Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಪ್ರವಾಹದಂತೆ ಹರಿಯುತ್ತಿದ್ದ ಕಲ್ಲತ್ತಿಗಿರಿ ಜಲಪಾತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಪ್ರವಾಹದಂತೆ ಹರಿಯುತ್ತಿದ್ದ ಕಲ್ಲತ್ತಿಗಿರಿ ಜಲಪಾತ

Chikkamagaluru

ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಪ್ರವಾಹದಂತೆ ಹರಿಯುತ್ತಿದ್ದ ಕಲ್ಲತ್ತಿಗಿರಿ ಜಲಪಾತ

Public TV
Last updated: September 18, 2019 8:40 am
Public TV
Share
2 Min Read
ckm kallatigiri falls collage
SHARE

ಚಿಕ್ಕಮಗಳೂರು: ತಿಂಗಳ ಹಿಂದೆ ಬರಬೇಡಿ ಎಂದು ಹೇಳುತ್ತಿದ್ದ ಈ ಸುಂದರ ತಾಣ ಈಗ ಪ್ರವಾಸಿಗರನ್ನು ಬನ್ನಿ ಎಂದು ಕೈಬೀಸಿ ಕರೆಯುತ್ತಿದೆ. ವರ್ಷಪೂರ್ತಿ ಧಾರಾಕಾರವಾಗಿ ಹರಿಯುವ ಆ ನೀರು ಎಲ್ಲಿಂದ ಬರುತ್ತೆ ಎನ್ನುವುದೇ ನಿಗೂಢ. ಆನೆಯ ಆಕಾರದಲ್ಲಿ ಧುಮ್ಮಿಕ್ಕುವ ಆ ಜಲಧಾರೆಗೆ ಧಾರ್ಮಿಕ ನಂಬಿಕೆಯೂ ಉಂಟು. ತಿಂಗಳ ಹಿಂದೆ ಪ್ರವಾಹದಂತೆ ಹರಿಯುತ್ತಿದ್ದ ಆ ಸುಂದರ ತಾಣವೀಗ ನಯನ ಮನೋಹರ.

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕಲ್ಲತ್ತಿಗರಿ ಜಲಪಾತವೀಗ ಪ್ರಕೃತಿಯ ಮಾನಸ ಪುತ್ರಿಯಂತಾಗಿದೆ. ಗುಡ್ಡದ ತುದಿಯಿಂದ ಹರಿಯುವ ಈ ಹಾಲ್ನೋರೆಯ ಜಲಕ್ಕೆ ಕಲ್ಲತ್ತಿಗರಿ ಜಲಪಾತ ಎಂಬ ಹೆಸರಿದೆ. ಈ ಜಲಪಾತ ಇತಿಹಾಸದಲ್ಲಿ ಬತ್ತಿದ ಉದಾಹರಣೆ ಇಲ್ಲ. ಬೆಟ್ಟ-ಗುಡ್ಡಗಳ ಔಷಧಿ ಶಕ್ತಿಯುಳ್ಳ ಮರ-ಗಿಡಗಳ ನಡುವೆ ಹರಿಯುವ ಈ ನೀರಲ್ಲಿ ಸ್ನಾನ ಮಾಡಿದರೆ ಕೆಲವು ಕಾಯಿಲೆಗಳು ದೂರವಾಗುತ್ತೆ ಎಂಬುದು ಜನರ ನಂಬಿಕೆ. ಆನೆ ಆಕಾರದಲ್ಲಿರುವ ಈ ಜಲಪಾತಕ್ಕೆ ಧಾರ್ಮಿಕ ಇತಿಹಾಸವೂ ಇದೆ. ಇಲ್ಲಿಗೆ ಬರುವ ಪ್ರವಾಸಿಗರಲ್ಲಿ ಶಾಲಾ ಮಕ್ಕಳೇ ಹೆಚ್ಚು. ಈ ತಾಣ ಇಡೀ ರಾಜ್ಯಕ್ಕೆ ಗೊತ್ತು. ಈಗ ಮಕ್ಕಳಷ್ಟೇ ಅಲ್ಲದೆ ಕುಟುಂಬ ಸಮೇತರಾಗಿ ಬಂದು ಎಲ್ಲರೂ ಎಂಜಾಯ್ ಮಾಡುತ್ತಿದ್ದಾರೆ.

ckm kallatigiri falls 4

ಶತಮಾನಗಳಿಂದ ಹೀಗೆ ನಿರಂತರವಾಗಿ ಹರಿಯುತ್ತಿರುವ ಈ ಜಲಪಾತದ ಬಳಿ ದತ್ತಾತ್ರೇಯ, ಈಶ್ವರ-ಪಾರ್ವತಿ, ಗಣಪತಿ, ಬೇಲೂರು ಚನ್ನಕೇಶವನ ಜೊತೆ ಶಿಲಾಬಾಲಿಕೆಯರ ಉದ್ಭವ ಮೂರ್ತಿಗಳಿವೆ. ಪುರಾಣದ ಪ್ರಕಾರ ನರ ಮನುಷ್ಯರು ಇಲ್ಲಿಗೆ ಬಂದು ಈ ಪವಿತ್ರ ಗಂಗೆಯಲ್ಲಿ ಸ್ನಾನ ಮಾಡಿ, ಇಲ್ಲಿನ ವೀರಭದ್ರೇಶ್ವರನಿಗೆ ಪೂಜೆ ಸಲ್ಲಿಸಿದರೆ ಅವರ ಪಾಪ-ಕರ್ಮಗಳೆಲ್ಲಾ ಪರಿಹಾರವಾಗುತ್ತೆ ಎನ್ನುವುದು ಸ್ಥಳೀಯರ ನಂಬಿಕೆ.

