– ಕಳಿಂಗ ವಿವಿಯಲ್ಲಿ ಬಿಗಿಭದ್ರತೆ
ಭುವನೇಶ್ವರ: ತೃತೀಯ ವರ್ಷದ ಬಿ.ಟೆಕ್ (B.tech) ವಿದ್ಯಾರ್ಥಿನಿ (Student) ತನ್ನ ಹಾಸ್ಟೆಲ್ ರೂಮ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಒಡಿಸ್ಸಾದ (Odissa) ಕಳಿಂಗ ಕೈಗಾರಿಕಾ ತಂತ್ರಜ್ಞಾನ ಸಂಸ್ಥೆ (KIIT) ಕಾಲೇಜಿನಲ್ಲಿ ನಡೆದಿದೆ.
Advertisement
ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಆಕೆಯನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ಆದ್ದರಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವಿದ್ಯಾರ್ಥಿನಿಯ ಸಂಬಂಧಿಕರು ಇನ್ಫೋಸಿಟಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದನ್ನೂ ಓದಿ : ಮಹಾಕುಂಭದಲ್ಲಿ ಸಚಿವ ಪ್ರಹ್ಲಾದ್ ಜೋಶಿ ಕುಟುಂಬ ಪುಣ್ಯಸ್ನಾನ
Advertisement
ವಿದ್ಯಾರ್ಥಿನಿಯು ಇನ್ನೊಬ್ಬ ವಿದ್ಯಾರ್ಥಿಯೊಂದಿಗೆ ಸಂಬಂಧ ಹೊಂದಿದ್ದಳು ಎಂದು ಕಾಲೇಜು ಆಡಳಿತ ಮಂಡಳಿ ಆರೋಪಿಸಿದ್ದು, ಈ ಸಂಬಂಧ ಪೊಲೀಸರಿಗೆ ಮಾಹಿತಿ ನೀಡಿದೆ.
Advertisement
Advertisement
ಭುವನೇಶ್ವರ ಡಿಸಿಪಿ ಪಿನಕ್ ಮಿಶ್ರಾ ಮಾಧ್ಯಮಗಳೊಂದಿಗೆ ಮಾತನಾಡಿ, ಆತ್ಮಹತ್ಯೆ ಪ್ರಚೋದನೆಯಡಿಯಲ್ಲಿ ಈ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಆರೋಪಿ ವಿದ್ಯಾರ್ಥಿಯನ್ನು ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆತನ ಮೊಬೈಲ್, ಲ್ಯಾಪ್‌ಟಾಪ್ ಮತ್ತು ಇನ್ನಿತರ ಇಲೆಕ್ಟ್ರಾನಿಕ್ ಉಪಕರಣಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ : 10ಕ್ಕೂ ಹೆಚ್ಚು ಶಾಲಾ ಮಕ್ಕಳ ಮೇಲೆ ಹೆಜ್ಜೇನು ದಾಳಿ – ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ವಿದ್ಯಾರ್ಥಿನಿ ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ, ಕೆಲವು ನೇಪಾಳಿ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಜಮಾವಣೆಗೊಂಡು ನ್ಯಾಯಕ್ಕಾಗಿ ಒತ್ತಾಯಿಸಿದರು. ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಿ, ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸುವ ವ್ಯವಸ್ಥೆ ಮಾಡಿ ವಾತಾವರಣ ತಿಳಿಗೊಳಿಸಿದೆ ಎಂದು ಕಳಿಂಗ ವಿವಿ ತಿಳಿಸಿದೆ.