ಚಿಕ್ಕಬಳ್ಳಾಪುರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಲ್ಯಾಣಿ ಸ್ವಚ್ಛತಾ ಕಾರ್ಯಕ್ಕೆ ಕೃಷಿ ಸಚಿವ ಶಿವಶಂಕರರೆಡ್ಡಿ ಕೈಜೋಡಿಸಿ ಎಲ್ಲರ ಗಮನ ಸೆಳೆದಿದ್ದಾರೆ.
ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಬಳಿ ಪಾಳುಬಿದ್ದು ಗಿಡಗಂಟೆ, ಕಲ್ಲು, ಮುಳ್ಳುಗಳಿಂದ ಕೂಡಿದ್ದ ಕಲ್ಯಾಣಿಯನ್ನ ಸ್ವಚ್ಛಗೊಳಿಸಲಾಯಿತು. ಈ ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದ್ದ ಸಚಿವ ಶಿವಶಂಕರರೆಡ್ಡಿ, ತಾವೇ ಸ್ವತಃ ಎಲ್ಲರ ಜೊತೆಗೂಡಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡರು. ಇದನ್ನೂ ಓದಿ:ಸಸಿ ನೆಟ್ಟು ರಂಜಾನ್ ಆಚರಿಸಿದ ರಾಯಚೂರಿನ ಜನತೆ
Advertisement
Advertisement
ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸಂಪ್ರದಾಯಿಕವಾಗಿ ನಿರ್ಮಾಣಗೊಂಡ ಪುರಾತನ ಕಾಲದ ಹಲವು ಕಲ್ಯಾಣಿಗಳು ನಿರ್ಲಕ್ಷ್ಯದಿಂದ ಪಾಳುಬಿದ್ದಿದೆ. ಹಿಂದೆ ಈ ಕಲ್ಯಾಣಿಗಳನ್ನು ಜನರಿಗೆ ನೀರು ಪೂರೈಸಲು ನಿರ್ಮಿಸಲಾಗಿತ್ತು. ದುಸ್ಥಿತಿಯಲ್ಲಿರುವ ಕಲ್ಯಾಣಿಗಳನ್ನು ಜಿಲ್ಲಾಡಳಿತ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಗಮನಿಸಿ ಅದನ್ನು ಸ್ವಚ್ಛಗೊಳಿಸಿ ಮತ್ತೆ ಕಲ್ಯಾಣಿಗಳಿಗೆ ಪುನರ್ಜೀವ ನೀಡಲು ಮುಂದಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ:ವಿಶ್ವಪರಿಸರ ದಿನ- ಸಾವಿರ ಸಸಿಗಳನ್ನು ನೆಟ್ಟು ಶತಾಯುಷಿಯ ಸ್ಮರಣೆ
Advertisement
Advertisement
ಕಲ್ಯಾಣಿ ಸ್ವಚ್ಛತಾ ಕಾರ್ಯಕ್ರಮ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ನೇತೃತ್ವದಲ್ಲಿ ಜಿಲ್ಲೆಯ ವಿವಿಧೆಡೆ ಆಯೋಜಿಸಲಾಗಿದೆ. ಈಗಾಗಲೇ 40 ಕ್ಕೂ ಹೆಚ್ಚು ಪುರಾತನ ಕಲ್ಯಾಣಿಗಳ ಸ್ವಚ್ಛತೆ ನಡೆಸಲಾಗಿದ್ದು, ಜಿಲ್ಲಾಧಿಕಾರಿಗಳ ಕಾರ್ಯಕ್ಕೆ ಸಚಿವರು ಅಭಿನಂದನೆ ತಿಳಿಸಿದ್ದಾರೆ. ಹಾಗೆಯೇ ಈ ಕಾರ್ಯಕ್ಕೆ ಸಾರ್ವಜನಿಕರು ಕೂಡ ಬೆಂಬಲ ನೀಡಿ ಸ್ವಚ್ಛತಾ ಕೆಲಸದಲ್ಲಿ ತೊಡಗಿದ್ದಾರೆ.