ckm kallatigiri falls 1

ಪವಿತ್ರ ಗಂಗೆಯಾಗಿರುವ ಈ ಕ್ಷೇತ್ರದಲ್ಲಿ ಕಲ್ಲಿನ ಗುಹೆಯೊಳಗೆ ವೀರಭದ್ರಸ್ವಾಮಿ ಮೂರ್ತಿ ಕೂಡ ಉದ್ಭವವಾಗಿದೆ. ಇಲ್ಲಿ ಸ್ನಾನ ಮಾಡಿ, ಪೂಜೆ ಸಲ್ಲಿಸಿದರೆ ಜನರ ಮೈಮೇಲೆ ಬರುವ ದುಷ್ಟಶಕ್ತಿಗಳನ್ನು ವೀರಭದ್ರಸ್ವಾಮಿ ನಾಶ ಮಾಡುತ್ತಾನೆ ಎಂದು ಸ್ಥಳೀಯರು ಹೇಳುತ್ತಾರೆ. ಆದ್ದರಿಂದ, ಪ್ರತಿದಿನ ಹತ್ತಾರು ಜನ ಈ ಕ್ಷೇತ್ರಕ್ಕೆ ದೇವರುಗಳನ್ನು ಕರೆ ತಂದು ಪೂಜಾ-ಕೈಂಕರ್ಯ ಕೈಗೊಳ್ಳುತ್ತಾರೆ. ಪೂಜೆಯ ಬಳಿಕ ಇಲ್ಲಿನ ಬೆಟ್ಟ-ಗುಡ್ಡಗಳ ಪ್ರಕೃತಿ ಸೌಂದರ್ಯ ಕಂಡು ಪುಳಕಿತರಾಗುತ್ತಾರೆ.

ckm kallatigiri falls 2

ಕಲ್ಲತ್ತಿಗಿರಿ ಕ್ಷೇತ್ರದ ಜಲಪಾತ ಹತ್ತಾರು ಆಶ್ಚರ್ಯಗಳಿಗೆ ಸಾಕ್ಷಿಯಾಗಿದೆ. ಮೂಲವೇ ಗೊತ್ತಿಲ್ಲದ ಗಂಗೆಯ ಉಗಮ ಸ್ಥಾನ ಒಂದೆಡೆಯಾದರೆ, ದುಷ್ಟಶಕ್ತಿಗಳನ್ನು ದೂರ ಮಾಡುವ ದೈವಶಕ್ತಿಗೆ ಈ ಕ್ಷೇತ್ರ ಹೆಸರುವಾಸಿ. ಪ್ರವಾಸಕ್ಕೂ ಸೈ, ಧಾರ್ಮಿಕ ನಂಬಿಕೆಗೂ ಸೈ ಎನ್ನುವ ಈ ಕ್ಷೇತ್ರ ಕಾಫಿನಾಡಿನ ವೈಭವಕ್ಕೆ ಹಿಡಿದ ಕೈಗನ್ನಡಿ ಎಂದರು ತಪ್ಪಿಲ್ಲ. ಆದರೆ ಇಲ್ಲಿನ ಮೂಲಭೂತ ಸಮಸ್ಯೆಗಳತ್ತ ಸರ್ಕಾರ ಗಮನ ಹರಿಸಬೇಕು ಎಂದು ಪ್ರವಾಸಿಗರು ಒತ್ತಾಯಿಸುತ್ತಿದ್ದಾರೆ.

TAGGED:ChikkamagaluruKallathigiri FallsPoojePublic TVrainTouristಕಲ್ಲತ್ತಿಗಿರಿ ಜಲಪಾತಚಿಕ್ಕಮಗಳೂರುಪಬ್ಲಿಕ್ ಟಿವಿಪೂಜೆಪ್ರವಾಸಿಗರುಮಳೆ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Mantralaya
Districts

ಅದ್ದೂರಿಯಾಗಿ ನಡೆದ ಗುರುರಾಘವೇಂದ್ರ ಸ್ವಾಮಿಗಳ 405ನೇ ಪಟ್ಟಾಭಿಷೇಕ ಮಹೋತ್ಸವ

Public TV
By Public TV
17 minutes ago
karwar accident
Latest

ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಸರಣಿ ಅಪಘಾತ – ವಿದೇಶಿ ಪ್ರಜೆಗಳು ಸೇರಿ 24 ಜನರಿಗೆ ಗಾಯ

Public TV
By Public TV
37 minutes ago
Valmiki Prasannananda Puri Swamiji heart attack
Karnataka

ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ – ಆಸ್ಪತ್ರೆಗೆ ದಾಖಲು

Public TV
By Public TV
1 hour ago
Hanuman Statue Texas
Latest

ಅತಿಕ್ರಮಣ ನಿಲ್ಲಿಸಿ: ಅಮೆರಿಕದ ಟೆಕ್ಸಾಸ್‌ನಲ್ಲಿ ಹನುಮನ ಪ್ರತಿಮೆ ಪ್ರತಿಷ್ಠಾಪನೆಗೆ MAGA ನಾಯಕ ವಿರೋಧ

Public TV
By Public TV
2 hours ago
Bandipur Tiger Reserve
Chamarajanagar

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಸರ್ಕಾರ ಅಸ್ತು – ಹೋರಾಟದ ಎಚ್ಚರಿಕೆ ಕೊಟ್ಟ ರೈತರು

Public TV
By Public TV
3 hours ago
Hyderabad Murder
Crime

ಟೆಕ್ಕಿ ಮಾಜಿ ಪತ್ನಿಯ ಮನೆಗೆ ನುಗ್ಗಿ ಇರಿದು ಕೊಂದ ವ್ಯಕ್ತಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?