ಚೆನ್ನೈ: ತಮಿಳುನಾಡಿನ ಈರೋಡ್ ಪೂರ್ವ ಉಪಚುನಾವಣೆಯಲ್ಲಿ (Erode East Bypolls) ಕಾಂಗ್ರೆಸ್-ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿ ಇವಿಕೆಎಸ್ ಇಳಂಗೋವನ್ (EVKS Elangovan) ಅವರಿಗೆ ಬೆಂಬಲ ಸೂಚಿಸಿರುವ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ (Kamal Haasan), ಕಾಂಗ್ರೆಸ್ ನಿಂದ ಸಂಸದ ಟಿಕೆಟ್ ಏಕೆ ನಿರೀಕ್ಷಿಸಬಾರದು ಎಂದು ಪ್ರಶ್ನಿಸಿದ್ದಾರೆ.
ಈರೋಡ್ ಪೂರ್ವ ಉಪಚುನಾವಣೆಯಲ್ಲಿ ತಮ್ಮ ಪಕ್ಷ ಮಕ್ಕಳ್ ನೀಧಿ ಮೈಯಂ (MNM) ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡಲಿದೆ ಎಂದು ಕಮಲ್ ಘೋಷಿಸಿದ್ದಾರೆ. ಈ ವೇಳೆ `ಕಾಂಗ್ರೆಸ್‌ನಿಂದ (Congress) ಸಂಸದ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದೀರಾ?’ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ `ರಾಷ್ಟ್ರದ ಹಿತಕ್ಕಾಗಿ ನಾನೇಕೆ ಆಗಬಾರದು? ದೇಶದ ಹಿತಕ್ಕಾಗಿಯೇ ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ’ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
Advertisement
ಇಳಂಗೋವನ್ ಅವರು ಜನವರಿ 23 ರಂದು ಕಮಲ್ ಹಾಸನ್ ಅವರನ್ನು ಭೇಟಿಯಾಗಿ ಉಪಚುನಾವಣೆಗೆ ಬೆಂಬಲ ಕೋರಿದ ನಂತರ ಈ ಬೆಳವಣಿಗೆ ನಡೆದಿದೆ. ಎಂಎನ್‌ಎಂ ಕಾರ್ಯಕಾರಿ ಸದಸ್ಯರೊಂದಿಗೆ ಚರ್ಚಿಸಿದ ನಂತರ ಕಾಂಗ್ರೆಸ್ ಅಭ್ಯರ್ಥಿಯನ್ನ ಬೆಂಬಲಿಸುವ ನಿರ್ಧಾರ ಪ್ರಕಟಿಸಿದ್ದಾರೆ. ಇದನ್ನೂ ಓದಿ: ಡಾರ್ಕ್‌ನೆಟ್ ಬಳಸಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನ- ರಣಾಂಗಣವಾದ ವಿವಿ ಕ್ಯಾಂಪಸ್
Advertisement
ಬಳಿಕ ಮಾತನಾಡಿರುವ ಅವರು, ಈರೋಡ್ ಪೂರ್ವ ಉಪಚುನಾವಣೆಯಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಯನ್ನು ಬೆಂಬಲಿಸಲು ಪಕ್ಷದ ಕಾರ್ಯಕಾರಿ ಸದಸ್ಯರು ಸರ್ವಾನುಮತದಿಂದ ನಿರ್ಧರಿಸಿದ್ದಾರೆ. ಇದು ಪ್ರಸ್ತುತ ನಿರ್ಧಾರವಾಗಿದೆ. 2024ರ ಸಾರ್ವತ್ರಿಕ ಚುನಾವಣೆಯ ಬಗ್ಗೆ ಇನ್ನೂ ಒಂದು ವರ್ಷ ಸಮಯ ಇದೆ ಎಂದು ಹೇಳಿದ್ದಾರೆ.
