ಕ್ಷಮೆ ಕೇಳದ ಕಮಲ್ ಹಾಸನ್‌ಗೆ ಬ್ಯಾನ್ ಬಿಸಿ..!

Public TV
1 Min Read
kamal haasan

‘ತಮಿಳು ಭಾಷೆಯಿಂದ ಕನ್ನಡ ಹುಟ್ಟಿದ್ದು’ ಎಂದು ಹೇಳಿಕೆ ನೀಡಿಲ್ಲದೇ ತಪ್ಪೇ ಮಾಡಿಲ್ಲ, ಕ್ಷಮೆ ಕೇಳಲ್ಲ ಎಂದು ಪಟ್ಟು ಹಿಡಿರೋ ಕಮಲ್ ಹಾಸನ್‌ಗೆ (Kamal Haasan) ತಕ್ಕ ಪಾಠ ಕಲಿಸಲು ಕನ್ನಡಪರ ಸಂಘಟನೆ ಮುಂದಾಗಿದೆ. ಇದರಿಂದ ಜೂನ್ 5ರಂದು ರಿಲೀಸ್‌ಗೆ ಸಜ್ಜಾಗಿರುವ ‘ಥಗ್ ಲೈಫ್’ ಚಿತ್ರದ ಪ್ರದರ್ಶನಕ್ಕೆ ಬ್ಯಾನ್ ಬಿಸಿ ತಟ್ಟಿದೆ. ಇದನ್ನೂ ಓದಿ:ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್

Kamal Haasan 1ಕನ್ನಡಿಗರಿಗೆ ಕ್ಷಮೆಯಾಚಿಸಲು ಕಮಲ್ ಹಾಸನ್‌ಗೆ ಕೊಟ್ಟ ಗಡುವು ಮುಗಿದಿದೆ. ಕರ್ನಾಟಕದಲ್ಲಿ 100ಕ್ಕೂ ಹೆಚ್ಚು ಸ್ಕ್ರಿನ್‌ಗಳಲ್ಲಿ ರಿಲೀಸ್‌ಗೆ ರೆಡಿಯಿರುವ ‘ಥಗ್ ಲೈಫ್’ (Thug Life) ಚಿತ್ರ ಪ್ರದರ್ಶನ ಮಾಡದಂತೆ ಥಿಯೇಟರ್‌ಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಇತರ ಕನ್ನಡಪರ ಸಂಘಟನೆಗಳು ಎಚ್ಚರಿಕೆ ನೀಡಿವೆ. ಒಂದು ವೇಳೆ ಚಿತ್ರ ಪ್ರದರ್ಶನಕ್ಕೆ ಮುಂದಾದರೆ ಥಿಯೇಟರ್‌ಗೆ ಬೆಂಕಿ ಹಚ್ಚೋದಾಗಿ ಎಚ್ಚರಿಕೆ ನೀಡಿವೆ. ಇದನ್ನೂ ಓದಿ:ತಪ್ಪು ಮಾಡಿದ್ಮೇಲೆ ಕ್ಷಮೆ ಕೇಳೋದ್ರಲ್ಲಿ ತಪ್ಪೇನಿದೆ- ಕಮಲ್ ಹಾಸನ್ ಹೇಳಿಕೆಗೆ ರಚಿತಾ ರಾಮ್ ಕಿಡಿ

KamalHaasanಕಮಲ್ ನಟನೆ, ನಿರ್ಮಾಣದ ‘ಥಗ್ ಲೈಫ್’ ಚಿತ್ರದ ಹಂಚಿಕೆಯ ಹಕ್ಕನ್ನು ಪಡೆದಿದ್ದ ವೆಂಕಟೇಶ್ ಹಣ ವಾಪಸ್ ಕೊಡಲು ಮುಂದಾಗಿದ್ದಾರೆ. ರಿಲೀಸ್‌ಗೆ ಅಡ್ಡಿಯಾದ್ರೂ ಪರ್ವಾಗಿಲ್ಲ ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ ಎಂದ ಕಮಲ್ ಈಗಲಾದ್ರು ತಪ್ಪು ಅರಿತು ಕ್ಷಮೆಯಾಚಿಸುತ್ತಾರಾ ಎಂದು ಕಾದುನೋಡಬೇಕಿದೆ.

kamal haasanನಿನ್ನೆ (ಮೇ 30) ಚೆನ್ನೈನಲ್ಲಿ ಕಮಲ್ ಹಾಸನ್ ಮಾತನಾಡಿ, ಕ್ಷಮೆ ಕೇಳಲ್ಲ ಎಂದು ಹೇಳಿ ಮತ್ತೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದು ಪ್ರಜಾಪ್ರಭುತ್ವ. ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳದ ಮೇಲಿನ ನನ್ನ ಪ್ರೀತಿ ನಿಜ. ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನನ್ನಿಂದ ತಪ್ಪಾಗಿದ್ರೆ ಕ್ಷಮೆ ಕೇಳುವೆ, ನನ್ನಿಂದ ತಪ್ಪು ಆಗಿಲ್ಲ. ನನ್ನ ನಿರ್ಧಾರಕ್ಕೆ ಬದ್ಧವಾಗಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದರು.

ಯಾವುದೇ ಬೆದರಿಕೆ, ಎಚ್ಚರಿಕೆಗೆ ನಾನು ಹೆದರುವುದಿಲ್ಲ. ಕಾನೂನು ಹಾಗೂ ನ್ಯಾಯದ ಮೇಲೆ ನಂಬಿಕೆ ಇಟ್ಟಿದ್ದೇನೆ ಎಂದಿದ್ದರು.

Share This Article