ಮರಾಠಿ ಕಿರುತೆರೆಯಲ್ಲಿ (Marathi Serials) ಸಾಕಷ್ಟು ಸೀರಿಯಲ್ಗಳ ಮೂಲಕ ಮೋಡಿ ಮಾಡಿರುವ ನಟಿ ಕಲ್ಯಾಣಿ ಕುರಾಲೆ ಜಾಧವ್ (Kalyani Kurale Jadhav) ನಿಧನರಾಗಿದ್ದಾರೆ. ರಸ್ತೆ ಅಪಘಾತದಲ್ಲಿ ನಟಿ ವಿಧಿವಶರಾಗಿದ್ದಾರೆ.
ತಮ್ಮ ಮನೋಜ್ಞ ನಟನೆಯ ಮೂಲಕ ಮರಾಠಿ ಪ್ರೇಕ್ಷಕರ ಮನಗೆದ್ದ ನಟಿ ಕಲ್ಯಾಣಿ ಕುರಾಲೆ ಜಾಧವ್ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ನಟಿ ಕಲ್ಯಾಣಿ ಶನಿವಾರ(ನ.12)ರಂದು ಸಂಜೆ ಮನೆಗೆ ತೆರಳುತ್ತಿರುವಾಗ ಸಾಂಗ್ಲಿ-ಕೊಲ್ಲಾಪುರ ಹೆದ್ದಾರಿಯ ಡಿವೈಡರ್ ಬಳಿ ಈ ರಸ್ತೆ ಅಪಘಾತ ಸಂಭವಿಸಿದೆ ಎಂದು ಕೊಲ್ಲಾಪುರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ:ಸ್ನೇಹಾ- ಪ್ರಸನ್ನ ಡಿವೋರ್ಸ್ ಬಗ್ಗೆ ಸ್ಪಷ್ಟನೆ ನೀಡಿದ ನಟಿ
ಅಪಘಾತ ಸಂಭವಿಸಿದ ನಂತರ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾದರೂ ನಟಿ ಕಲ್ಯಾಣಿ ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಅವರು ಸಂಚರಿಸುತ್ತಿದ್ದ ದ್ವಿಚಕ್ರ ವಾಹನ ಕಾಂಕ್ರೀಟ್ ಮಿಕ್ಸರ್ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದಿದೆ. ಸದ್ಯ ಟ್ರ್ಯಾಕ್ಟರ್ ಚಾಲಕನ ವಿರುದ್ಧ ಕೊಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇನ್ನೂ ನಟಿ ಕಲ್ಯಾಣಿ ಅವರ ಸಾವಿಗೆ ಕಿರುತೆರೆ ರಂಗ ಕಂಬನಿ ಮಿಡಿದಿದೆ.