Advertisement
ನಾನು ಈ ಸಂದರ್ಭವನ್ನು ರಾಷ್ಟ್ರದ ಪ್ರಾಮುಖ್ಯತೆ ಎಂದು ಕರೆದಿದ್ದೇನೆ. ರಾಷ್ಟ್ರದ ಹಿತದೃಷ್ಟಿಯಿಂದ ಕಾಂಗ್ರೆಸ್ ಬೆಂಬಲಿಸುವ ನಿರ್ಧಾರ ತೆಗೆದುಕೊಂಡಿದ್ದೇನೆ. ಕೆಲವೊಮ್ಮೆ ರಾಷ್ಟ್ರದ ಪ್ರಾಮುಖ್ಯತೆ ವಿಷಯ ಬಂದಾಗ ಪಕ್ಷದ ಸಿದ್ಧಾಂತಗಳನ್ನ ಬಿಡಬೇಕಾಗುತ್ತದೆ. ಅದಕ್ಕೆ ಜನರು ಪ್ರಾಥಮಿಕರಾಗಿರುತ್ತಾರೆ ಎಂದು ತಿಳಿಸಿದ್ದಾರೆ.
ಕಳೆದ ತಿಂಗಳು ದೆಹಲಿಯಲ್ಲಿ ನಡೆದ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯಲ್ಲೂ ಕಮಲ್ ಹಾಸನ್, ರಾಹುಲ್ ಗಾಂಧಿ ಅವರೊಂದಿಗೆ ಪಾಲ್ಗೊಂಡಿದ್ದರು. ಇದನ್ನೂ ಓದಿ: PFI Ban: ಬೆಂಗಳೂರಿಗೆ ಟ್ರಿಬ್ಯೂನಲ್ ಟೀಂ – ಪಿಎಫ್‍ಐ ಪರ-ವಿರೋಧ ದೂರು ನೀಡಲು ಅವಕಾಶ
ಈರೋಡ್ (ಪೂರ್ವ) ವಿಧಾನಸಭಾ ಕ್ಷೇತ್ರಕ್ಕೆ ಫೆಬ್ರವರಿ 27 ರಂದು ನಡೆಯಲಿರುವ ಉಪಚುನಾವಣೆಗೆ ತಮಿಳುನಾಡು ಕಾಂಗ್ರೆಸ್ ಸಮಿತಿ (ಟಿಎನ್‌ಸಿಸಿ) ಮಾಜಿ ಮುಖ್ಯಸ್ಥ ಇವಿಕೆಎಸ್ ಇಳಂಗೋವನ್ ಅವರನ್ನು ಪಕ್ಷದ ಅಭ್ಯರ್ಥಿ ಎಂದು ಕಾಂಗ್ರೆಸ್ ಭಾನುವಾರ ಘೋಷಿಸಿತು.
ಇಳಂಗೋವನ್ ಯಾರು?: 1985 ರಲ್ಲಿ ಸತ್ಯಮಂಗಲಂ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿದ್ದ ಇಳಂಗೋವನ್, 2004ರಲ್ಲಿ ಲೋಕಸಭೆಗೆ ಆಯ್ಕೆಯಾದರು. ಅಲ್ಲಿ ಜವಳಿ ಖಾತೆಯ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದರು. ನಂತರ 2014 ರಿಂದ 2017ರ ವರೆಗೆ ತಮಿಳುನಾಡು ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. 2019ರ ಲೋಕಸಭೆ ಚುನಾವಣೆಯಲ್ಲಿ ತೇಣಿ ಕ್ಷೇತ್ರದಿಂದ ಸ್ಪರ್ಧಿಸಿ ಎಐಎಡಿಎಂಕೆಯ ಪಿ.ರವೀಂದ್ರನಾಥ್ ಕುಮಾರ್ ವಿರುದ್ಧ ಪರಾಭವಗೊಂಡಿದ್ದರು.
ಮುಂದಿನ ಫೆಬ್ರವರಿ 27 ರಂದು ತಮಿಳುನಾಡಿನ ಈರೋಡ್ (ಪೂರ್ವ) ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಮಾರ್ಚ್ 2 ರಂದು ಮತ ಏಣಿಕೆ ಕಾರ್ಯ ನಡೆಯಲಿದೆ. ಇದೇ ತಿಂಗಳ ಜನವರಿ 31 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಫೆಬ್ರವರಿ 7ರಂದು ಕೊನೆಯದಿನವಾಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k