ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ನಗರದ ಸರ್ದಾರ್ ವಲ್ಲಭ್ ಭಾಯಿ ವೃತ್ತದಲ್ಲಿರುವ ಸರ್ದಾರ್ ವಲ್ಲಭ್ ಭಾಯಿ ಪಟೇಲರ ಪ್ರತಿಮೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಲಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಿದರು.
Advertisement
ಈ ವೇಳೆ ಮಾತನಾಡಿದ ಸಿಎಂ, 1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದರೂ ಹೈದ್ರಾಬಾದ್ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಿಗೆ ಮಾತ್ರ ಸ್ವಾತಂತ್ರ್ಯವಾಗದೇ ನಿಜಾಮರ ಆಳ್ವಿಕೆಗೆ ಒಳಪಟ್ಟಿತ್ತು. ನಂತರ ಅಂದಿನ ಕೇಂದ್ರ ಸಚಿವರಾದ ಸರ್ದಾರ್ ವಲ್ಲಭ್ ಭಾಯಿ ಪಟೇಲ್ ಅವರು ನಿಜಾಂ ಸರ್ಕಾರದ ವಿರುದ್ಧ ಸೈನಿಕ ಕಾರ್ಯಚರಣೆ ನಡೆಸಿ, ಇಂದಿನ ಕಲ್ಯಾಣಕರ್ನಾಟಕ ಭಾಗಕ್ಕೆ ನಿಜಾಂ ಸರ್ಕಾರದಿಂದ ಮುಕ್ತಿ ನೀಡಿದ್ದರು ಎಂದರು. ಇದನ್ನೂ ಓದಿ: ಮೋದಿಗೆ ಸಕ್ಕರೆ ನಾಡಿನ ಸ್ಪೆಷಲ್ ಸಾಂಗ್ ಗಿಫ್ಟ್
Advertisement
Advertisement
ಹೀಗಾಗಿ ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಉತ್ಸವ ಮಾಡುವ ಮುನ್ನ ಕಲಬುರಗಿ ನಗರದ ಹೃದಯ ಭಾಗದಲ್ಲಿರುವ ಪಟೇಲ್ ರ ಪುತ್ಥಳಿಗೆ ಸಿಎಂ ಮಾಲಾರ್ಪಣೆ ಮಾಡಿ ಧ್ವಜಾರೋಹಣ ಮಾಡುವುದು ವಾಡಿಕೆಯಾಗಿದೆ ಎಂದು ಮಾಹಿತಿ ನೀಡಿದರು.
Advertisement
ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ತೋಟಗಾರಿಕೆ ಸಚಿವ ಮುನಿರತ್ನ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪ್ರದೇಶ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್, ಸಂಸದ ಡಾ.ಉಮೇಶ ಜಾಧವ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ರಾಜಕುಮಾರ ಪಾಟೀಲ್ ತೆಲ್ಕೂರ್, ಅಫಜಲಪೂರ ಶಾಸಕ ಎಂ.ವೈ.ಪಾಟೀಲ್, ಕಲ್ಯಾಣ ಕರ್ನಾಟಕ ಉತ್ಸವ ಸಮಿತಿ ಅಧ್ಯಕ್ಷ ಶಶೀಲ್ ಜಿ.ನಮೋಶಿ, ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಅಧ್ಯಕ್ಷ ಚಂದು ಪಾಟೀಲ್ ಸೇರಿದಂತೆ ಶಾಸಕ ಬಸವರಾಜ ಮತ್ತಿಮೂಡ, ಜಿಲ್ಲಾಧಿಕಾರಿ ವಿ.ವಿ ಜ್ಯೋತ್ಸ್ನಾ ಉಪಸ್ಥಿತರಿದ್ದರು. ಇದನ್ನೂ ಓದಿ: ನರೇಂದ್ರ ಮೋದಿ ಹುಟ್ಟುಹಬ್ಬ- ಶುಭ ಕೋರಿದ ಎಚ್‍ಡಿಡಿ, ಎಚ್‍ಡಿಕೆ