ತಮ್ಮ ಸಾಕ್ಷ್ಯಚಿತ್ರದಲ್ಲಿ ಕಾಳಿ ದೇವತೆಯ ಒಂದು ಕೈಯಲ್ಲಿ ಸಿಗರೇಟು ಮತ್ತು ಕೈಯಲ್ಲಿ ಎಲ್ಜಿಬಿಟಿಕ್ಯೂ ಧ್ವಜ ಕೊಟ್ಟ ಕಾರಣಕ್ಕಾಗಿ ತಮಿಳಿನ ಖ್ಯಾತ ನಿರ್ಮಾಪಕಿ ಲೀನಾ ಮಣಿಮೇಕಲೈ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಅವರ ವಿರುದ್ಧ ದೂರುಗಳು ದಾಖಲಾಗಿವೆ. ದೆಹಲಿಯಲ್ಲಿ ದೂರು ದಾಖಲಾಗಿದ್ದು, ಬೆಂಗಳೂರಿನಲ್ಲೂ ಕಿರಣ್ ಆರಾಧ್ಯ ಎನ್ನುವವರು ಸೈಬರ್ ಕ್ರೈಂಗೆ ದೂರು ನೀಡಿದ್ದಾರೆ. ಅಲ್ಲದೇ, ಅನೇಕ ಕಡೆ ಈ ಕುರಿತು ಪ್ರತಿರೋಧ ಕೂಡ ವ್ಯಕ್ತವಾಘಿದೆ.
Advertisement
ಲೀನಾ ಅವರು ತಮ್ಮ ಸಾಕ್ಷ್ಯಚಿತ್ರದ ಪೋಸ್ಟರ್ ಒಂದನ್ನು ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಆ ಪೋಸ್ಟರ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಭಾವನೆಗಳಿಗೆ ಅವರು ಧಕ್ಕೆ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಲೀನಾ ಅವರು ಕಾಳಿ ಕುರಿತಾಗಿ ಸಾಕ್ಷ್ಯ ಚಿತ್ರ ಮಾಡಿದ್ದು, ಕಾಳಿಯ ಒಂದು ಕೈಲಿ ಸಿಗರೇಟು ಮತ್ತೊಂದು ಕೈಲಿ ಎಲ್ಜಿಬಿಟಿಕ್ಯೂ ಧ್ವಜವನ್ನು ನೀಡಲಾಗಿದೆ. ಈ ಪೋಸ್ಟರ್ ಅನ್ನು ಶೇರ್ ಮಾಡಿರುವ ಲೀನಾ, ಈ ಸಾಕ್ಷ್ಯ ಚಿತ್ರವು ಕೆನಡಾ ಫಿಲ್ಮ್ ಫೇಸ್ಟಿವಲ್ ನಲ್ಲಿ ಬಿಡುಗಡೆ ಆಗುತ್ತಿದೆ. ಈ ಕಾರಣಕ್ಕಾಗಿ ನಾನು ಉತ್ಸುಕಳಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಥೇಟ್ ನಯನತಾರಾ ರೀತಿಯೇ ಕಂಗೊಳಿಸಿದ ‘ಸತ್ಯ’ ಧಾರಾವಾಹಿಯ ಗೌತಮಿ
Advertisement
Advertisement
ಟ್ವಿಟರ್ ಬಳಕೆದಾರರು ಈ ಕುರಿತು ಆಕ್ರೋಶ ವ್ಯಕ್ತ ಪಡಿಸಿದ್ದು, ಈ ನಿರ್ಮಾಪಕಿಯನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಕೋಟ್ಯಂತರ ಹಿಂದೂಗಳ ಭಾವನೆಗೆ ಆಕೆ ಧಕ್ಕೆ ಮಾಡಿದ್ದರಿಂದ, ಆ ಸಾಕ್ಷ್ಯ ಚಿತ್ರವನ್ನು ನಿಷೇಧ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ತಮಿಳು ನಾಡು ಮೂಲದ ಈ ಲೀನಾ ಸಲಿಂಗಿಗಳ ಬೆಂಬಲಕ್ಕೆ ಈ ಹಿಂದೆ ನಿಂತವರು ಎನ್ನುವುದು ವಿಶೇಷ.