‘ಕಲ್ಕಿ’ ಸಿನಿಮಾದ ಶೂಟಿಂಗ್ ಕಂಪ್ಲೀಟ್: ಅಮಿತಾಭ್ ಕೊಟ್ಟ ಅಪ್ ಡೇಟ್

Public TV
1 Min Read
Kalki

ದಿಗ್ಗಜರೇ ಒಂದಾಗಿ ನಟಿಸುತ್ತಿರುವ ಕಲ್ಕಿ ಸಿನಿಮಾದ ಬಗ್ಗೆ ಬಿಗ್ ಬಿ, ಬಿಗ್ ಅಪ್ ಡೇಟ್ ನೀಡಿದ್ದಾರೆ. ಸಿನಿಮಾ ಶೂಟಿಂಗ್ (Shooting) ಕುರಿತಂತೆ ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನಿನ್ನೆ ರಾತ್ರಿ ಶೂಟಿಂಗ್ ಮುಗಿಸಿ ಬಂದೆ. ಚಿತ್ರದ ಚಿತ್ರೀಕರಣ ಮುಗಿದಿದೆ. ಅಂದುಕೊಂಡಂತೆ ಮೇ 9ಕ್ಕೆ ಚಿತ್ರ ರಿಲೀಸ್ ಆಗಲಿದೆ ಎಂದು ಅವರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

Kalki

ಇತ್ತೀಚೆಗಷ್ಟೇ ನಟ ಅಮಿತಾಭ್ ಬಚ್ಚನ್  (Amitabh Bachchan) ಅವರ ಹುಟ್ಟು ಹಬ್ಬದ (Birthday) ದಿನದಂದು ಕಲ್ಕಿ ಸಿನಿಮಾ ಟೀಮ್ ಅಮಿತಾಭ್ ಬಚ್ಚನ್ ಪಾತ್ರದ ಫಸ್ಟ್ ಲುಕ್(First Look)  ರಿಲೀಸ್ ಮಾಡಿತ್ತು. ವಿಚಿತ್ರ ವೇಷದಲ್ಲಿ ಅಮಿತಾಭ್ ಕಾಣಿಸಿಕೊಂಡಿದ್ದು ಪಾತ್ರದ ಬಗ್ಗೆ ಕುತೂಹಲ ಮೂಡಿಸಿತ್ತು.

amitabh bachchan 3

ಈ ಸಿನಿಮಾ ನಾನಾ ಕಾರಣಗಳಿಂದಾಗಿ ಕುತೂಹಲ ಮೂಡಿಸಿದೆ. ಪ್ರಭಾಸ್ (Prabhas) ನಟನೆಯ ಈ ಸಿನಿಮಾದ ಮತ್ತೊಂದು ಪೋಸ್ಟರ್ (Poster) ಮೊನ್ನೆಯಷ್ಟೇ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಪ್ರಭಾಸ್ ಭೈರವ (Bhairava) ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಜುಟ್ಟು ಬಿಟ್ಟುಕೊಂಡು ಸ್ಟೈಲಿಶ್ ಆಗಿ ಕಂಡಿದ್ದಾರೆ ಪ್ರಭಾಸ್. ಈ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

Rajamouli

ಜೊತೆಗೆ ಈ ಸಿನಿಮಾದಲ್ಲಿ ರಾಜಮೌಳಿಯೂ (Rajamouli) ಪಾತ್ರ ಮಾಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಸಿನಿಮಾದಲ್ಲಿ ಅವರು ಮಹತ್ವದ ಪಾತ್ರವೊಂದನ್ನು ನಿರ್ವಹಿಸಿದ್ದು, ಅದು ವಿಜ್ಞಾನಿ (Scientist) ಪಾತ್ರವಾಗಿದೆಯಂತೆ. ಅಧಿಕೃತವಾಗಿ ಚಿತ್ರತಂಡ ಯಾವುದೇ ಮಾಹಿತಿ ಹಂಚಿಕೊಳ್ಳದೇ ಇದ್ದರೂ, ಇಂಥದ್ದೊಂದು ಸುದ್ದಿಯಂತೂ ಸಖತ್ ಜೋರಾಗಿಯೇ ಕೇಳಿ ಬರುತ್ತಿದೆ.

ಈ ನಡುವೆ ಕಲ್ಕಿ (Kalki) ಸಿನಿಮಾದ ಫೋಟೋವೊಂದು ಲೀಕ್ ಆಗಿತ್ತು. ಸಿನಿಮಾದ ಪ್ರಮುಖ ಗೆಟಪ್ ಒಳಗೊಂಡಿದ್ದ ಆ ಫೋಟೋವನ್ನು ಯಾರು ಲೀಕ್ ಮಾಡಿದ್ದಾರೆ ಎಂದು ನಿರ್ಮಾಣ ಸಂಸ್ಥೆ ತಲೆಕೆಡಿಸಿಕೊಂಡಿತ್ತು. ಸಿನಿಮಾ ರಿಲೀಸ್ ಗೂ ಮುನ್ನ ಹೀಗೆ ಪಾತ್ರಗಳ ಬಗ್ಗೆ ರಿವಿಲ್ ಮಾಡುತ್ತಿರುವುದು ಕೋಪ ತರಿಸಿತ್ತು. ಇದೀಗ ನಿರ್ಮಾಪಕರು ಈ ಕುರಿತು ಪೊಲೀಸ್ ಠಾಣೆಯ ಮೆಟ್ಟಿಲು ಏರಿದ್ದಾರೆ.

Share This Article