಲ್ಜಿಬಿಟಿಕ್ಯೂ ಧ್ವಜ ಕೊಟ್ಟ ಕಾರಣಕ್ಕಾಗಿ ತಮಿಳಿನ ಖ್ಯಾತ ನಿರ್ಮಾಪಕಿ ಲೀನಾ ಮಣಿಮೇಕಲೈ ವಿರುದ್ಧ ಆಕ್ರೋಶ  ಮುಂದುವರೆದಿದ್ದು, ಇದೀಗ ಅವರ ವಿರುದ್ದ ನಿರ್ದೇಶಕ ಕಂ ನಿರ್ಮಾಪಕ ಮರಡಿಹಳ್ಳಿ ನಾಗಚಂದ್ರ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಫಿಲ್ಮ್ ಚೇಂಬರ್ ಅಧ್ಯಕ್ಷರಿಗೆ ದೂರು ನೀಡಿರುವ ಅವರು, ಲೀನಾ ಮೇಲೆ ತಗೆದುಕೊಳ್ಳಬಹುದಾದ ಕ್ರಮದ ಕುರಿತು ಚರ್ಚಿಸಿದ್ದಾರೆ.

ನಿನ್ನೆಯಷ್ಟೇ ದೆಹಲಿಯಲ್ಲಿ ದೂರು ದಾಖಲಾಗಿದ್ದು, ಬೆಂಗಳೂರಿನಲ್ಲೂ ಕಿರಣ್ ಆರಾಧ್ಯ ಎನ್ನುವವರು ಸೈಬರ್ ಕ್ರೈಂಗೆ ದೂರು ನೀಡಿದ್ದರು.  ಅಲ್ಲದೇ, ಅನೇಕ ಕಡೆ ಈ ಕುರಿತು ಪ್ರತಿರೋಧ ಕೂಡ ವ್ಯಕ್ತವಾಗಿತ್ತು. ಇದೀಗ ದೇಶದ ಹಲವು ಕಡೆ ಫಿಲ್ಮ್ ಚೇಂಬರ್ ಗೂ ದೂರುಗಳನ್ನು ದಾಖಲಿಸಲಾಗುತ್ತಿದೆ. ಅಲ್ಲದೇ, ಆ ಸಾಕ್ಷ್ಯ ಚಿತ್ರವನ್ನು ಪ್ರದರ್ಶನ ಮಾಡದಂತೆ ಒತ್ತಡ ಹೇರಲಾಗುತ್ತಿದೆ. ಇದನ್ನೂ ಓದಿ:ಸಮಂತಾ ಮೊದಲ ಸಂಭಾವನೆ ಕೇಳಿದ್ರೆ ನೀವು ಶಾಕ್‌ ಆಗುತ್ತೀರಾ

ಲೀನಾ ಅವರು ತಮ್ಮ ಸಾಕ್ಷ್ಯಚಿತ್ರದ ಪೋಸ್ಟರ್ ಒಂದನ್ನು ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಆ ಪೋಸ್ಟರ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಭಾವನೆಗಳಿಗೆ ಅವರು ಧಕ್ಕೆ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಲೀನಾ ಅವರು ಕಾಳಿ ಕುರಿತಾಗಿ ಸಾಕ್ಷ್ಯ ಚಿತ್ರ ಮಾಡಿದ್ದು, ಕಾಳಿಯ ಒಂದು ಕೈಲಿ ಸಿಗರೇಟು ಮತ್ತೊಂದು ಕೈಲಿ ಎಲ್ಜಿಬಿಟಿಕ್ಯೂ ಧ್ವಜವನ್ನು ನೀಡಲಾಗಿದೆ. ಈ ಪೋಸ್ಟರ್ ಅನ್ನು ಶೇರ್ ಮಾಡಿರುವ ಲೀನಾ, ಈ ಸಾಕ್ಷ್ಯ ಚಿತ್ರವು ಕೆನಡಾ ಫಿಲ್ಮ್ ಫೇಸ್ಟಿವಲ್ ನಲ್ಲಿ ಬಿಡುಗಡೆ ಆಗುತ್ತಿದೆ. ಈ ಕಾರಣಕ್ಕಾಗಿ ನಾನು ಉತ್ಸುಕಳಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಟ್ವಿಟರ್ ಬಳಕೆದಾರರು ಈ ಕುರಿತು ಆಕ್ರೋಶ ವ್ಯಕ್ತ ಪಡಿಸಿದ್ದು, ಈ ನಿರ್ಮಾಪಕಿಯನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಕೋಟ್ಯಂತರ ಹಿಂದೂಗಳ ಭಾವನೆಗೆ ಆಕೆ ಧಕ್ಕೆ ಮಾಡಿದ್ದರಿಂದ, ಆ ಸಾಕ್ಷ್ಯ ಚಿತ್ರವನ್ನು ನಿಷೇಧ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ತಮಿಳು ನಾಡು ಮೂಲದ ಈ ಲೀನಾ ಸಲಿಂಗಿಗಳ ಬೆಂಬಲಕ್ಕೆ ಈ ಹಿಂದೆ ನಿಂತವರು ಎನ್ನುವುದು ವಿಶೇಷ.

Live Tv

Leave a Reply

Your email address will not be published.

Back to top button