ಕಮಲ್ ಹಾಸನ್ (Kamal Haasan) ನಟನೆಯ ಬಹುನಿರೀಕ್ಷಿತ ಇಂಡಿಯನ್ -2 (Indian 2) ಸಿನಿಮಾ ಜೂನ್‌ನಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ. ಹೀಗಾಗಿ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿದೆ. ಸದ್ಯ ‘ಇಂಡಿಯನ್ 2’ ಶೂಟಿಂಗ್ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಾರಂಭವಾಗಿವೆ.
Advertisement
ಇಂಡಿಯನ್ ಸೀಕ್ವೆಲ್‌ಗೆ ಎಸ್.ಶಂಕರ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವು 1996ರ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗವಾಗಿದೆ. ಚಿತ್ರವನ್ನು ಥಿಯೇಟರ್‌ನಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
Advertisement
Advertisement
ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜೊತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.
Advertisement
ಎಸ್. ಶಂಕರ್ ನಿರ್ದೇಶನದಲ್ಲಿ ‘ಇಂಡಿಯನ್ 2’ ಸಿನಿಮಾ ಮೂಡಿ ಬರುತ್ತಿದ್ದು, ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.