ನವದೆಹಲಿ: ಬಿಜೆಪಿ ನಾಯಕ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್(89) ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ರಾಜೀವ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಆಸ್ಪತ್ರೆಯಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
Advertisement
Former Uttar Pradesh CM and former Rajasthan Governor Kalyan Singh passes away at Sanjay Gandhi Postgraduate Institute of Medical Sciences (SGPGI) in Lucknow, due to sepsis and multi organ failure: SGPGI
(File photo) pic.twitter.com/lRCv1xHMe2
— ANI UP (@ANINewsUP) August 21, 2021
Advertisement
ಇದ್ದಕ್ಕಿದ್ದಂತೆ ದೇಹ ಊದಿಕೊಂಡು, ಪ್ರಜ್ಞಾ ಹೀನರಾಗಿದ್ದ ಹಿನ್ನೆಲೆಯಲ್ಲಿ ಜುಲೈ 4ರಂದು ಕಲ್ಯಾಣ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
Advertisement
Kalyan Singh Ji gave voice to crores of people belonging to the marginalised sections of society. He made numerous efforts towards the empowerment of farmers, youngsters and women.
— Narendra Modi (@narendramodi) August 21, 2021
Advertisement
ಬಾಬ್ರಿ ಮಸೀದಿ ಧ್ವಂಸ ಸಂದರ್ಭದಲ್ಲಿ ಸಿಎಂ ಆಗಿದ್ರು. ಇನ್ನು ಕಲ್ಯಾಣ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ, ಯುಪಿ ಸಿಎಂ ಆದಿತ್ಯ ನಾಥ್, ಮಾಜಿ ಸಿಎಂ ಬಿಎಸ್‍ವೈ, ಸಿಎಂ ಬೊಮ್ಮಾಯಿ ಸೇರಿದಂತೆ ಗಣ್ಯಾತಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ಉತ್ತರ ಪ್ರದೇಶ ಸರ್ಕಾರ 3 ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ. ಸೋಮವಾರ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ.