ಇತ್ತೀಚೆಗೆ ಪ್ರಭಾಸ್ ನಟನೆಯ ಕಲ್ಕಿ (Kalki) ಸಿನಿಮಾದ ಫೋಟೋವೊಂದು ಲೀಕ್ ಆಗಿತ್ತು. ಸಿನಿಮಾದ ಪ್ರಮುಖ ಗೆಟಪ್ ಒಳಗೊಂಡಿದ್ದ ಆ ಫೋಟೋವನ್ನು ಯಾರು ಲೀಕ್ ಮಾಡಿದ್ದಾರೆ ಎಂದು ನಿರ್ಮಾಣ ಸಂಸ್ಥೆ ತಲೆಕೆಡಿಸಿಕೊಂಡಿತ್ತು. ಸಿನಿಮಾ ರಿಲೀಸ್ ಗೂ ಮುನ್ನ ಹೀಗೆ ಪಾತ್ರಗಳ ಬಗ್ಗೆ ರಿವಿಲ್ ಮಾಡುತ್ತಿರುವುದು ಕೋಪ ತರಿಸಿತ್ತು. ಇದೀಗ ನಿರ್ಮಾಪಕರು ಈ ಕುರಿತು ಪೊಲೀಸ್ ಠಾಣೆಯ ಮೆಟ್ಟಿಲು ಏರಿದ್ದಾರೆ.
Advertisement
ಕಲ್ಕಿ ಸಿನಿಮಾದ ವಿಎಫ್ಎಕ್ಷ್ ಮಾಡುತ್ತಿರುವ ಸಂಸ್ಥೆಯೇ ಫೋಟೋವನ್ನು ಲೀಕ್ ಮಾಡಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಸಂಸ್ಥೆಯ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ನಿರ್ಮಾಪಕರು ಪೊಲೀಸ್ ಮೊರೆ ಹೋಗಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.
Advertisement
Advertisement
ಭಾರೀ ಬಜೆಟ್ ನಲ್ಲಿ ರೆಡಿ ಆಗಿರುವ ಕಲ್ಕಿ ಚಿತ್ರಕ್ಕೆ ಈ ಹಿಂದೆ ಪ್ರಾಜೆಕ್ಟ್ ಕೆ (Project K) ಹೆಸರಿನಿಂದ ಕರೆಯಲಾಗುತ್ತಿತ್ತು. ಸಿನಿಮಾದ ಗ್ಲಿಂಪ್ಸ್ (Glimpse) ರಿಲೀಸ್ ದಿನ ಅಸಲಿ ಹೆಸರನ್ನು ಅನೌನ್ಸ್ ಮಾಡಲಾಯಿತು. ಈ ಗ್ಲಿಂಪ್ಸ್ ನಲ್ಲಿ ಸಾಕಷ್ಟು ಸಂಗತಿಗಳನ್ನು ನಿರ್ದೇಶಕರು ಹೇಳಿದ್ದರು. ಇದನ್ನೂ ಓದಿ:‘ಕುದ್ರು’ ಸಿನಿಮಾದಲ್ಲಿ ಕ್ಲಾಸ್ ಬಂಕ್ ಹಾಡು
Advertisement
ಈ ಸಿನಿಮಾದ ಶೂಟಿಂಗ್ ಈಗಾಗಲೇ ಶುರುವಾಗಿದ್ದು, ಪ್ರಭಾಸ್ ಜೊತೆ ಕಮಲ್ ಹಾಸನ್ (Kamal Haasan), ರಾಣಾ ದಗ್ಗುಬಾಟಿ ಈಗಾಗಲೇ ಅಮೆರಿಕಾಗೆ ಪ್ರವಾಸ ಬೆಳೆಸಿದ್ದಾರೆ. ಸುಮಾರು 600 ಕೋಟಿಗೂ ಅಧಿಕ ಬಜೆಟ್ ನಲ್ಲಿ ಈ ಸಿನಿಮಾ ತಯಾರಾಗಲಿದ್ದು, ಅನೇಕ ದಿಗ್ಗಜ ಕಲಾವಿದರು ಈ ಚಿತ್ರಕ್ಕಾಗಿ ಒಂದಾಗಿದ್ದಾರೆ. ಇಷ್ಟೊಂದು ನಿರೀಕ್ಷೆ ಇಟ್ಟುಕೊಂಡಿರುವ ಸಿನಿಮಾದ ಫಸ್ಟ್ ಲುಕ್ (First Look) ಬೇರೆ ಹಂತದಲ್ಲಿ ಇರಬೇಕಿತ್ತು ಎಂದು ಅಭಿಮಾನಿಗಳು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
`ಪಠಾಣ್’ (Pathaan) ಚಿತ್ರದ ಸೂಪರ್ ಸಕ್ಸಸ್ನಲ್ಲಿರುವ ದೀಪಿಕಾ ಪಡುಕೋಣೆ (Deepika Padukone) `ಪ್ರಾಜೆಕ್ಟ್ ಕೆ’ ಸಿನಿಮಾಗೆ ಭರ್ಜರಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. `ಪಠಾಣ್’ ಸಿನಿಮಾ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಹೊಸ ದಾಖಲೆ ಬರೆದಿದೆ. ಹಾಗಾಗಿ `ಪ್ರಾಜೆಕ್ಟ್ ಕೆ’ ಚಿತ್ರಕ್ಕೆ ದುಬಾರಿ ಸಂಭಾವನೆಯನ್ನೇ ನಟಿ ಪಡೆದಿದ್ದಾರೆ.
Web Stories