ರಂಗಭೂಮಿ ಮತ್ತು ಹಲವು ಸಿನಿಮಾಗಳಲ್ಲಿ ನಟಿಸಿದ ಪ್ರಕಾಶ್ ಹೆಗ್ಗೋಡು (Prakash Heggodu) ಇಂದು (ಮಾ.30) ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಟ ಇದೀಗ ಚಿಕಿತ್ಸೆ ಫಲಿಸದೇ 58 ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಪ್ರಕಾಶ್ ಹೆಗ್ಗೋಡು ಚಿಕಿತ್ಸೆ ಪಡೆಯುತ್ತಿದ್ದರು. ಈಗ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅವರ ಸಾವಿನ ಸುದ್ದಿ ಕೇಳಿ ಆಪ್ತರು, ಸಿನಿಮಾ ನಟ-ನಟಿಯರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
ಪ್ರಕಾಶ್ ಹೆಗ್ಗೋಡು ಶಿವಮೊಗ್ಗ ಜಿಲ್ಲೆಯ, ಸಾಗರ ತಾಲೂಕಿನ ಪುರಪ್ಪೆಮನೆಯವರಾಗಿದ್ದಾರೆ. ನಾಳೆ (ಮಾರ್ಚ್ 31) ಅವರ ಅಂತಿಮ ದರ್ಶನವನ್ನು ಅವರ ಸ್ವಗೃಹವಾದ ಪುರಪ್ಪೆಮನೆಯಲ್ಲಿ ಅವಕಾಶ ಮಾಡಿಕೊಡಲಾಗಿದೆ. ಆಪ್ತರು, ಊರಿನ ಜನರಿಗೆ ಅಂತಿಮ ದರ್ಶನ ಪಡೆಯಬಹುದಾಗಿದೆ. ಇದನ್ನೂ ಓದಿ:ಪ್ಯಾರಿಸ್‌ನಲ್ಲಿ ಪತಿಗೆ ಲಿಪ್‌ಲಾಕ್ ಮಾಡಿದ ‘ಕಭಿ ಖುಷಿ ಕಭಿ ಗಮ್’ ನಟಿ
ಸಂತ, ಭಾಗ್ಯದ ಬಳೆಗಾರ, ಕಲ್ಪನಾ 2 (Kalpana 2), ವೀರು, ಕಲಾಸಿಪಾಳ್ಯ ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ಪ್ರಕಾಶ್ ಹೆಗ್ಗೋಡು ನಟಿಸಿ ಸೈ ಎನಿಸಿಕೊಂಡಿದ್ದರು.