ಚೆನ್ನೈ: ಕಾಲಿವುಡ್ ನಟ ಕಮಲ್ ಹಾಸನ್ ಅವರು ಎರಡು ವಾರಗಳ ಬಳಿಕ ಕೊರೊನಾ ವೈರಸ್‍ನಿಂದ ಚೇತರಿಸಿಕೊಂಡು ಇಂದು ಚೆನ್ನೈನ ಶ್ರೀ ರಾಮಚಂದ್ರ ವೈದ್ಯಕೀಯ ಕೇಂದ್ರದಿಂದ ಡಿಸ್ಚಾರ್ಜ್ ಆಗಿದ್ದಾರೆ.
Advertisement
ಕಮಲ್ ಹಾಸನ್ ಆಸ್ಪತ್ರೆಯಿಂದ ಹೊರಬರುತ್ತಿರುವ ಫೋಟೋಗಳು ಮತ್ತು ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕಮಲ್ ಹಾಸನ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಕುರಿತ ಮಾಹಿತಿಯನ್ನು ತಮ್ಮ ಟ್ವಿಟ್ಟರ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕೊಹ್ಲಿ ಪುತ್ರಿಯನ್ನು ರೇಪ್ ಮಾಡ್ತಿನಿ ಅಂದಿದ್ದ ಐಐಟಿ ಪದವೀಧರನಿಗೆ ಜಾಮೀನು
Advertisement
Advertisement
ನವೆಂಬರ್ 22 ರಂದು ಕಮಲ್ ಹಾಸನ್ ಅವರಿಗೆ ಕೊರೊನಾ ವೈರಸ್ ದೃಢಪಟ್ಟ ನಂತರ ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನವೆಂಬರ್‍ನಲ್ಲಿ ಕಮಲ್ ಹಾಸನ್ ಅವರು ಯುಎಸ್‍ನ ಚಿಕಾಗೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು. ನಂತರ ಹಿಂದಿರುಗಿದ ಬಳಿಕ ಅವರಿಗೆ ಸ್ವಲ್ಪ ಕೆಮ್ಮು ಕಾಣಿಸಿಕೊಂಡಿತ್ತು. ಅವರು ಎರಡು ವಾರಗಳ ಕಾಲ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿದ್ದರು. ಇದನ್ನೂ ಓದಿ: ನಟ ಕಮಲ್ ಹಾಸನ್‍ಗೆ ಕೊರೊನಾ ಸೋಂಕು ದೃಢ
Advertisement
முன்னெச்சரிக்கைகள் முடிந்தவரை காக்கும். அவற்றையும் மீறி சுகம் கெட்டால், நாம் எடுத்த நடவடிக்கைகளே நம்மை விரைவில் குணப்படுத்தவும் கூடும். தொற்றுத் தாக்கியும் விரைந்து மீண்டிருக்கிறேன். எத்தனை உள்ளங்கள் என்னலம் சிந்தித்தன என்றெண்ணியெண்ணி மகிழ்ந்து இருக்கிறேன். pic.twitter.com/IScdLsBjOL
— Kamal Haasan (@ikamalhaasan) December 4, 2021
ಇಂದು ಕಮಲ್ ಹಾಸನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮನೆಗೆ ಹೋಗುವ ಮುನ್ನ ಆಸ್ಪತ್ರೆಯ ಹೊರಗೆ ತಮಗೆ ಚಿಕಿತ್ಸೆ ನೀಡಿದ ವೈದ್ಯರೊಂದಿಗೆ ಫೋಟೋ ತೆಗೆಸಿಕೊಂಡರು. ಇದೀಗ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳು ಸಾಧ್ಯವಾದಷ್ಟು ನಮ್ಮನ್ನು ರಕ್ಷಿಸುತ್ತದೆ. ಅದನ್ನು ಮೀರಿ ಅಸ್ವಸ್ಥರಾದರೆ, ನಾವು ತೆಗೆದುಕೊಳ್ಳುವ ಕ್ರಮ ನಮ್ಮನ್ನು ತ್ವರಿತವಾಗಿ ಗುಣಪಡಿಸಬಹುದು. ನಾನು ಸದ್ಯ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.