ಕಮಲ್ ಹಾಸನ್ (Kamal Haasan) ಕನ್ನಡ ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ತೆಲುಗು ನಟ ನ್ಯಾಚುರಲ್ ಸ್ಟಾರ್ (Natural Star Nani) ನಾನಿ ಸಾಕು ಸರ್ ಎಂದು ಬರೆದು ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ.
ತಮಿಳಿನಿಂದಲೇ ಕನ್ನಡ ಹುಟ್ಟಿದ್ದು ಎಂಬ ಕಮಲ್ ಹಾಸನ್ ಹೇಳಿಕೆಗೆ ಇದೀಗ ರಾಜ್ಯದಲ್ಲಿ ಮಾತ್ರವಲ್ಲದೇ ಹೊರರಾಜ್ಯದಲ್ಲಿಯೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಸದ್ಯ ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ನಾನಿ, ಸಾಕು ಸರ್ ಸಾಕು ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ಕನ್ನಡದ ಬಗ್ಗೆ ಕಮಲ್ ಹಾಸನ್ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
ಸಾಕು ಸರ್ ಎಂದು ಬರೆದುಕೊಳ್ಳುವ ಮೂಲಕ ಭಾಷಾ ವಿವಾದವನ್ನು ಇಲ್ಲಿಗೆ ನಿಲ್ಲಿಸಿಬಿಡಿ ಎಂಬರ್ಥದಲ್ಲಿ ತಿಳಿಸಿದ್ದಾರೆ. ಇದಕ್ಕೂ ಮುನ್ನ ಈ ಕುರಿತು ಪ್ರತಿಕ್ರಿಯೆ ನೀಡಿದ ನಟ ಶಿವರಾಜಕುಮಾರ್ (ShivarajKumar) ಬರೀ ಬಾಯಿಯಲ್ಲಿ ಮಾತ್ರ ಕನ್ನಡ ಕನ್ನಡ ಅನ್ನಬಾರದು. ಕನ್ನಡಕ್ಕಾಗಿ ನಾನು ಹೋರಾಟ ಮಾಡುತ್ತೇನೆ, ಕನ್ನಡಕ್ಕಾಗಿ ನಾನು ಸಾಯುತ್ತೇನೆ. ಕನ್ನಡ ಅಂತೀರಾ, ಸ್ಟಾರ್ ನಟರಿಗೆ ಮಾತ್ರ ಬೆಂಬಲಿಸೋದು. ಹೊಸಬರನ್ನೂ ಕೂಡ ಬೆಳೆಸಬೇಕು. ಕಮಲ್ ಹಾಸನ್ ಅವರಿಗೆ ಇದೆಲ್ಲ ಗೊತ್ತಾಗುತ್ತದೆ. ಅವರೇ ಅದನ್ನು ಸರಿ ಮಾಡಿಕೊಳ್ಳುತ್ತಾರೆ ಎಂದು ಹೇಳಿದ್ದರು.
ಏನಿದು ವಿವಾದ?
ಮೇ 27ರಂದು `ಥಗ್ ಲೈಫ್’ (Thug Life) ಸಿನಿಮಾದ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಆಗಮಿಸಿತ್ತು. ಸಿನಿಮಾದ ನಾಯಕ ಕಾಲಿವುಡ್ ನಟ ಕಮಲ್ ಹಾಸನ್ ಅವರು ಕೂಡ ಆಗಮಿಸಿದ್ದರು. ಈ ವೇಳೆ ಕಮಲ್ ಹಾಸನ್ `ತಮಿಳಿನಿಂದ ಕನ್ನಡ ಹುಟ್ಟಿದ್ದು’ ಎಂದು ಹೇಳಿಕೆ ನೀಡುವ ಮೂಲಕ ವಿವಾದ ಹುಟ್ಟುಹಾಕಿದ್ದರು.ಇದನ್ನೂ ಓದಿ: ರಾಮಾಯಣ ಸಿನಿಮಾದ ಯಶ್ ಪಾತ್ರದ ಮೊದಲ ಆಕ್ಷನ್ ಸೀಕ್ವೆನ್ಸ್ ಲುಕ್ ರಿವಿಲ್