ಕರ್ನಾಟಕದ ಹಿಜಬ್ ವಿವಾದ ತಮಿಳುನಾಡಿಗೆ ಬರುವುದು ಬೇಡ: ಕಮಲ್ ಹಾಸನ್

Public TV
1 Min Read
vishwaroopam 2 kamal haasan 759

ಚೆನ್ನೈ: ಹಿಜಬ್ ವಿವಾದ ಇದೀಗ ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಈ ವಿಚಾರವಾಗಿ ನಟ, ನಟಿಯರು ಗಣ್ಯರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ನಿಲುವನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ವಿಚಾರವಾಗಿ ನಟ ಹಾಗೂ ಮಕ್ಕಳ ನಿಧಿ ಮಯಂ (ಎಂಎನ್‍ಎಂ) ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ಕರ್ನಾಟಕದಲ್ಲಿ ಹಿಜಬ್ ವಿವಾದ ಅಶಾಂತಿ ಹುಟ್ಟುಹಾಕುತ್ತಿದೆ. ವಿದ್ಯಾರ್ಥಿಗಳ ಮಧ್ಯೆ ಧಾರ್ಮಿಕ ವಿಷದ ಗೋಡೆ ನಿರ್ಮಾಣ ಮಾಡಲಾಗುತ್ತಿದೆ. ಕರ್ನಾಟಕದ ವಿವಾದ ತಮಿಳುನಾಡಿಗೆ ಬರುವುದು ಬೇಡ. ಪ್ರಗತಿಪರ ಶಕ್ತಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಹಿಳೆಯರ ಬಟ್ಟೆ ನೋಡಿ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ: ರೇಣುಕಾಚಾರ್ಯ

ಕರ್ನಾಟಕದಲ್ಲಿ ಹಿಜಬ್ ಧರಿಸಿ ಕಾಲೇಜು ಕ್ಯಾಂಪಸ್ ಒಳಗೆ, ಕ್ಲಾಸ್‍ರೂಮ್‍ನೊಳಗೆ ಬರಬೇಡಿ ಎಂದು ಹೇಳಿದ್ದಕ್ಕೆ ಮುಸ್ಲಿಂ ಹುಡುಗಿಯರು ಪ್ರತಿಭಟನೆ ಶುರುವಿಟ್ಟುಕೊಂಡಿದ್ದಾರೆ. ಅದಕ್ಕೆ ಪ್ರತಿಯಾಗಿ ಹಿಂದೂ ಸಮುದಾಯದವರು ಕೇಸರಿಶಾಲು ಹಾಕಿಕೊಂಡು ಬರುತ್ತಿದ್ದಾರೆ. ಅವರು ಕ್ಲಾಸ್‍ರೂಂನಲ್ಲೂ ಧರ್ಮಾಚರಣೆ ಮಾಡುತ್ತಾರೆ ಎಂದಾದರೆ, ನಾವೂ ನಮ್ಮ ಧರ್ಮಾಚರಣೆ ಮಾಡುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಒಟ್ಟಿನಲ್ಲಿ ಇದೀಗ ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದೆ.

ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಕಾಲೇಜುಗಳಲ್ಲಿ ನಡೆಯುತ್ತಿರುವ ಹಿಜಾಬ್-ಕೇಸರಿ ಶಾಲು ಸಂಘರ್ಷ ಹಿಂಸಾಚಾರಕ್ಕೆ ತಿರುಗಿದ್ದು, ಮಂಗಳವಾರ ರಾಜ್ಯದ 18 ಜಿಲ್ಲೆಗಳ 54ಕ್ಕೂ ಹೆಚ್ಚು ಕಾಲೇಜುಗಳಲ್ಲಿ ವಿವಾದ ಭುಗಿಲೆದ್ದಿದ್ದು. ಈ ಪೈಕಿ 4 ಜಿಲ್ಲೆಗಳ 6 ಕಾಲೇಜುಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ವಿದ್ಯಾರ್ಥಿಗಳ ಗುಂಪು ಘರ್ಷಣೆ, ಕಲ್ಲು ತೂರಾಟ ನಡೆಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *