ರಾಯಚೂರು: ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆ ನಗರದ ಪೊಲೀಸ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಲಾಯಿತು. ರಾಯಚೂರು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಬಳಿಕ ತೆರೆದ ಜೀಪ್‍ನಲ್ಲಿ ಗೌರವ ವಂದನೆ ಸ್ವೀಕರಿಸಿದರು.
Advertisement
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಜನಪ್ರತಿನಿಧಿಗಳ ಗೈರು ಎದ್ದು ಕಾಣುತ್ತಿತ್ತು. ಜನಪ್ರತಿನಿಧಿಗಳಿಗಾಗಿ ಮೀಸಲಿಟ್ಟಿದ್ದ ಕುರ್ಚಿಗಳು ಖಾಲಿ ಇದ್ದವು. ನೂತನ ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ ಬಸಪ್ಪ, ಸ್ಥಳೀಯ ಶಾಸಕ ಡಾ.ಶಿವರಾಜ್ ಪಾಟೀಲ್, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ರಾಯಚೂರು ಸಂಸದ ಅಮರೇಶ್ವರ ನಾಯಕ್ ಸೇರಿದಂತೆ ಯಾವೊಬ್ಬ ಜನಪ್ರತಿನಿಧಿಗಳೂ ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ. ಇದನ್ನೂ ಓದಿ: ಹಟ್ಟಿ ಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್ ಪುತ್ರನ ಗುಂಡಾಗಿರಿ, ಎಫ್‍ಐಆರ್ ದಾಖಲು
Advertisement
Advertisement
ಧ್ವಜಾರೋಹಣ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಪ್ರಕಾಶ್ ನಿಕಮ್, ಜಿ.ಪಂ. ಸಿಇಓ ಶೇಖ್ ತನ್ವೀರ್ ಆಸೀಫ್ ಸೇರಿ ಇತರ ಅಧಿಕಾರಿಗಳು ಭಾಗಿಯಾಗಿದ್ದರು.